ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನ ಸೋಂಕಿನ ಪ್ರಕರಣ ಹೆಚ್ಚುತ್ತಿದ್ದು, ಎರಡನೇ ಅಲೆ ಭೀತಿ ಎದುರಾಗಿದೆ. ಹೀಗಾಗಿ ಜನಸಾಮಾನ್ಯರು ಎಚ್ಚತ್ತುಕೊಂಡು ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಿ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ.


COMMERCIAL BREAK
SCROLL TO CONTINUE READING

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು(K Sudhakar), ಆರೋಗ್ಯ ಇಲಾಖೆ, ಸಿಬ್ಬಂದಿ ನಿಮಗೆ ಲಸಿಕೆ ನೀಡಬಹುದು, ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ನಿಯಮಗಳನ್ನು ಜಾರಿಗೆ ತರಬಹುದು. ಆದರೆ ಪ್ರತಿಯೊಬ್ಬರಿಗೂ ಈ ಬಗ್ಗೆ ಜಾಗೃತಿ ಇರಬೇಕು. ಮುಂಜಾಗೃತಾ ಕ್ರಮ ಕೈಗೊಂಡು. ಜಾತ್ರೆ, ಸಮಾರಂಭಗಳಿಗೆ ಕಡಿವಾಣ ಹಾಕಬೇಕು ಎಂದರು.


BS Yediyurappa: 'ಉಪ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ'


ಸೋಂಕು(Virus) ಹೆಚ್ಚಾದಲ್ಲಿ ಸರ್ಕಾರದಿಂದ ನಿಯಂತ್ರಣ ಸಾಧ್ಯವಿಲ್ಲ. ಪಾರ್ಟಿ, ಜಾತ್ರೆ ಎಂದು ಕೊರೊನಾ ರಿಯಾಯಿತಿ ನೀಡಲ್ಲ. ಕೊರೊನಾ ನಿಯಂತ್ರಣಕ್ಕೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ತಜ್ಞರ ಸಲಹೆಯಂತೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಆದರೆ ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆಯಿಂದ ಇದ್ದು ಸಭೆ, ಸಮಾರಂಭ, ಅನಗತ್ಯ ಓಡಾಟದಿಂದ ದೂರವಿರಬೇಕು. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ಪಾಲನೆಯಾಗಬೇಕು ಎಂದು ತಿಳಿಸಿದರು.


ಹೆಚ್ಚುತ್ತಿರುವ ಕರೋನಾ ವೈರಸ್ ಪ್ರಕರಣ : ಹೊರಗುತ್ತಿಗೆ ವೈದ್ಯರು ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.