ಕಲಬುರಗಿ : ರವಿವಾರ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಆಯೋಜಿಸಿದ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ನಂತರ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೂವು ಮತ್ತು ಬಲೂನ್‍ಗಳಿಂದ ಅಲಂಕೃತಗೊಂಡ ಕಲಬುರಗಿ-ಆಳಂದ, ಕಲಬುರಗಿ-ಸೇಡಂ ಮಾರ್ಗದ ಬಸ್ ಹತ್ತಿದ ಅವರು, ಕಂಡಕ್ಟರ್ ಬಳಿ ಇದ್ದ ಇ.ಟಿ.ಎಂ. ಮಶೀನ್ ಪಡೆದು ತಾವೇ ಖುದ್ದಾಗಿ ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ ಇನ್ಮುಂದೆ ರಾಜ್ಯದಲ್ಲಿನ ಸಾರಿಗೆ ಬಸ್‍ಗಳಲ್ಲಿನ ಪ್ರಯಾಣಕ್ಕೆ ಮಹಿಳೆಯರು, ವಿದ್ಯಾರ್ಥಿನಿಯರು ಹಣ ಪಾವತಿಸಬೇಕಿಲ್ಲ. ಉಚಿತ ಟಿಕೆಟ್ ಪಡೆದು ಪ್ರಯಾಣಿಸಬಹುದು ಎಂದು ಹೇಳಿ ಪ್ರಯಾಣಕ್ಕೆ ಶುಭ ಕೋರಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Viral Story: ಕರೆಂಟ್ ಶಾಕ್‌ನಿಂದ ಮರಿ ಮಂಗ ಸಾವು; ಮುಗಿಲು ಮುಟ್ಟಿದ ತಾಯಿ ಮಂಗನ ರೋಧನೆ


"ಶಕ್ತಿ ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣಾ ಪೂರ್ವ ನೀಡಿದ ವಾಗ್ಧಾನದಂತೆ ಇಂದು ಮಹಿಳೆಯರು ಸಾರಿಗೆ ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸುವ "ಶಕ್ತಿ ಯೋಜನೆ ಜಾರಿಗೆ ತಂದಿದ್ದೇವೆ. ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿಗಳ ಜಾರಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.


ಇದನ್ನೂ ಓದಿ:ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪ್ರಸಾರ, ಕಡಿವಾಣಕ್ಕೆ ಕ್ರಮ-ಸಚಿವ ಪ್ರಿಯಾಂಕ್ ಖರ್ಗೆ


ಇದಕ್ಕೂ ಮುನ್ನ ಪ್ರಸ್ತಾವಿಕವಾಗಿ ಮಾತನಾಡಿದ ಕೆ.ಕೆ.ಆರ್.ಟಿ.ಸಿ. ಎಂ.ಡಿ. ಎಂ.ರಾಚಪ್ಪ, ಕೆ.ಕೆ.ಆರ್.ಟಿ.ಸಿ. ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ನಗರ ಸಾರಿಗೆ-202, ಸಾಮಾನ್ಯ ಸಾರಿಗೆ-1,533, ವೇಗದೂತ-1,427, ಆಯ್ದ ಅಂತರ ರಾಜ್ಯ-216 ಸೇರಿದಂತೆ ಒಟ್ಟು 3,378 ಬಸ್ಸುಗಳಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಆಧಾರ್ ಕಾರ್ಡ್, ವೋಟರ್ ಐ.ಡಿ., ರಾಜ್ಯ ಮತ್ತು ಕೇಂದ್ರ ಸರ್ಕಾರ ನೀಡಿರುವ ವಾಸಸ್ಥಳದ ಗುರುತಿನ ಚೀಟಿ ತೋರಿಸಿ ಶೂನ್ಯ ಟಿಕೆಟ್ ಪಡೆದು ಉಚಿತ ಪ್ರಯಾಣ ಬೆಳೆಸಬಹುದಾಗಿದೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತೀಮಾ, ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ವಿಶಾಲ ಧರ್ಗಿ, ಪಾಲಿಕೆ ಸದಸ್ಯರಾದ ವರ್ಷಾ ಜಾನೆ, ಸಚಿನ್ ಶಿರವಾಳ, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಜಿಲ್ಲಾ ಪಂಚಾಯತ್  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಡಿ. ಬದೋಲೆ, ಕಲಬುರಗಿ ನಗರ ಪೋಲೀಸ್ ಆಯುಕ್ತ ಚೇತನ್ ಆರ್.,ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಆಯುಕ್ತ ಆನಂದ ಪ್ರಕಾಶ ಮೀನಾ, ಕೆ.ಕೆ.ಆರ್.ಟಿ.ಸಿ. ಸಿ.ಟಿ.ಎಂ. ಸಂತೋಷ, ವಿಭಾಗೀಯ ನಿಯಂತ್ರಣಾಧಿಕಾರಿ ಗಂಗಾಧರ, ಸಹಾಯಕ ಆಯುಕ್ತೆ ಮಮತಾ ಕುಮಾರಿ, ಮಾಜಿ ಮೇಯರ್ ಶರಣು ಮೋದಿ, ಡಿ.ಸಿ.ಸಿ. ಅಧ್ಯಕ್ಷ ಜಗದೇವ ಗುತ್ತೇದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.