ಬೆಂಗಳೂರು: ನನಗೆ ಸಿ.ಪಿ.ಯೋಗೇಶ್ವರ್ ತುಂಬಾ ಪರಿಚಯ ಹಾಗೂ ಆತ್ಮೀಯರು. ಅವರಿಗೆ ಮಂತ್ರಿ ಸ್ಥಾನ ಕೊಡಿಸಲು ಹೋರಾಟ ಮಾಡುತ್ತೇನೆ. ಕೊನೆಯವರೆಗೂ ಅವರ ಪರ ಬ್ಯಾಟಿಂಗ್ ಮಾಡುತ್ತೇನೆ. ಆದರೆ ಸಚಿವ ಸ್ಥಾನ ನೀಡುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟಿದ್ದು. ಪಕ್ಷದ ಕೆಲವು ಶಾಸಕರು ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಅವರ ಪರವಾಗಿ ನಾನು ಕೆಲಸ ಮಾಡುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ(Ramesh Jarkiholi) ಬಹಿರಂಗವಾಗಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಸದಾಶಿವ ನಗರದ ತಮ್ಮ ನಿವಾಸದಲ್ಲಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹಾಗೂ ಬಿಜೆಪಿ ಹಿರಿಯ ನಾಯಕ ಪ್ರಭಾಕರ ಕೋರೆಯನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದ್ದೇನೆ. ಆದರೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಅವರ ಹಿತ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ ಎಂದು ಪರೋಕ್ಷವಾಗಿ ಮೂಲ ಬಿಜೆಪಿ ಶಾಸಕರಿಗೆ ತಿರುಗೇಟು ನೀಡಿದ್ದಾರೆ.


ಸಿಎಂ ಬಿಎಸ್ ವೈ ಹೇಳಿಕೆಯಿಂದ ಇನ್ನಷ್ಟು ಗರಿಗೆದರಿದ ಸಚಿವ ಸಚಿವಾಕಾಂಕ್ಷಿಗಳ ನಿರೀಕ್ಷೆ!


ರಮೇಶ್ ಜಾರಕಿಹೊಳಿ ಮೂಲ ಬಿಜೆಪಿಗರಿಗಿಂತ ಹೆಚ್ಚು ಸ್ಟ್ರಾಂಗ್ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನೇನು ಅಷ್ಟು ಶಕ್ತಿವಂತನಲ್ಲ. ಮಾಧ್ಯಮದವರೇ ಸೇರಿಕೊಂಡು ನನ್ನನ್ನು ಸ್ಟ್ರಾಂಗ್ ಮಾಡಿದ್ದೀರಿ. ನೀರಾವರಿ ಸಚಿವ ನಾನು, ನೀರಾವರಿ ಸಮಸ್ಯೆಗಳ ಬಗ್ಗೆ ಚರ್ಚಿಸಲು ಶಾಸಕರು ಬರ್ತಾರೆ ಅಷ್ಟೇ. ನಾನು ಉಪ ಮುಖ್ಯಮಂತ್ರಿ ಸ್ಥಾನವನ್ನು ಎಂದೂ ಕೇಳಿಲ್ಲ. ಮುಂದೆಯೂ ಕೇಳುವುದಿಲ್ಲ. ಮುಖ್ಯಮಂತ್ರಿಗಳು ನನಗೆ ವಿಶ್ವಾಸದಿಂದ ನೀರಾವರಿ ಖಾತೆ ಕೊಟ್ಟಿದ್ದಾರೆ. ಇದರಲ್ಲೇ ನಾನು ಬಹಳ ಸಂತೋಷದಿಂದ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.


ಡಿ. 5 ರಂದು 'ಕರ್ನಾಟಕ ಬಂದ್' ಪಕ್ಕಾ: ವಾಟಾಳ್ ನಾಗರಾಜ್