ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.
ಗೊಡ್ಡು, ಮುದಿಯಾದ ಹಸುಗಳನ್ನು RSSನವರು ತಮ್ಮ ಮನೆಗೆ ಕರೆದುಕೊಂಡು ಹೋಗುತ್ತಾರಾ: ಸಿದ್ದರಾಮಯ್ಯ
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಸಭಾಂಗಣದಲ್ಲಿ ಆರೋಗ್ಯ(Health) ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಸಚಿವರು, 'ಈಗ ವಿಶ್ವದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಭಾರತದಲ್ಲಿ ಕೊರೊನಾ ನಿಯಂತ್ರಣ ಯಶಸ್ವಿಯಾಗಿ ನಡೆಯುತ್ತಿದೆ. ಕೊರೊನಾ ಸೋಂಕಿಗೆ ಲಸಿಕೆ ಕಂಡು ಹಿಡಿಯಲಾಗುತ್ತಿದ್ದು, ಮೊದಲ ಹಂತದಲ್ಲಿ ಸುಮಾರು 10 ಕೋಟಿ ಜನರಿಗೆ ಇದರ ಪ್ರಯೋಜನ ದೊರೆಯಲಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಇದರ ಜವಾಬ್ದಾರಿಯನ್ನ ನೋಡಿಕೊಳ್ಳುತ್ತಿದ್ದು, ದೇಶದ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ' ಎಂದರು.