ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮೀ ಹಣ ಸದ್ಯದಲ್ಲೇ ಖಾತೆಗೆ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Gruhalakshmi Yojana: ಗೃಹಲಕ್ಷ್ಮೀ ಹಣ ಎರಡ್ಮೂರು ತಿಂಗಳಿಗೊಮ್ಮೆ ಬರುತ್ತದೆ ಎನ್ನುವುದು ತಪ್ಪು. ಸರ್ಕಾರ ಬಹುದೊಡ್ಡ ಯೋಜನೆ ಮಾಡಿದೆ. ಗೃಹಲಕ್ಷ್ಮೀ ಯೋಜನೆ ಯಾವುದೇ ಪರಿಷ್ಕರಣೆ ಇಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸ್ಪಷ್ಟನೆ 

Written by - Yashaswini V | Last Updated : Mar 7, 2025, 01:41 PM IST
  • ನಮ್ಮ ಇಲಾಖೆಗೆ ನೀಡಿದ ಅನುದಾನ ಪೈಕಿ ಯಾವುದೇ ಅನುದಾನ ಉಳಿದಿಲ್ಲ.
  • ಎಲ್ಲವೂ ಸರಿಯಾದ ರೀತಿಯಲ್ಲಿ ಖರ್ಚಾಗಿದೆ. ಶೇಕಡ 10ರಷ್ಟು ಮಾತ್ರ ಅನುದಾನ ಮಿಕ್ಕಿರಬಹುದು.
  • ಅದು ಕೂಡ ಮಾರ್ಚ್‌ 31ರೊಳಗೆ ಖರ್ಚಾಗಲಿದೆ ಎಂದು ಸಚಿವರು ಹೇಳಿದರು.
ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮೀ ಹಣ ಸದ್ಯದಲ್ಲೇ ಖಾತೆಗೆ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Gruhalakshmi Yojana: ಗೃಹಲಕ್ಷ್ಮೀ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ.  

Add Zee News as a Preferred Source

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ಗೃಹಲಕ್ಷ್ಮಿ ಯೋಜನೆಯು ಸದ್ಯ ಈಗ ಯಾವ ರೀತಿ ನಡೆದುಕೊಂಡು ಹೋಗುತ್ತಿದೆಯೇ; ಹಾಗೆಯೇ ಮುಂದುವರೆದುಕೊಂಡು ಹೋಗಲಿದೆ; ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.  

* ಅನುದಾನ ಸರಿಯಾಗಿ ಸದ್ಭಳಕೆ: 
ಕೆಲವೊಂದು ಇಲಾಖೆಗಳಲ್ಲಿ ಕಳೆದ ಬಜೆಟ್‌ ನಲ್ಲಿ ನೀಡಿದ ಹಣವೇ ಖರ್ಚಾಗುತ್ತಿಲ್ಲವೆಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌,  ನನ್ನ ಇಲಾಖೆ ಇಷ್ಟು ವರ್ಷ ಬೇರೆ ರೀತಿಯಲ್ಲಿ ಇತ್ತು. ಆದರೆ, ಈಗ ಬಹುದೊಡ್ಡ ಗಾತ್ರದ ಬಜೆಟ್‌ನ್ನು ಒಳಗೊಂಡಂತಹ ಇಲಾಖೆಯಾಗಿದೆ. ಅದರಲ್ಲೂ ಗೃಹಲಕ್ಷ್ಮೀ ಯೋಜನೆ ಬಂದಿರುವುದರಿಂದ  ಒಂದು ವರ್ಷಕ್ಕೆ ಸುಮಾರು 32 ಸಾವಿರ ಕೋಟಿ ರೂಪಾಯಿಯಷ್ಟು ಹಣವನ್ನು ಗೃಹಲಕ್ಷ್ಮೀಯವರಿಗೆ ನೀಡಲಾಗುತ್ತಿದೆ. ನಮ್ಮ ಇಲಾಖೆಗೆ ನೀಡಿದ ಅನುದಾನ ಪೈಕಿ ಯಾವುದೇ ಅನುದಾನ ಉಳಿದಿಲ್ಲ.  ಎಲ್ಲವೂ ಸರಿಯಾದ ರೀತಿಯಲ್ಲಿ ಖರ್ಚಾಗಿದೆ. ಶೇಕಡ 10ರಷ್ಟು ಮಾತ್ರ ಅನುದಾನ ಮಿಕ್ಕಿರಬಹುದು. ಅದು ಕೂಡ ಮಾರ್ಚ್‌ 31ರೊಳಗೆ ಖರ್ಚಾಗಲಿದೆ ಎಂದು ಸಚಿವರು ಹೇಳಿದರು.
 
ಇದನ್ನೂ ಓದಿ- Karnataka Budget 2025: ಮಹಿಳಾ ಸಬಲೀಕರಣಕ್ಕಾಗಿ ತಲೆ ಎತ್ತಲಿವೆ 'ಅಕ್ಕ ಕೆಫೆ& ಕ್ಯಾಂಟೀನ್', ಅಕ್ಕ ಕೋ-ಆಪರೇಟಿವ್ ಸೊಸೈಟಿ 

* ಸದ್ಯದಲ್ಲೇ ಜನವರಿ, ಫೆಬ್ರವರಿಯದು ಕ್ಲಿಯರ್‌: 
ಗೃಹಲಕ್ಷ್ಮೀ ಹಣ ಎರಡ್ಮೂರು ತಿಂಗಳಿಗೊಮ್ಮೆ ಬರುತ್ತದೆ ಎನ್ನುವುದು ತಪ್ಪು. ಸರ್ಕಾರ ಬಹುದೊಡ್ಡ ಯೋಜನೆ ಮಾಡಿದೆ. ನವೆಂಬರ್‌, ಡಿಸೆಂಬರ್‌ ತಿಂಗಳ ಹಣ ಕ್ಲೀಯರ್‌ ಆಗಿದೆ. ಜನವರಿ, ಫೆಬ್ರವರಿ ಸದ್ಯದಲ್ಲೇ ಕ್ಲಿಯರ್‌ ಆಗಲಿದೆ. ಹತ್ತ-ಹದಿನೈದು ದಿನ ಹೆಚ್ಚುಕಡಿಮೆ ಆಗಬಹುದೇನೋ ವಿನಃ ಯಾವುದೇ ಕಾರಣಕ್ಕೂ ಕ್ಲಿಯರ್‌ ಆಗದೇ ಉಳಿಯುವುದಿಲ್ಲ ಎಂದು ಹೇಳಿದರು.

* ಮಹಾರಾಷ್ಟ್ರದಲ್ಲಿ ಯೋಜನೆ ಸ್ಥಬ್ಧ: 
ನಮ್ಮ ನೆರೆಯ ಮಹಾರಾಷ್ಟ್ರ ರಾಜ್ಯವನ್ನು ನೋಡಿ, ಅಲ್ಲಿ ಚುನಾವಣೆಗೆ ಮುನ್ನ ಎರಡು ತಿಂಗಳ ದುಡ್ಡನ್ನು ಹಾಕಿದರು. ಅಲ್ಲಿನ ʻಮಾಝಿ ಲಡಕಿ ಬಹಿನ್‌ʼ ಯೋಜನೆಗೆ ಹಣನೇ ಇಲ್ಲ. ಇಲ್ಲಿ ನಮ್ಮನ್ನು ಮಾತ್ರ ಬಿಜೆಪಿಯವರು ದೊಡ್ಡದಾಗಿ ಪ್ರಶ್ನೆ ಮಾಡುತ್ತಾರೆಂದು ಖಾರವಾಗಿ ಹೇಳಿದ ಸಚಿವರು, ನಮ್ಮ ಕರ್ನಾಟಕದಲ್ಲೇ ಗೃಹಲಕ್ಷ್ಮೀ ಹಣ ಸರಿಯಾಗಿ ತಲುಪಿಸುತ್ತಿರುವುದು. ಅದೇ ಮಹಾರಾಷ್ಟ್ರದಲ್ಲಿ ಚುನಾವಣೆಗಿಂತ ಮುಂಚೆ ಅಷ್ಟೇ ಹಾಕಿದ್ದರು.  ಆದರೆ, ಚುನಾವಣೆ ನಂತರ ಯೋಜನೆ ಜಾರಿಗೊಳ್ಳದೆ ನಿಂತಿದೆ ಎಂದರು. 

* ಸಿಎಂ ಅವರಿಗೆ ಅಭಿನಂದನೆ: 
ಸಿಎಂ ಸಿದ್ದರಾಮಯ್ಯನವರದು ಇದು ಕೊನೆಯ ಬಜೆಟ್‌ ಎಂದೆಲ್ಲ ಬಿಜೆಪಿಯವರು ಹೇಳುತ್ತಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,  ನಾನಂತೂ ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುತ್ತೇನೆ; 16ನೇ ದಾಖಲೆ ಬಜೆಟ್‌ ಮಂಡಿಸಿದ್ದಾರೆ. ಕರ್ನಾಟಕದಲ್ಲಿ ಎಲ್ಲರನ್ನೂ ಒಳಗೊಂಡ ಸಮಗ್ರವಾದ ಬಜೆಟ್‌ ಮಾಡುತ್ತಿರುವುದು ವಿಶೇಷ ಎಂದು ಸಚಿವರು ತಿಳಿಸಿದರು.  
 
ಇದನ್ನೂ ಓದಿ- ಭಾಗ್ಯಲಕ್ಷ್ಮಿ ಫಲಾನುಭವಿಗಳಿಗೆ ಜಾಕ್‌ಪಾಟ್‌: ಶೀಘ್ರವೇ ಖಾತೆ ಸೇರಲಿದೆ 1 ಲಕ್ಷ ರೂ. ಹಣ 

* ಎಲ್ಲವೂ ಹೈಕಮಾಂಡ್‌ ತೀರ್ಮಾನ: 
ಸದ್ಯದಲ್ಲೇ ಸಂಪುಟ ಪುನರ್‌ ರಚನೆ ಆಗಲಿದೆ; ಇದು ಕೆಲ ಸಚಿವರಿಗೆ ಕೊನೆಯ ಬಜೆಟ್‌ ಎಂದೆಲ್ಲ ಹೇಳುತ್ತಿದ್ದಾರೆಂಬ ಸುದ್ದಿಗಾರರ ಪ್ರಶ್ನೆಗೆ ಸಚಿವರು, ಈವೊಂದು ಒಳ್ಳೆಯ ಸಂದರ್ಭದಲ್ಲಿ ಏನನ್ನೂ ಮಾತನಾಡಲು ಹೋಗುವುದಿಲ್ಲ. ಏಕೆಂದರೆ, ನಮ್ಮ ಕಾಂಗ್ರೆಸ್‌ ಪಕ್ಷದಲ್ಲಿ ಒಂದು ಶಿಸ್ತು ಇದೆ. ಏನೇ ಚರ್ಚೆ, ತೀರ್ಮಾನಗಳಿದ್ದರೂ ಅದನ್ನು ಹೈಕಮಾಂಡ್‌ ಮಾಡುತ್ತದೆ ಎಂದು ಹೇಳಿದರು.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News