ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬಬಹುದು ಎಂಬ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಮುಂದೂಡುವ ಸುಳಿವನ್ನು ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ(K.S.Eshwarappa) ನೀಡಿದ್ದಾರೆ. ಸರ್ಕಾರ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಸಿದ್ದವಿದೆ. ಆದರೆ ಎಲ್ಲ ರಾಜಕೀಯ ಪಕ್ಷಗಳು ಚುನಾವಣೆ ಮುಂದೂಡಬೇಕೆಂದು ಮನವಿ ಮಾಡುತ್ತಿದ್ದಾರೆ. ಕೊರೊನಾದಂತಹ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಸರಿಯೇ ಎಂಬ ಪ್ರಶ್ನೆ ಮಾಡುತ್ತಿದ್ದಾರೆ.
ಏಳು ಖಾಲಿ ಸಚಿವ ಸ್ಥಾನಕ್ಕೆ 10 ಶಾಸಕರ ಲಾಬಿ: ಇಲ್ಲಿದೆ ಸಚಿವಾಕಾಂಕ್ಷಿಗಳ ಪಟ್ಟಿ..!
ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಚುನಾವಣೆ ಮುಂದೂಡುವುದು ಸರಿಯಾದ ಕ್ರಮ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ಕೆಲವು ಜಿಲ್ಲೆಗಳಲ್ಲಿ ಹೆಚ್ಚಿದೆ. ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಜನಸಂದಣೆ ಹೆಚ್ಚಾಗಿರುತ್ತದೆ. ನಿಯಂತ್ರಣಕ್ಕೆ ಬಂದಿರುವ ಕೋವಿಡ್ ಮತ್ತೆ ಎಲ್ಲಿ ಹೆಚ್ಚಾಗಬಹುದೋ ಎಂಬ ಆತಂಕವನ್ನು ವ್ಯಕ್ತಪಡಿಸಿದರು.
ಡಿಕೆಶಿ ಪುತ್ರಿ ಐಶ್ವರ್ಯ ನಿಶ್ಚಿತಾರ್ಥಕ್ಕೆ ಮುಹೂರ್ತ ಫಿಕ್ಸ್..!
ದೆಹಲಿ ಸೇರಿದಂತೆ ಬೇರೆ ಬೇರೆ ಭಾಗಗಳಲ್ಲೂ ಕೊರೊನಾ ಮೂರನೆ ಅಲೆ ಸೃಷ್ಟಿ ಆಗಬಹುದೆಂದು ತಜ್ಞರು ಹೇಳುತ್ತಿದ್ದಾರೆ. ಒಂದೊಂದು ಗ್ರಾಮದಲ್ಲಿ ನಾಲ್ಕೈದು ಜನ ಸ್ಪರ್ಧೆ ಮಾಡುವುದರಿಂದ ಜನಸಂದಣಿ ಹೆಚ್ಚಾಗುತ್ತದೆ. ಗ್ರಾಪಂ ಚುನಾವಣೆಯಲ್ಲಿ ಯಾವ ನಿಯಮಗಳನ್ನು ಪಾಲನೆ ಮಾಡುವುದಿಲ್ಲ. ಇದು ಎಲ್ಲರಿಗೂ ಗೊತ್ತಿರುವ ವಿಷಯ ಎಂದರು.
ಮಹಾರಾಷ್ಟ್ರ ಡಿಸಿಎಂಗೆ 'ಖಡಕ್ ಎಚ್ಚರಿಕೆ' ನೀಡಿದ ಸಿಎಂ ಬಿಎಸ್‍ವೈ!
ಹೈಕೋರ್ಟ್ ಮೂರು ವಾರಗಳಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆಗೆ ದಿನಾಂಕವನ್ನು ನಿಗದಿ ಪಡಿಸಬೇಕೆಂದು ಸ್ಪಷ್ಟವಾಗಿ ಆದೇಶ ನೀಡಿದೆ. ಆಯೋಗಕ್ಕೆ ಬೇಕಾಗಿರುವ ಸವಲತ್ತುಗಳನ್ನು ನೀಡಬೇಕೆಂದು ಸರ್ಕಾರಕ್ಕೆ ನಿರ್ದೇಶನ ಕೊಟ್ಟಿದೆ. ಹೀಗಾಗಿ ನಾವೂ ಕೂಡ ಏನೂ ಮಾಡದಂತಹ ಸ್ಥಿತಿಯಲ್ಲಿದ್ದೇವೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
BREAKING NEWS: ರಾಜ್ಯದಲ್ಲಿ 'ಹೊಸ ಜಿಲ್ಲೆ' ರಚನೆಗೆ ಸಚಿವ ಸಂಪುಟ ಒಪ್ಪಿಗೆ..!
ಹೈಕೋರ್ಟ್ ತೀರ್ಪು ನೀಡಿರುವುದನ್ನು ಯಾರದರು ಪ್ರಶ್ನಿಸಿ 'ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಹೋದರೆ' ಮಾತ್ರ ಚುನಾವಣೆಗೆ ತಡೆಯಾಜ್ಞೆ ತರಬಹುದು. ಅದನ್ನು ಹೊರತುಪಡಿಸಿದರೆ ಸರ್ಕಾರ ಚುನಾವಣೆಯನ್ನೇ ನಡೆಸಲೇಬೇಕಾದ ಸಂದಿಗ್ಗ ಸ್ಥಿತಿಯಲ್ಲಿದೆ. ಬಿಹಾರ, ಶಿರಾ, ಆರ್.ಆರ್.ನಗರದ ಚುನಾವಣೆಯಲ್ಲಿ ಮತದಾನ ಸುರಕ್ಷಿತವಾಗಿದೆ ಎಂದು ಅಂದುಕೊಂಡರೂ ನಂತರ ಕೋವಿಡ್ ಬಂದಿರುವುದನ್ನು ಎಲ್ಲರೂ ಗಮನಿಸಬೇಕು.
JOB:ಗ್ರಂಥಾಲಯಗಳ ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ನಾವು ಚುನಾವಣೆ ಮುಂದೂಡಬೇಕೆಂಬ ಭ್ರಮೆಯಲ್ಲಿ ಇಲ್ಲ. ಇದು ಸೂಕ್ತವಾದ ಸಮಯವಲ್ಲ ಎಂಬುದೇ ನಮ್ಮ ಮನವಿ. ಆಯೋಗ ಯಾವಾಗ ಬೇಕಾದರೂ ದಿನಾಂಕ ಘೋಷಣೆ ಮಾಡಿದರೆ ನಮ್ಮದೇನು ಅಭ್ಯಂತರವಿಲ್ಲ ಎಂದು ಈಶ್ವರಪ್ಪ ಸ್ಪಷ್ಟನೆ ನೀಡಿದರು. ಕೆಲವೇ ದಿನಗಳ ಮಟ್ಟಿಗೆ ಚುನಾವಣೆ ಮುಂದೂಡಿ ಎಂದು ಆಯೋಗಕ್ಕೆ ಮನವಿ ಮಾಡಲಾಗಿತ್ತು. ಇದನ್ನು ಕೆಲವರು ಪ್ರಶ್ನಿಸಿ ನ್ಯಾಯಾಲಯಕ್ಕೆ ಹೋದರು. ಈಗ ಚುನಾವಣೆ ನಡೆಸಲೇಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.