Reopen School-College : ರಾಜ್ಯದಲ್ಲಿ 'ಶಾಲಾ-ಕಾಲೇಜು' ಆರಂಭದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವರು!

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಡೆಸಿದ ಅಧ್ಯಯನದಲ್ಲಿ ಶಾಲೆಗಳು ನಡೆಯದ ಕಾರಣ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ಹೊರಗುಳಿದು ಶೈಕ್ಷಣಿಕ ಚಟುವಟಿಕೆಗಳಿಂದ ಹೊರಗುಳಿದಿದ್ದಾರೆ ಎಂಬ ಅಂಶವು ಬಹಿರಂಗಗೊಂಡಿದೆ

Last Updated : Jun 22, 2021, 12:17 PM IST
  • ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಲಿದೆ ಎನ್ನಲಾಗುತ್ತಿರುವ ಡಾ.ದೇವಿಶೆಟ್ಟಿ ಅವರ ವರದಿ
  • ಶಾಲಾ ಚಟುವಟಿಕೆಗಳ‌ ಕುರಿತಂತೆ ಮುಂದಿನ‌ ದಿನಗಳಲ್ಲಿ ಸೂಕ್ತ‌ ನಿರ್ಣಯ
  • ಶಾಲೆಗಳು ನಡೆಯದ ಕಾರಣ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ಹೊರಗುಳಿದು
Reopen School-College : ರಾಜ್ಯದಲ್ಲಿ 'ಶಾಲಾ-ಕಾಲೇಜು' ಆರಂಭದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವರು! title=

ಬೆಂಗಳೂರು : ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಲಿದೆ ಎನ್ನಲಾಗುತ್ತಿರುವ ಡಾ.ದೇವಿಶೆಟ್ಟಿ ಅವರ ವರದಿಯು ತಮ್ಮ‌ ಕೈಸೇರಿದ ಬಳಿಕ ಅದನ್ನು ಕೂಲಂಕಶವಾಗಿ ಪರಿಶೀಲಿಸಿ, ಶಾಲಾ ಚಟುವಟಿಕೆಗಳ‌ ಕುರಿತಂತೆ ಮುಂದಿನ‌ ದಿನಗಳಲ್ಲಿ ಸೂಕ್ತ‌ ನಿರ್ಣಯ ತೆಗೆದುಕೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‌ ಕುಮಾರ್ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಕುರಿತಂತೆ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್‌ ಕುಮಾರ್(S Suresh Kumar), ತರಗತಿ ಕಲಿಕೆಯ ಬಗ್ಗೆ ವರದಿಯಲ್ಲಿ‌ ಉಲ್ಲೇಖವಿದೆ ಎಂದು ಮಾಧ್ಯಮಗಳಲ್ಲಿಯಷ್ಟೇ ನೋಡಿದ್ದೇನೆ.‌ವರದಿ ತಮ್ಮ‌ ಕೈಸೇರಿದ ಬಳಿಕವಷ್ಟೇ ಪ್ರತಿಕ್ರಯಿಸಲು ಸಾಧ್ಯ ಎಂದರು.

ಇದನ್ನೂ ಓದಿ : Interstate Bus Travel : ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ : ಇಂದಿನಿಂದ ಅಂತರರಾಜ್ಯ ಪ್ರಯಾಣ ಆರಂಭ!

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಡೆಸಿದ ಅಧ್ಯಯನದಲ್ಲಿ ಶಾಲೆಗಳು(Schools) ನಡೆಯದ ಕಾರಣ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ಹೊರಗುಳಿದು ಶೈಕ್ಷಣಿಕ ಚಟುವಟಿಕೆಗಳಿಂದ ಹೊರಗುಳಿದಿದ್ದಾರೆ ಎಂಬ ಅಂಶವು ಬಹಿರಂಗಗೊಂಡಿದೆ. ಈ ಅಧ್ಯಯನ ವರದಿಯ ಬೆಳಕಿನಲ್ಲಿ ನಾವು ಈ ವರ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಹೆಚ್ಚಿನ ರೀತಿಯ ಗಮನಹರಿಸುವ ಸವಾಲು ನಮ್ಮ ಮುಂದಿದೆ.

ಇದನ್ನೂ ಓದಿ : Rainfall in Karnataka : ರಾಜ್ಯದಲ್ಲಿ 2 ದಿನ ಮಳೆ ಮುಂದುವರಿಕೆ : ಹಲವು ಕಡೆ 'ಯೆಲ್ಲೋ ಅಲರ್ಟ್' ಘೋಷಣೆ!

ಸರ್ಕಾರಕ್ಕೆ ಶಾಲೆಗಳನ್ನು ತೆರೆಯಬೇಕೆಂಬ ಉತ್ಸುಕತೆ, ತರಗತಿ(Classes) ಕಲಿಕೆ ಮುಖ್ಯವೆನ್ನುವುದು ಸಾಮಾನ್ಯ ಅಭಿಪ್ರಾಯವಾಗಿದ್ದರೂ ಹಲವಾರು ಅಂಶಗಳನ್ನು ಗಮನಿಸಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಡಾ.ದೇವಿಶೆಟ್ಟಿ ಅವರು ಸಲ್ಲಿಸಲಿರುವ ವರದಿಯನ್ನು ಪರಿಪೂರ್ಣವಾಗಿ ಗಮನಿಸಿ ಕ್ಲಪ್ತ‌ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.

ಇದನ್ನೂ ಓದಿ : SSLC Exam 2021 : 'SSLC' ಪರೀಕ್ಷೆ 2021 ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News