ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ವಿವಿಧ ಪ್ರಕರಣದಲ್ಲಿ ಬಂಧನಕ್ಕೊಳಗಾದವರಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಅರೋಪ ಕೇಳಿಬರುತ್ತಿದ್ದು, ಈ ಕುರಿತು ನಾಳೆಯೊಳಗೆ ಸಮಗ್ರ ವರದಿ ಸಲ್ಲಿಸವಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನ ಕುಮಾರ ಮತ್ತು ಎಸ್.ಪಿ. ಅಡ್ಡೂರು ಶ್ರೀನುವಾಸಲು ಅವರಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಖಡಕ್ ಸೂಚನೆ ನೀಡಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಂಜೆತನವು ವಿವಾಹಿತ ದಂಪತಿಗಳ ಮಾನಸಿಕ ಆರೋಗ್ಯವನ್ನು ಹಾಳುಮಾಡುತ್ತದೆ, ಖಂಡಿತವಾಗಿಯೂ ಈ ಸಲಹೆಗಳನ್ನು ಅನುಸರಿಸಿ


ಬುಧವಾರ ಇಲ್ಲಿ ನಡೆದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ( ಕೆ.ಡಿ.ಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅರಂಭವಾಗುತ್ತಿದ್ದಂತೆ, ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ರಂಗನಾಥ ಅವರನ್ನು ಜೈಲಿನಲ್ಲಿ ಏನು ನಡಿತಾ ಇದೆ. ಅಕ್ರಮವಾಗಿ ಗುಟಕಾ ಪೂರೈಸಲಾಗುತ್ತಿದೆಯಂತೆ ಎಂದು ಪ್ರಶ್ನಿಸಿದರು.ಇದೆಲ್ಲದಕ್ಕು ಕಡಿವಾಣ ಹಾಕಬೇಕು. ಯಾವುದೇ ಅಕ್ರಮ ಚಟುಚಟಿಕೆ ಜೈಲು ಅಡ್ಡವಾಗಬಾರದು. ಅಲ್ಲಿನ ಸಿ.ಸಿ.ಟಿ.ವಿ. ಫೂಟೇಜ್ ತರಸಿ ಎಂದು ಸೂಚಿಸಿದರು.


ಇದನ್ನೂ ಓದಿ: ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸುತ್ತೆ ಈ ಡ್ರಿಂಕ್, ತಯಾರಿಸುವುದು ಕೂಡ ತುಂಬಾ ಸಿಂಪಲ್ಲಾಗಿದೆ!


ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ,ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಸೋಮಶೇಖರ ಗೋನಾಯಕ್, ‌ಶಾಸಕರಾದ ಬಿ.ಆರ್.ಪಾಟೀಲ, ಎಂ.ವೈ.ಪಾಟೀಲ, ಕನೀಜ್ ಫಾತಿಮಾ, ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ, ಅಲ್ಲಮಪ್ರಭು ಪಾಟೀಲ, ಶಶೀಲ ಜಿ. ನಮೋಶಿ, ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ತಿಪ್ಪಣಪ್ಪ ಕಮಕನೂರ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಆರ್.ಚೇತನಕುಮಾರ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ ಸೇರಿದಂತೆ ಅನೇಕ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.