ಬೆಂಗಳೂರು: ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್‍ಶಿಪ್‍ಗಳನ್ನು (Township) ಸ್ಥಾಪನೆ ಮಾಡುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Murugesh Nirani) ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 'ಪಕ್ಷವನ್ನು ನಿಮ್ಮ ಕೈಗೆ ತೆಗೆದುಕೊಳ್ಳಿ' ಎಂದ ಯತ್ನಾಳ್ ಗೆ ಸಿದ್ದರಾಮಯ್ಯ ಹೇಳಿದ್ದೇನು ?


ಜೆಡಿಎಸ್‍ನ ಸಿ.ಎನ್.ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಗಾರಿಕಾ ಟೌನ್‍ಶಿಪ್‍ಗಳ ಬಳಿಯೇ ಜನವಸತಿ ಪ್ರದೇಶಗಳನ್ನು ನಿರ್ಮಾಣ ಮಾಡುವ ಮೂಲಕ ವಾಕ್ ಟು ವರ್ಕ್‍ಗೆ (Walk to work) ಆದ್ಯತೆ ನೀಡಲಾಗುವುದು ಎಂದು ಹೇಳಿದರು.


ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಹೂಡಿಕೆದಾರರಿಗೆ ಸೌಲಭ್ಯಗಳು ಮತ್ತು ರಿಯಾಯ್ತಿಗಳನ್ನು ನೀಡುವುದನ್ನು ಕಡಿಮೆ ಮಾಡಿದ್ದು, ರಾಜ್ಯದ 2ನೇ ಹಂತದ ನಗರಗಳಾದ ತುಮಕೂರು, ಕಲ್ಬುರ್ಗಿ, ಬೆಳಗಾವಿ ಸೇರಿದಂತೆ ವಿವಿಧ ನಗರಗಳಲ್ಲಿ ಹೂಡಿಕೆ ಮಾಡಲು ಮುಂದೆ ಬರುವವರಿಗೆ ಸರ್ಕಾರದಿಂದ ಎಲ್ಲ ರೀತಿಯ ಸಹಾಯ, ನೆರವು, ರಿಯಾಯ್ತಿ ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.


ಇದನ್ನೂ ಓದಿ: ಅಧಿಕಾರದುದ್ದಕ್ಕೂ ನಿದ್ದೆ ಮಾಡ್ತಾ ರಾಜ್ಯವನ್ನೇ ಸಾಲದ ಶೂಲಕ್ಕೇರಿಸಿದ ‘ಸಾಲರಾಮಯ್ಯ’: ಬಿಜೆಪಿ ಟೀಕೆ


ಕನ್ನಡಿಗರಿಗೆ ಆದ್ಯತೆ: ಹೊಸ ಕೈಗಾರಿಕಾ ನೀತಿ-2020-25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ. 100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ. ಡಾ.ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು. ಇದರಲ್ಲಿ ಯಾವುದೇ ಲೋಪವಾಗಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.