MTB Nagaraj : ಕಬ್ಬು ಬೆಳೆಗಾರರ ಬೆನ್ನಿಗೆ ನಿಂತ ಸಚಿವ ಎಂಟಿಬಿ ನಾಗರಾಜ್​..!

ಕಾರ್ಖಾನೆಗಳು ಬಾಕಿ ಪಾವತಿಸಲು ವಿಫಲವಾದಲ್ಲಿ ಕಬ್ಬು (ನಿಯಂತ್ರಣ) ಕಾಯ್ದೆಯನ್ವಯ ವಸೂಲಾತಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

Last Updated : May 18, 2021, 04:09 PM IST
  • ವಿಶ್ವವನ್ನೆ ಕಾಡುತ್ತಿರುವ ಮಹಾಮಾರಿ ಕೋವಿಡ್-19 ಎರಡನೇ ಅಲೆ
  • ಕಬ್ಬು ಬೆಳೆಗಾರರು ತೀವ್ರತರವಾದ ಆರ್ಥಿಕ ಸಂಕಷ್ಟ
  • ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಾಕಿಯನ್ನು ತಕ್ಷಣ ಪಾವತಿಸಲು ಕ್ರಮ
MTB Nagaraj : ಕಬ್ಬು ಬೆಳೆಗಾರರ ಬೆನ್ನಿಗೆ ನಿಂತ ಸಚಿವ ಎಂಟಿಬಿ ನಾಗರಾಜ್​..! title=

ಕೋಲಾರ : ವಿಶ್ವವನ್ನೆ ಕಾಡುತ್ತಿರುವ ಮಹಾಮಾರಿ ಕೋವಿಡ್-19 ಎರಡನೇ ಅಲೆಯಿಂದಾಗಿ ಕಬ್ಬು ಬೆಳೆಗಾರರು ತೀವ್ರತರವಾದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಕಬ್ಬು ಬಿಲ್ ಬಾಕಿ ಉಳಿಸಿಕೊಳ್ಳುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಾಕಿಯನ್ನು ತಕ್ಷಣ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂಟಿಬಿ ನಾಗರಾಜ್ ಆದೇಶಿಸಿದ್ದಾರೆ.

ಜಿಲ್ಲೆಯ ಹೊಸಕೋಟೆಯಲ್ಲಿ ಇಂದು ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಚಿವ ಎಂಟಿಬಿ ನಾಗರಾಜ್(MTB Nagaraj), ಕಾರ್ಖಾನೆಗಳು ಬಾಕಿ ಪಾವತಿಸಲು ವಿಫಲವಾದಲ್ಲಿ ಕಬ್ಬು (ನಿಯಂತ್ರಣ) ಕಾಯ್ದೆಯನ್ವಯ ವಸೂಲಾತಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : Karnataka Congress : ಬಿಎಸ್‌ವೈ ಸರ್ಕಾರ 'ಕುಂಟು ಕುದುರೆಯ ಮೇಲೆ ಕುರುಡನ ಸವಾರಿ'ಯಂತಾಗಿದೆ

ರಾಜ್ಯದಲ್ಲಿ 2020-21 ನೇ ಸಾಲಿನ ಕಬ್ಬು ಅಗೆಯುವ ಹಂಗಾಮಿನಲ್ಲಿ 64 ಸಕ್ಕರೆ ಕಾರ್ಖಾನೆ(Sugar Factory)ಗಳು ಕಾರ್ಯನಿರ್ವಹಿಸುತ್ತಿದ್ದು, ಈ ಕಾರ್ಖಾನೆಗಳು 2021 ಏಪ್ರಿಲ್ ಸಾಲಿನಲ್ಲಿದ್ದಂತೆ 440.84 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆದು, 42.94 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದಿಸಿರುತ್ತವೆ. ಈ ಅವಧಿಗೆ ಕಾರ್ಖಾನೆಗಳು 13348.10 ಕೋಟಿ ರೂ.ನಷ್ಟು ಕಬ್ಬಿನ ಬಿಲ್ ಪಾವತಿಸಬೇಕಾಗಿದ್ದು, ಈ ಪೈಕಿ 12058.17 ಕೋಟಿ ರೂ.ನಷ್ಟು ಪಾವತಿಸಿರುತ್ತವೆ. 1324.49 ಕೋಟಿ ರೂ. ಬಾಕಿ ಮೊತ್ತ ಪಾವತಿಸಬೇಕಿದೆ.. ಅಂದರೆ ಪಾವತಿ ಪ್ರಮಾಣ ಶೇ 90 ರಷ್ಟು ಮತ್ತು ಬಾಕಿ ಪ್ರಮಾಣ ಶೇ 10 ರಷ್ಟಿರುತ್ತದೆ. ಪ್ರಸ್ತುತ ಕಬ್ಬು ಅರೆಯುವ ಹಂಗಾಮು ಬರುವ ಜೂನ್ ತಿಂಗಳವರೆಗೆ ಚಾಲನೆಯಲ್ಲಿರುತ್ತದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ : Tauktae Cyclone : ರಾಜ್ಯದಲ್ಲಿ 2 ದಿನ ಭಾರೀ ಮಳೆ, ಕೆಲ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್'

ಬಿಲ್ ಪಾವತಿಸದ ಕಾರ್ಖಾನೆಗಳಿಗೆ ಈಗಾಗಲೇ ನೋಟೀಸ್‍ಗಳನ್ನು ಜಾರಿಗೊಳಿಸಲಾಗಿದೆ. ಕಾರ್ಖಾನೆಗಳು ರೈತ(Farmers)ರಿಗೆ ಪಾವತಿಸಬೇಕಾದ ಹಳೆಯ ಬಾಕಿ 28.38 ಕೋಟಿ ರೂ.ಗಳಷ್ಟಿರುತ್ತದೆ. ಈ ಪೈಕಿ 2015-16 ನೇ ಸಾಲಿನ 11.37 ಕೋಟಿ ರೂ., 2018-19 ನೇ ಸಾಲಿನ 11.20 ಕೋಟಿ ರೂ.ಹಾಗೂ 2019-20 ನೇ ಸಾಲಿನ 5.80 ಕೋಟಿ ರೂ.ಬಾಕಿ ಒಳಗೊಂಡಿರುತ್ತದೆ. ಬಾಕಿ ಉಳಿಸಿಕೊಂಡಿರುವ ಈ ಕಾರ್ಖಾನೆಗಳು ನಿಷ್ಕ್ರಿಯವಾಗಿವೆ. ಆದ್ದರಿಂದ ಈ ಕಾರ್ಖಾನೆಗಳಿಗೆ ಸೇರಿದ ಚರ ಮತ್ತು ಸ್ಥಿರಾಸ್ತಿಗಳನ್ನು ಹರಾಜು ಪ್ರಕ್ರಿಯೆಗೆ ಒಳಪಡಿಸಿ ವಸೂಲಾತಿ ಕ್ರಮ ಜರುಗಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಅದರಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ : Shashikala Jolle : ಕೋವಿಡ್ ಲಸಿಕೆ ಪಡೆಯಲು ಹಿರಿಯ ನಾಗರೀಕರಿಗೆ ಬೇಕಿಲ್ಲ 'ಆಧಾರ್ ಕಾರ್ಡ್'..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News