ಬೆಂಗಳೂರು: ​ರಾಜ್ಯದ ಪುರಸಭೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ವಾಟರ್‌ಮ್ಯಾನ್‌ ಮತ್ತು ವಾಲ್‌ಮ್ಯಾನ್‌ಗಳಿಗೆ 2021ರ ಮಾರ್ಚ್‌ವರೆಗೆ ವೇತನ ಬಿಡುಗಡೆ ಮಾಡಲಾಗಿದೆ ಎಂಬ ಸರ್ಕಾರದ ಉತ್ತರಕ್ಕೆ ಪ್ರತಿಪಕ್ಷ ಕಾಂಗ್ರೆಸ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಜರುಗಿತು.


COMMERCIAL BREAK
SCROLL TO CONTINUE READING

ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ ಸದಸ್ಯ ತುಕಾರಾಂ ಕೇಳಿದ ಪ್ರಶ್ನೆಗೆ ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್(MTB Nagaraj)‌, ಎಸ್‌ಎಫ್‌ಸಿ ವೇತನ ನಿಧಿಯಡಿ ಮಾರ್ಚ್‌ 2021ರವರೆಗೆ ಈಗಾಗಲೇ ವೇತನ ಬಿಡುಗಡೆ ಮಾಡಲಾಗಿದೆ ಎಂದು ಉತ್ತರ ನೀಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ತುಕಾರಾಂ, ಮಾರ್ಚ್‌ ತಿಂಗಳು ಇನ್ನೂ ಬಂದೇ ಇಲ್ಲ. ಆಗಲೇ ವೇತನ ಹೇಗೆ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಸಚಿವರು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರಾದರೂ ಯಾವುದೇ ಪ್ರಯೋಜವಾಗಲಿಲ್ಲ. ಉತ್ತರವನ್ನು ಪರಿಶೀಲನೆ ನಡೆಸಲಾಗುವುದು. ತಪ್ಪಾಗಿದ್ದರೆ ಸರಿಪಡಿಸುತ್ತೇವೆ ಎಂದು ಸಚಿವರು ಹೇಳಿದರು.


ಇಂದು ಮಡಿಕೇರಿಗೆ ರಾಷ್ಟ್ರಪತಿ Ramnath Kovind, ತಲಕಾವೇರಿಯಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷಿದ್ಧ


ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಎಂ.ಟಿ.ಬಿ.ನಾಗರಾಜ್‌ ನೆರವಿಗೆ ಧಾವಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಸಲಹೆ ನೀಡಿದರು. ನಂತರ ನೆರವಿಗೆ ಬಂದ ಬೊಮ್ಮಾಯಿ ಅವರು, ಭಾಷೆಯಲ್ಲಿ ವ್ಯತ್ಯಾಸವಾಗಿದೆ. ಸರ್ಕಾರದ ಮಟ್ಟದಲ್ಲಿ ಬಿಡುಗಡೆಯಾಗಿರುತ್ತದೆ. ಸ್ಥಳೀಯ ಮಟ್ಟದಲ್ಲಿ ಬಿಡುಗಡೆಯಾಗುವುದಿಲ್ಲ. ಹೀಗಾಗಿ ಆ ರೀತಿಯಾಗಿ ಉತ್ತರ ನೀಡಲಾಗಿದೆ ಎಂದು ಸಮಜಾಯಿಷಿ ನೀಡಿದರು.


'ಮೊದಲು‌ ಈ ಆರ್ಥಿಕ ಬಿಕ್ಕಟ್ಟನ್ನು ಸರಿಪಡಿಸಿ,‌ ಆ‌ ಮೇಲೆ ನಮ್ಮ ಸರ್ಕಾರದ ತಪ್ಪು ಹುಡುಕಲು ಹೊರಡಿ'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.