ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

Lakshmi Hebbalkar: ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ‌. 

Written by - Savita M B | Last Updated : Feb 16, 2024, 02:23 PM IST
  • ಸ್ಮಾರ್ಟ್‌ ಫೋನ್‌ಗಳಿಗೆ 90 ಕೋಟಿ
  • ಉಡುಪಿ, ಬೆಳಗಾವಿಗೂ ಹೆಚ್ಚಿನ ಅನುದಾನ
  • ಇದೊಂದು ಅಭಿವೃದ್ಧಿ ಪರ ಬಜೆಟ್ - ಲಕ್ಷ್ಮೀ ಹೆಬ್ಬಾಳಕರ್
ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ title=

ಬೆಂಗಳೂರು: 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ  86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಬಜೆಟ್‌ನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು. 

ಪ್ರಸಕ್ತ ಸಾಲಿನಲ್ಲಿ ಇಲಾಖೆ ನಿರೀಕ್ಷಿಸಿದಷ್ಟು ಬಜೆಟ್‌ ದಕ್ಕಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿಗೆ ಈ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ-Karnataka Budget 2024: ರಾಜ್ಯ ಬಜೆಟ್ ಲೆಕ್ಕಾಚಾರದಲ್ಲಿ ಬಂದರು ಮತ್ತು ಒಳನಾಡು ಜಲಸಾರಿಗೆ ಸಿಕ್ಕ ಪಾಲು ಎಷ್ಟು?

ಸ್ಮಾರ್ಟ್‌ ಫೋನ್‌ಗಳಿಗೆ 90 ಕೋಟಿ 
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಮೇಲ್ವಿಚಾರಕಿಯರ ಬಹುದಿನಗಳ ಬೇಡಿಕೆಯಾಗಿದ್ದ ಸ್ಮಾರ್ಟ್ ಫೋನ್‌ಗಾಗಿ 90 ಕೋಟಿ ರೂಪಾಯಿ ನೀಡಲಾಗಿದೆ.  90 ಕೋಟಿ ರೂ. ವೆಚ್ಚದಲ್ಲಿ 75,938 ಫೋನ್‌ಗಳನ್ನ ನೀಡಲಾಗುತ್ತಿದ್ದು, ಇದರಿಂದ ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳ್ಳಲಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು. 

ಇದನ್ನೂ ಓದಿ-Karnataka Budget 2024: ಜಲಸಂಪನ್ಮೂಲ ಇಲಾಖೆಗೆ ವಿಶೇಷ ಆದ್ಯತೆ-ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಪ್ರತ್ಯೇಕ ಯೋಜನಾ ವಿಭಾಗ

ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು. ಒಟ್ಟಾರೆ ಇದೊಂದು ಅತ್ಯಂತ ಸಮತೋಲಿತ, ಅಭಿವೃದ್ಧಿ ಪರ ಬಜೆಟ್ ಎಂದು ಹೆಬ್ಬಾಳಕರ್ ಪ್ರಶಂಸಿಸಿದ್ದಾರೆ.

 ಉಡುಪಿ, ಬೆಳಗಾವಿಗೂ ಹೆಚ್ಚಿನ ಅನುದಾನ 
ನನ್ನ ತವರು ಜಿಲ್ಲೆ ಬೆಳಗಾವಿ ಹಾಗೂ ಉಸ್ತುವಾರಿ ಹೊತ್ತಿರುವ ಉಡುಪಿ ಜಿಲ್ಲೆಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ  ಎಂದು ಸಚಿವರು ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News