ಕಲಬುರಗಿ: ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲಾಡಳಿತ ತಕ್ಷಣವೇ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: “ಹಿಂದಿ ದಿವಸ್ ಆಚರಣೆಗೆ ರಾಜ್ಯ ಸರ್ಕಾರ ಹಣ ಬಳಕೆ ಮಾಡಬಾರದು!”


ಜಾಗತಿಕ  ಬಂಡವಾಳ ಹೂಡಿಕೆ ಸಂಬಂಧ ಪ್ರಸ್ತುತ ಅಮೆರಿಕಾ ಪ್ರವಾಸದಲ್ಲಿರುವ ನಿರಾಣಿ ಅವರು, ಕಲಬುರಗಿ ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಭಾನುವಾರ ಸಂಜೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಜಿಲ್ಲೆಯ ಸಮಗ್ರ ಚಿತ್ರಣ ಮತ್ತು ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡು  ಕೆಲವು ಸೂಚನೆಗಳನ್ನು ನೀಡಿದ್ದಾರೆ.


ಈ ಕುರಿತು ಅಮೆರಿಕಾದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ನಿರಾಣಿ ಅವರು, ಜಿಲ್ಲೆಯಲ್ಲಿ ಮಳೆ ಪರಿಹಾರ ಕಾರ್ಯ ತೆಗೆದುಕೊಳ್ಳಲು ಸೂಚಿಸಿರುವುದಾಗಿ ಹೇಳಿದ್ದಾರೆ.


ಅಮೆರಿಕಾ ಪ್ರವಾಸದಲ್ಲಿದ್ದರೂ ಜಿಲ್ಲೆಯ ಪ್ರತಿಯೊಂದು ಮಾಹಿತಿಯನ್ನು ಕ್ಷಣಕ್ಷಣಕ್ಕೂ ಸಂಬಂಧ ಪಟ್ಟ ಅಧಿಕಾರಿಗಳಿಂದ ಪಡೆಯುತ್ತಿದ್ದೇನೆ. ಜನ ಮತ್ತು ಜಾನುವಾರುಗಳ ರಕ್ಷಣೆಗೆ ಆದ್ಯತೆ ಕೊಡಬೇಕು ಎಂದು ಸೂಚಿಸಿದ್ದಾರೆ.


ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುವುದು. ಅಗತ್ಯವಿರುವ ಕಾಳಜಿ ಕೇಂದ್ರಗಳನ್ನು ತೆರೆಯಬೇಕು. ಸಂತ್ರಸ್ತರಿಗೆ ಉಟ, ಬಟ್ಟೆ, ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಸಚಿವ ನಿರಾಣಿ ಅವರು ತಾಕೀತು ಮಾಡಿದ್ದಾರೆ. ಪರಿಹಾರ ಕಾರ್ಯಕ್ಕೆ ಬೇರೆ ಬೇರೆ ಇಲಾಖೆಯ ಅಧಿಕಾರಿಗಳನ್ನು ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅಧಿಕಾರಿಗಳಿಗೆ ರಜೆ ನೀಡಬಾರದು. ಆಶಿಸ್ತು ತೋರುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ‌ ಜರುಗಿಸಲು ಸೂಚನೆ ಕೊಟ್ಟಿದ್ದಾರೆ.


ಇದನ್ನೂ ಓದಿ: Bangalore Flood : ರಾಜಕಾಲುವೆ ಒತ್ತುವರಿ ಮಾಡಿದ್ದ 30 ಸಂಸ್ಥೆಗಳಿಗೆ ನೋಟಿಸ್


ಮಹಾರಾಷ್ಟ ಡ್ಯಾಂಗಳಿಂದ ಬರುವ ನೀರು ಕಡಿಮೆಯಾಗಿದ್ದರಿಂದ ಸದ್ಯಕ್ಕೆ ಜಿಲ್ಲೆಯಲ್ಲಿ ಪ್ರವಾಹ ಭೀತಿಯಿಲ್ಲ. ಹೀಗಾಗಿ ಜನರು ಆತಂಕ ಪಡಬೇಕಾಗಿಲ್ಲ ಜನರ ರಕ್ಷಣೆ ಮಾಡಲು ಜಿಲ್ಲಾಡಳಿತ ಸಜ್ಜಾಗಿದೆ. ಮಹಾರಾಷ್ಟçದ ಸಚಿವರೊಂದಿಗೆ ತಾವು ಸಹ ಕರೆ ಮಾಡಿ ಮಾತನಾಡಿದ್ದು, ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವುದಿಲ್ಲ ಎಂದು ನಿರಾಣಿ ಹೇಳಿದ್ದಾರೆ. ಉಜನಿ ಜಲಾಶಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಸಂಪರ್ಕದಲ್ಲಿದ್ದು ಅಲ್ಲಿಯೂ ನೀರಿನ ಮಟ್ಟ ತಗ್ಗಿದ ಪ್ರಯುಕ್ತ  6೦ ಸಾವಿರ ಕ್ಯೂಸೆಕ್ ನೀರು ಮಾತ್ರ ನದಿಗೆ ಹರಿಸುತ್ತಿದ್ದಾರೆ. ಹೆಚ್ಚಿನ ನೀರು ಬರುವ ಆತಂಕ ಸದ್ಯಕ್ಕಿಲ್ಲ, ಹೀಗಾಗಿ ಸೊನ್ನ ಬ್ಯಾರೇಜ್‌ದಿಂದ ಬಿಡುಗಡೆ ಮಾಡುತ್ತಿರುವ ನೀರಿನ ಪ್ರಮಾಣವು ಕಡಿಮೆ ಆಗಲಿದೆ ಎಂದು ನಿರಾಣಿ ತಿಳಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.