ರಾಯಚೂರು: ರಾಮಮಂದಿರ ನಿರ್ಮಾಣದ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾವನು..? ಬೇಕಾದ್ರೆ ಕೂಲಿ ಮಾಡುವ ವ್ಯಕ್ತಿ ಲೆಕ್ಕ ಕೇಳಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್‌ ಈಶ್ವರಪ್ಪ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ‌ ಈಶ್ವರಪ್ಪ(KS Eshwarappa), ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಗೌರವವಿಲ್ಲದೇ ರಾಮಮಂದಿರ ನಿರ್ಮಾಣದ ಸ್ಥಳವನ್ನು ವಿವಾದಿತ ಸ್ಥಳ ಎಂದಿದ್ದಾರೆ. ಅವನು ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡಬಹುದೇ, ಕೂಲಿ ಮಾಡುವ ಒಬ್ಬ ವ್ಯಕ್ತಿ ಸಹ ರಾಮಮಂದಿರಕ್ಕೆ 10 ರೂಪಾಯಿ ದೇಣಿಗೆ ನೀಡಿದ್ದಾರೆ. ಅವರು ಲೆಕ್ಕ ಕೇಳಲಿ. ಇವನ್ಯಾರು ಲೆಕ್ಕ ಕೇಳಲು ಎಂದು ಕಿಡಿಕಾರಿದ್ದಾರೆ.


Basanagouda Patil Yatnal: ಬಿ.ವೈ.ವಿಜಯೇಂದ್ರ ರಾಜ್ಯದ ಸೂಪರ್ ಸಿಎಂ, ಸಾಕ್ಷಿ ನೀಡಿದ ಯತ್ನಾಳ್!


ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ(HD Kumaraswamy) ಹಣ ನೀಡದವರ ಮನೆ ಮನೆಗೆ ಮಾರ್ಕ್‌ ಮಾಡಿದ್ದಾರೆ ಎಂದು ಹೇಳಿದ್ದಾರೆ. ರಾಯಚೂರಿನಲ್ಲೇ ಯಾರ ಮನೆಗೆ ಮಾರ್ಕ್‌ ಮಾಡಲಾಗಿದೆ ಎಂದು ತೋರಿಸಲಿ ಎಂದು ಈಶ್ವರಪ್ಪ ಸವಾಲು ಹಾಕಿದರು. ಅದಲ್ಲದೇ, ರಾಮನ ಬಗ್ಗೆ ಹಗುರವಾಗಿ ಮಾತನಾಡುವ ಪ್ರವೃತ್ತಿಯನ್ನು ಬಿಡಬೇಕು ಎಂದರು.


Uddhav Thackeray: ಮತ್ತೆ ಕನ್ನಡಿಗರ ಸ್ವಾಭಿಮಾನ ಕೆಣಕಿದ ಮಹಾ ಸಿಎಂ ಉದ್ಧವ್ ಠಾಕ್ರೆ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.