ಬೆಂಗಳೂರು: ಬಿಜೆಪಿ ನಾಯಕ ಲಕ್ಷ್ಮಣ ಸವದಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿರುವ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.


COMMERCIAL BREAK
SCROLL TO CONTINUE READING

ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡುವುದು ದೇಶ ವಿರೋಧಿ ಚಟುವಟಿಕೆಯೇನೂ ಅಲ್ಲ ಎಂದು ಹೇಳುವ ಮೂಲಕ ಮಾಧುಸ್ವಾಮಿ ಅವರು ಭಾರೀ ವಿವಾದ ಸೃಷ್ಟಿಸಿದ್ದಾರೆ.


ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2012 ಲಕ್ಷಣ ಸವದಿ ಅವರು ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿ ಬಳಿಕ ರಾಜೀನಾಮೆಯನ್ನೂ ನೀಡಿದ್ದರು. ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ್ದು ತಪ್ಪು. ಆದರೆ ಆ ವಿಚಾರವನ್ನು ಮುಂದಿಟ್ಟುಕೊಂಡು ಉಪಮುಖ್ಯಮಂತ್ರಿ ಮಾಡಬಾರದು ಅಂತ ಯಾಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಅರ್ಥವಾಗುತ್ತಿಲ್ಲ. ಅಷ್ಟಕ್ಕೂ ಇದು ಚರ್ಚಾ ವಿಷಯವೇ ಅಲ್ಲ ಎಂದು ಮಾಧುಸ್ವಾಮಿ ಹೇಳಿದ್ದಾರೆ.