ಬೆಂಗಳೂರು: ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆಗೆ ಪೆಟ್ಟಾಗಿರುವ ಕಾರಣ ಬೆಂಗಳೂರು ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶತಾಯುಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸಾಲು ಮರದ ತಿಮ್ಮಕ್ಕ ಅವರನ್ನ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಮಾನ್ಯತೆ ನವೀಕರಣಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ


ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಸಾಕಿರುವ ಮಹಾತಾಯಿಯಾದ ನಿಮಗೆ ಇಡೀ ಕರುನಾಡಿನ ಜನರ ಅಷ್ಟೇ ಅಲ್ಲದೆ ವಿಶ್ವ ಪರಿಸರ ಪ್ರೇಮಿಗಳ ದಿವ್ಯ ಶುಭ ಹಾರೈಕೆ ಇದೆ. ನೀವು ಶೀಘ್ರ ಗುಣಮುಖರಾಗುತ್ತೀರಿ ಎಂದು ಹೇಳಿದರು.


‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀವು ಬೇಗ ಗುಣಮುಖರಾಗಿ ವೃಕ್ಷಪ್ರೇಮಿಗಳಿಗೆ ಮಾರ್ಗದರ್ಶನ ಮಾಡಬೇಕು, ಪ್ರೇರಣೆ ನೀಡಬೇಕು ಎಂದು ತಿಳಿಸಿದ್ದಾರೆ ‘ಎಂದು ಈಶ್ವರ ಖಂಡ್ರೆ ಈ ಸಂದರ್ಭದಲ್ಲಿ ತಿಮ್ಮಕ್ಕ ಅವರಿಗೆ ತಿಳಿಸಿದರು.


ಇದನ್ನೂ ಓದಿ: ಟಿ20 ಕ್ರಿಕೆಟ್’ನಲ್ಲಿ ಈ ವರ್ಷ ಅತಿ ಹೆಚ್ಚು ಶುಲ್ಕ ಪಡೆದ ಕ್ರಿಕೆಟಿಗ ಯಾರು? ಕೊಹ್ಲಿ, ರೋಹಿತ್ ಅಲ್ಲವೇ ಅಲ್ಲ


ಆಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ತಿಮ್ಮಕ್ಕ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಈಶ್ವರ ಖಂಡ್ರೆ ಹೆಚ್ಚಿನ ಕಾಳಜಿ ವಹಿಸುವಂತೆ ವೈದ್ಯರಿಗೆ ಸೂಚಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ