ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಎಲ್ಲಿ..? ಅದರ ಅವಶ್ಯಕತೆ ಏಕಿದೆ..?

ಬೆಂಗಳೂರು ಅಂತರಾಷ್ಟ್ರೀಯ ನಗರವಾಗಿ ಬೆಳೆದಿದೆ. ದೇಶದ ತಂತ್ರಜ್ಞಾನ ನವೋದ್ಯಮದಲ್ಲಿ ಮುಂಚೂಣಿಯಲ್ಲಿ ಇದೆ. ಬೆಂಗಳೂರಿಗೆ ಇನ್ನೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದರು.

Written by - Prashobh Devanahalli | Edited by - Krishna N K | Last Updated : Jul 10, 2024, 02:55 PM IST
    • ಬೆಂಗಳೂರು ದೇಶದ ತಂತ್ರಜ್ಞಾನ ನವೋದ್ಯಮದಲ್ಲಿ ಮುಂಚೂಣಿಯಲ್ಲಿ ಇದೆ.
    • ರಾಜಧಾನಿ ಬೆಂಗಳೂರಿಗೆ ಇನ್ನೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ.
    • 2ನೇ ವಿಮಾನ ನಿಲ್ದಾಣ ಸ್ಥಾಪನೆಗೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ
ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಎಲ್ಲಿ..? ಅದರ ಅವಶ್ಯಕತೆ ಏಕಿದೆ..? title=
mp patil

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 100 ಮಿಲಿಯನ್ ಪ್ರಯಾಣಿಕರ ಸಾಮಾರ್ಥ್ಯದ 2ನೇ ವಿಮಾನ ನಿಲ್ದಾಣ ಸ್ಥಾಪನೆಗೆ ಪರಿಣಿತರ ಸಲಹೆ ಪಡೆದು ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಿ, ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರೈಲು ಹಾಗೂ ಮೆಟ್ರೋ ಸಾರಿಗೆ ಸಂಪರ್ಕ ಸೇರಿದಂತೆ ಅಗತ್ಯ ಸಂಪನ್ಮೂಲಗಳು ಇರುವ ಕಡೆ ನಿಲ್ದಾಣ ನಿರ್ಮಾಣ ಮಾಡಲಾಗುವುದು, ರಾಜಧಾನಿಯ 5 ರಿಂದ 6 ಭಾಗಗಳಲ್ಲಿ ನಿಲ್ದಾಣಕ್ಕೆ ಜಾಗ ಹುಡುಕಲಾಗುತ್ತಿದ್ದು, ಪ್ರಯಾಣಿಕರ ಒತ್ತಡ ಯಾವ ಭಾಗದಲ್ಲಿ ಬರಲಿದೆ ಎಂಬುವುದರ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲಿವೆ ಎಂದರು.

ಇದನ್ನೂ ಓದಿ:ಸಿಎಂ ರಾಜೀನಾಮೆ, ನಿವೇಶನಗಳ ಹಂಚಿಕೆ ರದ್ದು, ಸಿಬಿಐ ತನಿಖೆಗೆ ಆಗ್ರಹ

ಮಾಗಡಿ, ದಾಬಸೇಟಿ, ಜಿಗಣಿ ಸೇರಿದಂತೆ 5 ರಿಂದ 6 ಅವಕಾಶಗಳು ಇವೆ. ಅವಕಾಶಗಳು ಇದ್ದು, ಪ್ಯಾರಾಮೀಟರ್ ಆಧರಿಸಿ 4.5 ರಿಂದ 5 ಸಾವಿರ ಎಕರೆ ಪ್ರದೇಶದಲ್ಲಿ ನಿಲ್ದಾಣ ನಿರ್ಮಾಣ ಮಾಡಲಾಗುವುದು ಎಂದರು. ತಮಿಳುನಾಡಿಗಿಂತ ಮೊದಲೇ 2ನೇ ವಿಮಾನ ನಿಲ್ದಾಣದ ಘೊಷಣೆ ಮಾಡಲಾಗಿದೆ. ತಮಿಳುನಾಡು ಏನಾದ್ರು ಮಾಡಿಕೊಳ್ಳಲಿ. ಅದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಂತಾ ಗೊತ್ತಿಲ್ಲ ಎಂದರು.
 
ಬೆಂಗಳೂರು ಅಂತರಾಷ್ಟ್ರೀಯ ನಗರವಾಗಿ ಬೆಳೆದಿದೆ. ದೇಶದ ತಂತ್ರಜ್ಞಾನ ನವೋದ್ಯಮದಲ್ಲಿ ಮುಂಚೂಣಿಯಲ್ಲಿ ಇದೆ. ಬೆಂಗಳೂರಿಗೆ ಇನ್ನೊಂದು ವಿಮಾನ ನಿಲ್ದಾಣದ ಅವಶ್ಯಕತೆ ಇದೆ. ಈಗ ಇರುವ ಕೆಂಪೇಗೌಡ ವಿಮಾನ ನಿಲ್ದಾಣ ದೇಶದ 3ನೇ ಅತಿ ದೊಡ್ಡ ನಿಲ್ದಾಣವಾಗಿದೆ. ವಾರ್ಷಿಕ 110 ಮಿಲಿಯನ್ ಪ್ರಯಾಣಿಕರ ಗರಿಷ್ಠ ಮಿತಿ ಇದೆ. 07.1 ಮೀಲಿಯನ್ ಟನ್ ಸರಕು ಸೇವೆ ಇದೆ. ಇನ್ನೊಂದು ರನ್ ವೇ 2035 ಕ್ಕೆ ಮುಗಿಯಲಿದೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News