ಜನರ ತೀರ್ಪನ್ನು ಗೌರವಿಸಿ, ಜಗದೀಶ್ ಶೆಟ್ಟರ್ ಗೆ ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Lakshmi Hebbalkar: ನೂತನ ಸಂಸದರಾಗಿ ಆಯ್ಕೆಯಾಗಿರುವ ಜಗದೀಶ ಶೆಟ್ಟರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ಅತ್ಯಂತ ವಿನಮ್ರ ಭಾವದಿಂದ ಗೌರವಿಸುತ್ತೇವೆ. ನೂತನ ಸಂಸದರಾಗಿ ಆಯ್ಕೆಯಾಗಿರುವ ಜಗದೀಶ ಶೆಟ್ಟರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ನಮ್ಮ ಪರವಾಗಿ ಕೆಲಸ ಮಾಡಿದ ಎಲ್ಲ ಕಾರ್ಯಕರ್ತರು, ಮುಖಂಡರು ಹಾಗೂ ಬೆಂಬಲಿಸಿದ ಎಲ್ಲ ಮತದಾರರಿಗೆ, ಸಹಕರಿಸಿದ ಮಾಧ್ಯಮದ ಸ್ನೇಹಿತರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲೆಯ ಎಲ್ಲ ಹಾಲಿ ಮತ್ತು ಮಾಜಿ ಶಾಸಕರು, ಪಕ್ಷದ ಮುಖಂಡರು ಹೆಚ್ಚಿನ ಸಹಕಾರ ನೀಡಿದ್ದಾರೆ. ಅವರೆಲ್ಲರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಲೋಕಸಭಾ ಚುನಾವಣೆ ಸೋಲಿನಿಂದ ಕಂಗೆಟ್ಟ ಬ್ಲೂ ಬಾಯ್ : ರಾತ್ರಿಯೆಲ್ಲ ಚಿಂತೆಯಲ್ಲೇ ಕಳೆದ ಪ್ರಜ್ವಲ್
ಮೃಣಾಲ ಹೆಬ್ಬಾಳಕರ್ ಇನ್ನೂ ಚಿಕ್ಕವನು. ರಾಜಕೀಯದಲ್ಲಿ ಸಾಕಷ್ಟು ಅವಕಾಶವಿದೆ, ಮುಂದಿನ ದಿನಗಳಲ್ಲಿ ಅವನಿಗೆ ಉತ್ತಮ ಭವಿಷ್ಯವಿದೆ. ಇದೊಂದು ತಾತ್ಕಾಲಿಕ ಹಿನ್ನಡೆ. ದೊಡ್ಡ ಪ್ರಮಾಣದಲ್ಲಿ ಜನರು ನಮ್ಮನ್ನು ಬೆಂಬಲಿಸಿದ್ದಾರೆ. ಆದಾಗ್ಯೂ ಈ ಚುನಾವಣೆಯಲ್ಲಿ ಆಗಿರುವ ಹಿನ್ನಡೆಗೆ ಆತ್ಮಾವಲೋಕನ ಮಾಡಿಕೊಂಡು, ಮುಂದಿನ ದಿನಗಳಲ್ಲಿ ಅವುಗಳನ್ನು ಸರಿಪಡಿಸಿಕೊಂಡು ಹೋಗುವ ಕೆಲಸ ಮಾಡುತ್ತೇವೆ. ನಮ್ಮ ಪರವಾಗಿ ಕೆಲಸ ಮಾಡಿದ ಎಲ್ಲ ಕಾರ್ಯಕರ್ತರ ಜೊತೆಗೆ ನಾವು ಸದಾ ಇರುತ್ತೇವೆ. ಜಿಲ್ಲೆಯ ಜನರ ಕಷ್ಟ -ಸುಖದಲ್ಲಿ ನಿರಂತರ ಭಾಗಿಯಾಗುತ್ತೇವೆ. ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ನೂತನ ಸಂಸದರಾಗಿ ಆಯ್ಕೆಯಾಗಿರುವ ಜಗದೀಶ ಶೆಟ್ಟರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಅವರು ಜಿಲ್ಲೆಯ ಅಭಿವೃದ್ದಿಗೆ ಹೆಚ್ಚಿನ ಕೆಲಸ ಮಾಡಲಿ ಎಂದು ಶುಭ ಹಾರೈಸುತ್ತೇನೆ. ರಾಜ್ಯದಲ್ಲಿ ನಮ್ಮ ಸರಕಾರವಿರುವುದರಿಂದ ಜಿಲ್ಲೆಗೆ ಹೊಸ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು. ಎಲ್ಲರ ಸಹಕಾರದೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮುಂದುವರಿಸಲಾಗುವುದು. ಜನರ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿಕೊಂಡು ಮುನ್ನಡೆಯಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಇದನ್ನೂ ಓದಿ: ಮೋದಿಯವರಿಗೆ ಎಂತಹ ಪರಿಸ್ಥಿತಿಯನ್ನೂ ನಿಭಾಯಿಸುವ ಮುತ್ಸದ್ದಿತನ ಇದೆ: ಬಸವರಾಜ ಬೊಮ್ಮಾಯಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.