KS Eshwarappa: ಸಿಎಂ ಬಿಎಸ್ ವೈ ವಿರುದ್ಧವೇ ಅರುಣ್ ಸಿಂಗ್ ಗೆ ದೂರು ನೀಡಿದ ಈಶ್ವರಪ್ಪ!
ಪಕ್ಷದ ಹಿರಿಯ ಸಚಿವನಾಗಿರುವ ತಮಗೆ ಇದರಿಂದ ನೋವಾಗಿದೆ ಕೆ.ಎಸ್.ಈಶ್ವರಪ್ಪ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು, ತಮ್ಮ ಇಲಾಖೆಯ ಕೆಲಸಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾನೂನು ಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ದೆಹಲಿಯ ವರಿಷ್ಠರಿಗೆ ದೂರು ನೀಡಿದ್ದಾರೆ.
ಕಳೆದ ಒಂದುವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವನಾಗಿ ಕೆಲಸ ಮಾಡುತ್ತಿರುವ ತಮ್ಮ ಗಮನಕ್ಕೆ ಬಾರದಂತೆ ಸಿಎಂ ಯಡಿಯೂರಪ್ಪ(BS Yediyurappa) ಇಲಾಖೆಯ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದ ಹಿರಿಯ ಸಚಿವನಾಗಿರುವ ತಮಗೆ ಇದರಿಂದ ನೋವಾಗಿದೆ ಎಂದಿದ್ದಾರೆ.
BPL Card: 'ಬಿಪಿಎಲ್ ಕಾರ್ಡ್' ಪಡೆಯಲು ಯಾರು ಅನರ್ಹರು? ಸರ್ಕಾರದಿಂದ ಪಟ್ಟಿ ಬಿಡುಗಡೆ!
ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾಗಿರುವ 1200 ಕೋಟಿ ರೂ.ಗೆ ಸಂಬಂಧಿಸಿದಂತೆ ಕಾನೂನು ಮೀರಿ ಸುಖಾಸುಮ್ಮನೆ ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಆರ್ಡಿಪಿಆರ್ ಇಲಾಖೆಯ ಅನುದಾನವನ್ನು ನೇರವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಂಚಿದ್ದಾರೆ ಎಂದು ರಾಜ್ಯಪಾಲ ವಜುಭಾಯಿವಾಲಾ(Governor Vajubhai Vala) ಅವರನ್ನು ಭೇಟಿ ಮಾಡಿ ಈಶ್ವರಪ್ಪ ಅವರು ಲಿಖಿತ ದೂರು ನೀಡಿದ್ದಾರೆ.
KRDCL: ವಾಹನ ಸವಾರರಿಗೆ ಬಿಗ್ ಶಾಕ್: ಇನ್ಮುಂದೆ 'ರಾಜ್ಯ ಹೈವೆಗಳಲ್ಲೂ ಟೋಲ್ ಫೀಸ್ ವಸೂಲಿ'!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.