ಉಡುಪಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್‌ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ನಗರದ ಸಂತೆಕಟ್ಟೆ ಕೆ.ಜಿ. ರೋಡ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


COMMERCIAL BREAK
SCROLL TO CONTINUE READING

ಸಚಿವರ ಬೆಂಗಾವಲು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ಸಿಬ್ಬಂದಿಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆದಾಖಲಿಸಲಾಗಿದೆ.


ಬೆಂಗಾವಲು ವಾಹನದ ಎದುರು ಸಂಚರಿಸುತ್ತಿದ್ದ ಲಾರಿ ಸೂಚನೆ ನೀಡದೇ ಪಥ ಬದಲಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಅದೃಷ್ಟವಶಾತ್ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.


ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವ ಎಂಬುವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ