ಬೆಂಗಳೂರು : ಪಾಯಿಂಟ್ ಟು ಪಾಯಿಂಟ್ ಮತ್ತು ವೇಗದೂತ ಬಸ್‌ಗಳ ಕಾರ್ಯಾಚರಣೆಗೆ ನಿಯೋಜಿಸಲಾಗುವ ನೂತನ ಕರ್ನಾಟಕ ಸಾರಿಗೆ ವಾಹನದ ಪ್ರೋಟೋ ಟೈಪ್ ವಾಹನ ವಿನ್ಯಾಸವನ್ನು ಸಚಿವ ರಾಮಲಿಂಗಾರೆಡ್ಡಿ ನಿಗಮದ ಕೇಂದ್ರ ಕಛೇರಿಯಲ್ಲಿ ಪರಿಶೀಲಿಸಿದರು.
ಪ್ರೋಟೋ ಟೈಪ್ ವಾಹನವು ಪಾಯಿಂಟ್ ಟು ಪಾಯಿಂಟ್ ಮತ್ತು ವೇಗದೂತ ವಾಹನವನ್ನಾಗಿ ಉಪಯೋಗಿಸಲಿದ್ದು, ಮುಂಬರುವ ಎಲ್ಲಾ ಹೊಸ ಬಸ್ಸುಗಳು ಈ ರೀತಿಯ ವಿನ್ಯಾಸ ವನ್ನು ಹೊಂದಲಿದೆ. ಈ ವೇಳೆ ಮಾದ್ಯಮಗಳೊಂದಿಗೆ ಮಾತನಾಡಿದ ಸಚಿವರು, ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ವಾಹನಗಳನ್ನು ಕಾರ್ಯಾಚರಣೆಗೊಳಿಸಿ, ಉತ್ತಮ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಈ ಎಲ್ಲಾ ಬದಲಾವಣೆಗಳನ್ನು ತರಲಾಗಿದೆ ಹಾಗೂ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಒಂದು ತಿಂಗಳ ಅವಧಿಯಲ್ಲಿ ಹೊಸ ಬಸ್ಸುಗಳು ಬರಲಿದ್ದು, ಎಲ್ಲಾ ಹೊಸ ವಾಹನಗಳು ಈ ಮಾದರಿಯ ವಿನ್ಯಾಸವನ್ನು ಹೊಂದಿರಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ನಮ್ಮ ಹೆಸರಲ್ಲಿ ನೈಸ್ ಆಸ್ತಿ ಇದ್ದರೆ ಇಡೀ ಕುಟುಂಬವೇ ರಾಜಕೀಯ ನಿವೃತ್ತಿ: ಎಚ್.ಡಿ.ಕುಮಾರಸ್ವಾಮಿ
ನೂತನವಾಗಿ ಕಾರ್ಯಾಚರಣೆಗೆ ನಿಯೋಜಿಸಲಾಗುವ ಕರ್ನಾಟಕ ಸಾರಿಗೆ ಬಸ್‌ಗಳನ್ನು ಮೆ. ಕೆ.ಎಂ.ಎಸ್. ಕೋಚ್ ಬಿಲ್ಡರ್ಸ ರವರು ನಿರ್ಮಾಣ ಮಾಡಿದ್ದಾರೆ. ಈ ಬಸ್‌ಗಳು ಈ ಕೆಳಕಂಡ ವಿಶಿಷ್ಟತೆಗಳನ್ನು ಹೊಂದಿವೆ.
- ವಾಹನದ ಎತ್ತರ 3420 ಮಿ.ಮಿ. ಇದೆ.
- ಆಸನಗಳ ಸಂಖ್ಯೆ 52 ಇವೆ.
- ಪ್ರಯಾಣಿಕರ ಆಸನ - ಬಕೆಟ್ ಟೈಪ್
- ವಾಹನದ ಮುಂದಿನ/ ಹಿಂದಿನ ಗಾಜು ವಿಶಾಲವಾಗಿರುತ್ತದೆ.
- ಪ್ರಯಾಣಿಕರ ಕಿಟಕಿ ಪ್ರೇಮ್ ಹಾಗೂ ಮೇಲಿನ ಗಾಜು ವಿಶಾಲವಾಗಿರುತ್ತದೆ.
- ಕಿಟಕಿಗೆ ದೊಡ್ಡದಾದ ಟಿಂಟೆಡ್ ಗಾಜುಗಳನ್ನು ಅಳವಡಿಸಲಾಗಿದೆ.
- ವಾಹನದ ಒಳಾಂಗಣದ ಲಗೇಜ್ ಕ್ಯಾರಿಯರ್ ವಿನೂತನ ವಿನ್ಯಾಸ ಹೊಂದಿದೆ.
- ಬಸ್ ಒಳಾಂಗಣದಲ್ಲಿ ಸತತವಾದ ಎಲ್.ಇ. ಡಿ ದೀಪ ಅಳವಡಿಸಲಾಗಿದೆ.
- ಹಿಂದಿನ/ಮುಂದಿನ ಮಾರ್ಗ - ಎಲ್.ಇ.ಡಿ ಮಾರ್ಗ ಫಲಕ ಅಳವಡಿಕೆ
- ಬ್ಯಾನೆಟ್ ಇನ್ಸುಲೇಶನ್ ಮತ್ತು ರೆಕ್ಸಿನ್ ಪ್ಯಾಡಿಂಗ್
- ಬಾಗಿಲಿಗೆ ಸ್ವಯಂಚಾಲಿತ ಸೆನ್ಸರ್ ಮತ್ತು ತುರ್ತು ಬಟನ್ ವ್ಯವಸ್ಥೆ
- ವಾಹನದ ಮುಂಭಾಗ ವಿನೂತನ ಆರ್ಕಷಕ ವಿನ್ಯಾಸದ ದೊಡ್ಡ ಗ್ಲಾಸ್ ಅಳವಡಿಕೆ
- ಲಗ್ಗೇಜ್ ಕ್ಯಾರಿಯರ್ ವಿಶಾಲವಾಗಿದ್ದು, ಒಳ ಭಾಗದಲ್ಲಿ ಎತ್ತರವಾಗಿದ್ದು, ಹೆಚ್ಚಿನ ಸಾಮಗ್ರಿಗಳನ್ನು ಸಾಗಿಸಬಹುದಾಗಿದೆ.
- ಈ ಬಸ್ ಎಲ್ಲಾ ಜಿಲ್ಲಾ ಕೇಂದ್ರದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸಲಿದೆ.
- ಆಸನಗಳ ಮಧ್ಯೆ (leg space) ಸ್ಥಳಾವಕಾಶವನ್ನು ಹೆಚ್ಚಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.