S.Suresh Kumar: ಶಿಕ್ಷಕರ ಪರವಾಗಿ ಮೋದಿ ಮುಂದೆ ಮಹತ್ವದ ಬೇಡಿಕೆ ಇಟ್ಟ ಸಚಿವ ಸುರೇಶ್ ಕುಮಾರ್!

ರಾಜ್ಯದ ಶಿಕ್ಷಕರನ್ನು ಕೂಡ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ಲಸಿಕೆ ನೀಡಬೇಕು ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

Last Updated : Jan 29, 2021, 10:23 PM IST
  • ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್
  • ರಾಜ್ಯದ ಶಿಕ್ಷಕರನ್ನು ಕೂಡ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ಲಸಿಕೆ ನೀಡಬೇಕು ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್
  • ಈ ಸಂಬಂಧ ಪ್ರಧಾನಿ ಹಾಗೂ ಕೇಂದ್ರ ಆರೋಗ್ಯ ಸಚಿವ ಡಾ, ಹರ್ಷವರ್ಧನ್ ಗೆ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ ಸಚಿವ ಸುರೇಶ್ ಕುಮಾರ್
S.Suresh Kumar: ಶಿಕ್ಷಕರ ಪರವಾಗಿ ಮೋದಿ ಮುಂದೆ ಮಹತ್ವದ ಬೇಡಿಕೆ ಇಟ್ಟ ಸಚಿವ ಸುರೇಶ್ ಕುಮಾರ್! title=

ಬೆಂಗಳೂರು: ರಾಜ್ಯದ ಶಿಕ್ಷಕರನ್ನು ಕೂಡ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ಲಸಿಕೆ ನೀಡಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದ್ದಾರೆ.

ಈ ಸಂಬಂಧ ಪ್ರಧಾನಿ ಹಾಗೂ ಕೇಂದ್ರ ಆರೋಗ್ಯ ಸಚಿವ ಡಾ, ಹರ್ಷವರ್ಧನ್ ಗೆ ಸುರೇಶ್ ಕುಮಾರ್(S Suresh Kumar) ಪತ್ರ ಬರೆದಿದ್ದಾರೆ. ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡುವ ಹಾಗೆ ಶಿಕ್ಷಕರನ್ನು ಸಹ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೂ ಲಸಿಕೆ ನೀಡಲು ಆದ್ಯತೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಶಿಕ್ಷಣ ಇಲಾಖೆ ನೌಕರರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಲಸಿಕೆ ನೀಡಲು ಆದ್ಯತೆ ನೀಡಬೇಕೆಂದು ಕೋರಿದ್ದಾರ.

KR Ramesh Kumar: 'ರಾಮಮಂದಿರ ಕಟ್ಟಿದರೆ ಸಾಕು ಎನ್ನುವವರಿಗೆ ದೇಶ ಬಿಟ್ಟಿದ್ದೇವೆ'

ಶಾಲಾ ಶಿಕ್ಷಕರು ಕೊರೊನಾ ವಾರಿಯರರ್ಸ್ ಆಗಿ ಕಂಟನ್ಮೆಂಟ್ ವಲಯದಲ್ಲಿ ಕೆಲಸ ಮಾಡಿದ್ದಾರೆ. ಆರೋಗ್ಯ ಕಾರ್ಯಕರ್ತರ ಜೊತೆ ಜೊತೆಯಾಗಿ ದುಡಿದಿದ್ದಾರೆ. ಈಗಾಗಲೇ ಶಾಲೆಗಳು ಆರಂಭವಾಗಿದೆ. ಮಕ್ಕಳ ಹಾಗೂ ಶಿಕ್ಷಕರ ಹಿತದೃಷ್ಟಿಯಿಂದ ಶಿಕ್ಷಕರಿಗೆ ಲಸಿಕೆ ನೀಡುವ ಅಗತ್ಯವಿದೆ ಎಂದಿದ್ದಾರೆ. ಶಿಕ್ಷಕರನ್ನು ಸಹ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೂ ಲಸಿಕೆ ನೀಡಲು ಆದ್ಯತೆ ನೀಡಬೇಕೆಂದು ಮನವಿ ಮಾಡಿದ್ದಾರೆ.

Good News: ಖಾಸಗಿ ಶಾಲೆಗಳ ಶುಲ್ಕ ವಸೂಲಿ ಕ್ರಮಕ್ಕೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News