ಫಾಲ್ಕಾನ್‌ಎಕ್ಸ್‌ ಸಹಯೋಗದಲ್ಲಿ ಭಾರತದ ಕಾನ್ಸುಲೇಟ್ ಜನರಲ್ - ಸ್ಯಾನ್ ಫ್ರಾನ್ಸಿಸ್ಕೋದ ಕಾನ್ಸುಲೇಟ್ ಜನರಲ್ ಸೋಮವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ 'ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಯ ಅವಕಾಶ'ಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್ ನಿರಾಣಿ ಮಾತನಾಡಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: “ಮಳೆ ಅನಾಹುತಕ್ಕೆ ಪರಿಹಾರ ಕೈಗೊಳ್ಳಿ”: ಅಮೆರಿಕಾದಿಂದಲೇ ಸೂಚನೆ ನೀಡಿದ ಸಚಿವ ನಿರಾಣಿ


ಫಾಲ್ಕಾನ್‌ ಎಕ್ಸ್‌  ಕಚೇರಿಯಲ್ಲಿ ಆಯೋಜಿಸಿದ್ದ ಈ ಸಂವಾದ ಕಾರ್ಯಕ್ರಮದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಇವಿ ರಮಣ ರೆಡ್ಡಿ, ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತದ ಕಾನ್ಸುಲರ್ ಜನರಲ್ ಡಾ. ಟಿವಿ ನಾಗೇಂದ್ರ ಪ್ರಸಾದ್ ಪಾಲ್ಗೊಂಡಿದ್ದರು.


ಸದ್ಯ ಸಚಿವ ಮುರುಗೇಶ್ ನಿರಾಣಿಯವರು ಅಮೆರಿಕಾ ಪ್ರವಾಸದಲ್ಲಿದ್ದಾರೆ. ಈ ವೇಳೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯೆಲ್ ಅವರೊಂದಿಗೆ ಉದ್ಯಮ ಸಂವಾದ ಸಭೆಯಲ್ಲಿ ಭಾಗವಹಿಸಿದ್ದರು. 


ಇದನ್ನೂ ಓದಿ: Bangalore Traffic Problem : ಬೆಂಗಳೂರು ಸಂಚಾರ ದಟ್ಟಣೆಗೆ ಸ್ಕೈ ಬಸ್, ಟ್ರಾಲಿ ಬಸ್ ಕೇಂದ್ರ ಸಚಿವ ಗಡ್ಕರಿ ಸಲಹೆ!


ಆ ಬಳಿಕ ಕರ್ನಾಟಕದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ, ಕೌಶಲಾಭಿವೃದ್ಧಿ ಕೇಂದ್ರ ಮತ್ತು ಸಿಕೋರ್ಸ್ಕಿ ಹೆಲಿಕಾಪ್ಟರ್ ತಯಾರಿಕಾ ಘಟಕ ಸ್ಥಾಪನೆ ಸಂಬಂಧ ವಿಮಾನಯಾನ ಕಂಪನಿಗಳ ಪ್ರಮುಖರೊಂದಿಗೆ ಸಚಿವರು ಚರ್ಚಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.