ಬೆಂಗಳೂರು: ಇಲ್ಲಿನ ನಾರಾಯಣ ಹೃದಯಾಲಯದಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಬಾಗಲಕೋಟೆಯ ಸಂಸದ ಗದ್ದಿಗೌಡರ ಅವರನ್ನು ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಇದನ್ನೂ ಓದಿ: ಈ ಬಿಜೆಪಿಯವರಿಗೆ ಮಾನ ಮರ್ಯಾದಿ ಇದೆಯಾ? : ಸಿದ್ದರಾಮಯ್ಯ
ಈ ಬಳಿಕ ಗದ್ದಿಗೌಡರ ಆದಷ್ಟು ಬೇಗ ಗುಣಮುಖರಾಗಿ ಎಂದಿನಂತೆ ಸಕ್ರಿಯ ರಾಜಕಾರಣದಲ್ಲಿ ತೊಡಗುವಂತಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಬೀಳಗಿ ನಗರ ಬಿಜೆಪಿ ಅಧ್ಯಕ್ಷರಾದ ಈರಣ್ಣ ಗಿಡ್ಡಪ್ಪಗೋಳ ಹಾಗೂ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ವಿಠ್ಠಲ ಭಾಗೆವಾಡಿ ಆಗಮಿಸಿದರು.
ಇದನ್ನೂ ಓದಿ: ʼಕೈಗಾರಿಕಾ ಉದ್ದೇಶಕ್ಕಾಗಿ ಹೆಚ್ಚುವರಿ 50 ಸಾವಿರ ಎಕರೆ ಜಮೀನು ಭೂ ಸ್ವಾಧೀನʼ
ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಸಿಎಂ ಯಡಿಯೂರಪ್ಪ ಅವರು ಗದ್ದಿಗೌಡರನ್ನು ಭೇಟಿಯಾಗಿದ್ದರು. ಅಷ್ಟೇ ಅಲ್ಲದೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.