ಬೆಳಗಾವಿ : ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


COMMERCIAL BREAK
SCROLL TO CONTINUE READING

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. 


6 ಸಾವಿರ ಕೋಟಿ ಮೊತ್ತದ ಎಲೆಕ್ಟ್ರೋ ಬಾಂಡ್ ಹಗರಣದಲ್ಲಿ ಸಿಲುಕಿರುವ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿನೋಟಿಫೈ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ರಾಜೀನಾಮೆ ನೀಡಲಿ, ನಂತರ ಸಿಎಂ ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದು ಸಚಿವರು ಕಿಡಿಕಾರಿದರು. 


ಇದನ್ನೂ ಓದಿ: ನಿಮಗೆ ಆಗೋದಾದ್ರೆ ಈ ಕಾಯ್ದೆ ಜಾರಿಗೆ ತನ್ನಿ... ರಾಜೀನಾಮೆ ಒತ್ತಡ ಬೆನ್ನಲ್ಲೇ ಪ್ರಧಾನಿ ಮೋದಿಗೆ ಹೀಗೊಂದು ಸವಾಲೆಸೆದ ಸಿಎಂ ಸಿದ್ದರಾಮಯ್ಯ


ರಾಜಕೀಯ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಾವೂ  ಕೂಡ ರಾಜಕೀಯ ಮಾಡುತ್ತಿದ್ದು, ಕಿವಿ ಮೇಲೆ ಹೂ ಇಟ್ಟುಕೊಂಡಿಲ್ಲ. ರಾಜಕೀಯವಾಗಿಯೇ ಉತ್ತರ ನೀಡುತ್ತೇವೆ ಎಂದು ಹೇಳಿದರು. 


ಸರ್ಕಾರದ ವಿರುದ್ಧ ಪ್ರಡ್ಯಂತ್ರ 
ಚುನಾವಣೆಗೂ ಮೊದಲು ನಾವು ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಗಿಮಿಕ್ ಎಂದು ಛೇಡಿಸಿದ್ದರು. ನಾವು ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದೆವು. ಇದನ್ನು ಸಹಿಸದ ವಿಪಕ್ಷಗಳು ಇದೀಗ ಯೋಜನೆಗಳ ಬಗ್ಗೆ, ಸರ್ಕಾರದ ಬಗ್ಗೆ ವಿನಾಕಾರಣ ಆರೋಪಗಳನ್ನು ಮಾಡುತ್ತಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. 


136 ಜನ ಕಾಂಗ್ರೆಸ್ ಶಾಸಕರಿದ್ದು, ಸರ್ಕಾರಕ್ಕೆ ಆಪತ್ತಿಲ್ಲ. ಸಿದ್ದರಾಮಯ್ಯನವರಂಥ ಧೀಮಂತ ನಾಯಕನ ನಾಯಕತ್ವ ನಮ್ಮ ಪಕ್ಷಕ್ಕಿದ್ದು, ಅವರನ್ನು ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನದ್ದಾಗಿರುತ್ತದೆ. ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿಗರು ಹಗಲುಗನಸು ಕಾಣುತ್ತಿದ್ದಾರೆ ಎಂದು ತಿಳಿಸಿದರು.


ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ನಾಯಕರು ಟೀಕಿಸುತ್ತಾರೆ. ಆದರೆ, ಜಮ್ಮು ಕಾಶ್ಮೀರ, ಹರಿಯಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನಮ್ಮ ಯೋಜನೆಗಳನ್ನೇ ಅನುಕರಣೆ ಮಾಡಿದ್ದಾರೆ. ಇದು ಅವರಿಗಿರುವ ದ್ವಂದ್ವ ನಿಲುವು. ನಮ್ಮ ಯೋಜನೆಗಳು ಕೇವಲ ಕರ್ನಾಟಕಕ್ಕಷ್ಟೆ ಅಲ್ಲ, ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. 


ಇದನ್ನೂ ಓದಿ: ನನಗೆ ನೋಟಿಸ್ ಬಂದಿಲ್ಲ, ಸ್ವಇಚ್ಛೆಯಿಂದ ಬಂದಿದ್ದೇನೆ: ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ


ಬಿಜೆಪಿಯವರಿಗೆ ಚುನಾವಣೆ ಗೆಲ್ಲುವುದಷ್ಟೇ ಕೆಲಸವಾಗಿದೆ. ನಮಗೆ ಅತಿವೃಷ್ಠಿ, ಅನಾವೃಷ್ಟಿ ಆದಾಗ ಹಣ ಕೊಡದ ಕೇಂದ್ರ ಸರ್ಕಾರ, ನಮ್ಮ ಪಾಲಿಗೆ ಜಿಎಸ್‌ಟಿ ಮೊತ್ತವನ್ನು ಕೊಡಲಿಲ್ಲ. ಕೇವಲ ರಾಜಕೀಯ ಪ್ರೇರಿತವಾಗಿ ಕರ್ನಾಟಕವನ್ನು ನೋಡುತ್ತಿದೆ ಎಂದು ಸಚಿವರು ಆರೋಪಿಸಿದರು. 


ಬೇರೆ ರಾಜ್ಯಗಳ ಚುನಾವಣಾ ಪ್ರಚಾರದ ವೇಳೆ ಮೋದಿ ಮುಡಾ ಹಗರಣ ಪ್ರಸ್ತಾಪಿಸುವ ಮೂಲಕ ಕರ್ನಾಟಕ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಕರ್ನಾಟಕದ ಹೆಸರು ಕೆಡಿಸಿ ಚುನಾವಣೆಯಲ್ಲಿ ಗೆಲ್ಲುವುದೇ ಮುಖ್ಯವಾಗಿದೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.