ಆದಿಚುಂಚನಗಿರಿ ಶ್ರೀಗಳ ಹೆಗಲ ಮೇಲೆ ಸಚಿವ ಅಶೋಕ್ ‘ಕೈ’: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು ಸಚಿವ ಆರ್.ಅಶೋಕ್ ಅವರಿಗೆ ಸದರ ಎನಿಸಿದ್ದಾರೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಬೆಂಗಳೂರು: ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ. ಕಾರ್ಯಕ್ರಮದ ವೇಳೆ ಗಣ್ಯ ವ್ಯಕ್ತಿಗಳು ಕೆಂಪೇಗೌಡರ ಪ್ರತಿಮೆ ಬಳಿ ನಿಂತು ಪ್ರಧಾನಿ ಮೋದಿಯವರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಶ್ರೀಗಳಾದ ನಿರ್ಮಲಾನಂದ ಸ್ವಾಮೀಜಿಯವರ ಹೆಗಲ ಮೇಲೆ ಕಂದಾಯ ಸಚಿವ ಆರ್.ಅಶೋಕ್ ಕೈ ಹಾಕಿರುವ ಫೋಟೋ ವೈರಲ್ ಆಗಿದೆ.
ಈ ಫೋಟೋವನ್ನು ಟ್ವಿಟರ್‍ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ಸಚಿವ ಆರ್.ಅಶೋಕ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಸ್ವಾಮೀಜಿಗಳ ಹೆಗಲ ಮೇಲೆ ಕೈ ಹಾಕುವ ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲವೆಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
“ಸಿದ್ದರಾಮಯ್ಯರದು ರಾಜ್ಯ ನನ್ನಿಂದಲೇ ಬೆಳಗುತ್ತಿದೆ ಎಂದು ಹೇಳಿಕೊಳ್ಳುವ ಚಪಲತೆ”
‘ಸ್ವಾಮಿಜಿಗಳಿಗೆ ಅವರದ್ದೇ ಆದ ಗೌರವ, ಘನತೆ ಇರುತ್ತದೆ. ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು ಸಚಿವ ಆರ್.ಅಶೋಕ್ ಅವರಿಗೆ ಸದರ ಎನಿಸಿದ್ದಾರೆಯೇ? ಇದೇ ರೀತಿ ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯವಿದೆಯೇ? ಧರ್ಮ, ಸಂಸ್ಕೃತಿಯ ಬಗ್ಗೆ ಮಾತಾಡುವ ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ’ವೆಂದು ಕಾಂಗ್ರೆಸ್ ಟೀಕಿಸಿದೆ.
‘ರಾಜ್ಯದ ಮುಖ್ಯಮಂತ್ರಿ ಫೋಟೋ ತೆಗೆಸಿಕೊಳ್ಳಲೂ ಹರಸಾಹಸಪಡಬೇಕೇ? ಪ್ರಧಾನಿ ಪಕ್ಕ ಸ್ವತಂತ್ರವಾಗಿ ನಿಲ್ಲಲೂ ಬಸವರಾಜ ಬೊಮ್ಮಾಯಿಯವರಿಗೆ ಸಾಧ್ಯವಾಗುತ್ತಿಲ್ಲವೆಂದರೆ ಸಿಎಂ ಹುದ್ದೆಗೆ ಆಗುತ್ತಿರುವ ಅವಮಾನವಿದು. ಜಗ್ಗೇಶ್ ಅವರ ಹಿಂದೆ ನಿಂತು ಅವರನ್ನು ತಳ್ಳಿಕೊಂಡು ಮುಖ ತೋರಿಸುವ #PuppetCM ಅವರ ಸ್ಥಿತಿ ಶೋಚನೀಯವಾಗಿದೆ!’ ಎಂದು ಕಾಂಗ್ರೆಸ್ ಕುಟುಕಿದೆ.
2ನೇ ಮದುವೆ ರದ್ದು: ಮೊದಲ ಪತ್ನಿಯೊಂದಿಗೆ ಯೋಧ ಆತ್ಮಹತ್ಯೆ..!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.