Sunil Kumar : 'ಕನ್ನಡದ ವಿರುದ್ಧ ಅಗೌರವ ತೋರಿಸುವುದನ್ನು ಸಹಿಸುವುದಿಲ್ಲ'

ತ್ತೀಚೆಗೆ ಕೆಲ ದುಷ್ಕರ್ಮಿಗಳು ಕನ್ನಡ ಬಾವುಟಕ್ಕೆ ಹಾನಿ ಮಾಡಿದ್ದಾರೆ. ಕನ್ನಡದ ವಿರುದ್ಧ ಅಗೌರವ ತೋರಿಸುವುದನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

Written by - Channabasava A Kashinakunti | Last Updated : Dec 18, 2021, 12:49 PM IST
  • ಬೆಳಗಾವಿಯಲ್ಲಿ ನಡೆದಿರುವ ಘಟನೆಯನ್ನು ಉಗ್ರವಾಗಿ ಖಂಡಿಸುತ್ತೇನೆ
  • ಎಷ್ಟೇ ದೊಡ್ಡ ವ್ಯಕ್ತಿಯಾದರೂ ಸೂಕ್ತಕ್ರಮ ಕೈಗೊಳ್ಳುತ್ತೇವೆ
  • ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್
Sunil Kumar : 'ಕನ್ನಡದ ವಿರುದ್ಧ ಅಗೌರವ ತೋರಿಸುವುದನ್ನು ಸಹಿಸುವುದಿಲ್ಲ' title=

ಉಡುಪಿ : ಬೆಳಗಾವಿಯಲ್ಲಿ ನಡೆದಿರುವ ಘಟನೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ಇಂತಹ ಘಟನೆ ಮುಂದೆ ಮರುಕಳಿಸಲು ಬಿಡುವುದಿಲ್ಲ. ಎಷ್ಟೇ ದೊಡ್ಡ ವ್ಯಕ್ತಿಯಾದರೂ ಸೂಕ್ತಕ್ರಮ ಕೈಗೊಳ್ಳುತ್ತೇವೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಗುಂಡಾಗಿರಿ ಬಗ್ಗೆ ಗುಡುಗಿದ್ದಾರೆ.

ಈ ಕುರಿತು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸುನಿಲ್ ಕುಮಾರ್(Sunil Kumar), ಈ ರೀತಿಯ ಕೃತ್ಯ ಯಾರೂ ಮಾಡದಂತೆ ಸೂಕ್ತ ಬಂದು ಬಸ್ತ್ ಮಾಡಲಾಗುವುದು. ಕನ್ನಡ ಭಾಷೆ, ಸಾಹಿತ್ಯ, ಧ್ವಜದ ಬಗ್ಗೆ ಅಪಾರವಾದ ಗೌರವ ಇರಲೇಬೇಕು ಎಂದರು.

ಇದನ್ನೂ ಓದಿ : ವಾಹನಗಳ ಮೇಲೆ ಕಲ್ಲು ತೂರಾಟ: ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ

ಇನ್ನು ಮುಂದುವರೆದು ಮಾತಂದಿದ ಅವರು, ಅನ್ಯಭಾಷೆ ಮಾತನಾಡಿದರೂ ಕನ್ನಡದ ಬಗ್ಗೆ ಗೌರವ ತೋರಿಸುವುದು ನಮ್ಮ ಕರ್ತವ್ಯವಾಗಿದೆ. ಇತ್ತೀಚೆಗೆ ಕೆಲ ದುಷ್ಕರ್ಮಿಗಳು ಕನ್ನಡ ಬಾವುಟ(Kannada Flag)ಕ್ಕೆ ಹಾನಿ ಮಾಡಿದ್ದಾರೆ. ಕನ್ನಡದ ವಿರುದ್ಧ ಅಗೌರವ ತೋರಿಸುವುದನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ಹಿನ್ನೆಲೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಶನಿವಾರ(ಡಿ.18) ಬೆಳಗ್ಗೆ 8ರಿಂದ ಭಾನುವಾರ (ಡಿ.19) ಬೆಳಗ್ಗೆ 6ಗಂಟೆವೆಗೆ ನಿಷೇಧಾಜ್ಞೆ(Section 144 in Belagavi) ಜಾರಿಯಲ್ಲಿರಲಿದೆ. ಬೆಳಗಾವಿ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪುಗಂಪುಗಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಈ ಕುರಿತು ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News