ಬೆಂಗಳೂರು: ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಭಗವಾಧ್ವಜ ತೆರವು ವಿಚಾರವಾಗಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು, ʼಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎನಿಸುತ್ತದೆ ಎಂದು ಟೀಕಿಸಿದ್ದಾರೆ.
ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದ್ದಾರೆ. ವಿರೋಧ ಪಕ್ಷದ ನಾಯಕನೆಂದರೆ ಘನತೆಯುಕ್ತ ಸ್ಥಾನ, ಆ ಸ್ಥಾನದ ಗೌರವವನ್ನು ಮಣ್ಣುಪಾಲು ಮಾಡುತ್ತಿರುವ ಆರ್.ಅಶೋಕ್ ಅವರೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ನಿಮ್ಮ ಗಮನಕ್ಕೆ ಕೆಲವು ವಿಚಾರಗಳು ಎಂದು ಟ್ವೀಟ್ ಮಾಡಿದ್ದಾರೆ.
ಪ್ರಿಯಾಂಕ್ ಖರ್ಗೆ ಹೇಳಿರುವ 4 ಅಂಶಗಳು
ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ.
ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎನಿಸುತ್ತದೆ.ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ… pic.twitter.com/9RNKWOVKOr
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 28, 2024
◆ 29/12/2023 ರಂದು ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಮಾತ್ರ ಹಾರಿಸುತ್ತೇವೆ ಎಂದು ಗೌರಿಶಂಕರ ಸೇವಾ ಟ್ರಸ್ಟ್ ನವರು ಧ್ವಜ ಸ್ಥಂಭಕ್ಕೆ ಅನುಮತಿ ಕೇಳಿದ್ದಾರೆ.
◆ 17/01/2024ರಂದು ಧ್ವಜ ಸ್ಥಂಭದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಬಿಟ್ಟು ಇನ್ನಿತರ ಯಾವುದೇ ರಾಜಕೀಯ, ಧಾರ್ಮಿಕ ಧ್ವಜವವನ್ನು ಹಾರಿಸುವುದಿಲ್ಲವೆಂದು ಮುಚ್ಚಳಿಕೆ ಬರೆದುಕೊಟ್ಟು ಸಹಿ ಮಾಡಿದ್ದಾರೆ.
◆ 18/01/2024ರಂದು ಕೆರೆಗೋಡು ಗ್ರಾಮ ಪಂಚಾಯ್ತಿಯ ಅಧಿಕಾರಿಗಳು ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜಾರೋಹಣಕ್ಕೆ ಮಾತ್ರ ಶರತ್ತುಗಳೊಂದಿಗೆ ಅನುಮತಿ ಪತ್ರ ನೀಡಿದ್ದಾರೆ.
◆ ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾಡುವ ಮಾರ್ಪಾಡುಗಳಿಗೆ ಬದ್ಧರಾಗಿರಬೇಕೆಂದು ತಿಳಿಸಲಾಗಿದೆ. ಯಾವುದೇ ಗಲಭೆಗಳಿಗೆ ಅವಕಾಶ ಮಾಡಿಕೊಡದಂತೆ ಷರತ್ತು ವಿಧಿಸಲಾಗಿದೆ ಮತ್ತು ಧ್ವಜಾರೋಹಣ ಮಾಡುವ 6,7 ದಿನ ಮುಂಚಿತವಾಗಿ ಗ್ರಾಮ ಪಂಚಾಯ್ತಿ ಹಾಗೂ ಪೊಲೀಸರಿಗೆ ತಿಳಿಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಬಿಗ್ ಬಾಸ್ ಸ್ವರ್ಧಿ ಡ್ರೋಣ್ ಪ್ರತಾಪ್ ವಿರುದ್ಧ ದೂರು
ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳು
◆ ರಾಷ್ಟ್ರ ಧ್ವಜದ ಬದಲು ಏಕಾಏಕಿ ಭಾಗವಾಧ್ವಜ ಹಾರಿಸುವ ಷಡ್ಯಂತ್ರ ರೂಪಿಸಿದ್ದು ಯಾರು?
◆ ಅನುಮತಿ ಪತ್ರದ ಷರತ್ತುಗಳನ್ನು ಉಲ್ಲಂಘಿಸಲು ಪ್ರೇರೇಪಿಸಿದ್ದು ಯಾರು?
◆ ಬಿಜೆಪಿ ಅದೆಷ್ಟು ದಿನಗಳಿಂದ ಶಾಂತಿ ಕೆಡಿಸುವ ಸಂಚು ರೂಪಿಸಿತ್ತು?
◆ ಕಾನೂನು, ನೀತಿ ನಿಯಮಗಳೇನು ಬಿಜೆಪಿ ಕಾಲ ಕೆಳಗಿನ ಕಸದಂತೆ ನೋಡುವುದೇಕೆ?
ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದ RSS ಹೇಳಿಕೊಟ್ಟ ಪಾಠದಂತೆ ಬಿಜೆಪಿಯೂ ತಿರಂಗಾ ಕಂಡರೆ ಉರಿದು ಬೀಳುತ್ತಿದೆ, ರಾಷ್ಟ್ರ ಧ್ವಜಕ್ಕೆ ಕೈ ಮುಗಿಯುವ ಬದಲು ಕೆಂಡ ಕಾರುತ್ತಿದೆ. ಬಿ.ವೈ.ವಿಜಯೇಂದ್ರ ಹಾಗೂ ಆರ್.ಅಶೋಕ್ ಅವರೇ ಸರ್ಕಾರ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಆ ಧ್ವಜ ಸ್ಥಂಭದ ಉದ್ದೇಶವನ್ನು ಈಡೇರಿಸಿದೆ, ಹೀಗಿದ್ದೂ ನಿಮಗೆ ಇಷ್ಟೊಂದು ಉರಿ, ತಾಪವೇಕೆ? ರಾಷ್ಟ್ರ ಧ್ವಜವನ್ನು ದ್ವೇಷಿಸುವ ಮೂಲಕ ಬಿಜೆಪಿಗರು ತಮಗೆ ತಾವೇ ದೇಶದ್ರೋಹಿಗಳು ಎಂದು ಸರ್ಟಿಫಿಕೇಟ್ ಕೊಟ್ಟುಕೊಂಡಿದ್ದಾರೆ. ಬಿಜೆಪಿಗರಿಗೆ ದೇಶದ ಧ್ವಜ, ದೇಶದ ಸಂವಿಧಾನ, ದೇಶದ ಐಕ್ಯತೆ ಇಷ್ಟವಿಲ್ಲವೆಂದರೆ ಅವರ ಪ್ರೀತಿಪಾತ್ರವಾದ ಪಾಕಿಸ್ತಾನಕ್ಕೆ ಹೋಗಲಿ. ಬಿಜೆಪಿಯ ಯಾವುದೇ ತಂತ್ರ, ಕುತಂತ್ರಗಳಿಗೆ ನಾವು ಬಗ್ಗುವುದಿಲ್ಲ, ಬಗ್ಗುಬಡಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಮಳೆ, ಬೆಳೆ ಹಾಗೂ ಲೋಕ ಕಲ್ಯಾಣಕ್ಕಾಗಿ ಪಾದಯಾತ್ರೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=xFI-KJNrEP8
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.