ಅಂಜನಾದ್ರಿ ಬೆಟ್ಟಕ್ಕೆ ಅಯೋಧ್ಯದಿಂದ ವಿಮಾನಯಾನ, ರೈಲು ಸೇವೆ: ಸಚಿವೆ ಶಶಿಕಲಾ ಜೊಲ್ಲೆ

ಹನುಮನ ಜನ್ಮಸ್ಥಳ ಅಂಜನಾದ್ರಿಯ  (Anjanadri) ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು 100 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಬಜೆಟ್‌ನಲ್ಲಿ ಘೋಷಿಸಿದ್ದಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

Written by - Prashobh Devanahalli | Edited by - Chetana Devarmani | Last Updated : Mar 9, 2022, 04:20 PM IST
  • ಅಯೋಧ್ಯದಿಂದ ಅಂಜನಾದ್ರಿ ಬೆಟ್ಟಕ್ಕೆ ಸಂಪರ್ಕ
  • ದೈವ ಸಂಕಲ್ಪ ಯೋಜನೆಯ ಅಡಿಯಲ್ಲಿ ಅಂಜನಾದ್ರಿ ಬೆಟ್ಟ ಸಮಗ್ರ ಅಭಿವೃದ್ಧಿ
  • ಪ್ರಧಾನಿ ಮೋದಿ ಅವರ ಟೆಂಪಲ್‌ ಟೂರಿಸಂ ರಾಜ್ಯದಲ್ಲಿ ಅಳವಡಿಕೆಗೂ ಆದ್ಯತೆ
ಅಂಜನಾದ್ರಿ ಬೆಟ್ಟಕ್ಕೆ ಅಯೋಧ್ಯದಿಂದ ವಿಮಾನಯಾನ, ರೈಲು ಸೇವೆ: ಸಚಿವೆ ಶಶಿಕಲಾ ಜೊಲ್ಲೆ  title=
ಶಶಿಕಲಾ ಜೊಲ್ಲೆ

ಬೆಂಗಳೂರು: ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಅಯೋಧ್ಯದಿಂದ (Ayodhya) ವಿಮಾನಯಾನ ಹಾಗೂ ರೈಲು ಸೇವೆ ಮೂಲಕ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ಬಗ್ಗೆ ಶೀಘ್ರ ಕ್ರಮಕೈಗೊಳ್ಳುವುದಾಗಿ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. 

ಇದನ್ನೂ ಓದಿ: ನಿರ್ಮಾಣ ಹಂತದ ಕಟ್ಟಡದಿಂದ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ಇಂದು ವಿಧಾನಪರಿಷತ್ತಿನಲ್ಲಿ ಎಂಎಲ್ ಸಿ ರವಿಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವೆ ಶಶಿಕಲಾ ಜೊಲ್ಲೆ, ಹನುಮನ ಜನ್ಮಸ್ಥಳ ಅಂಜನಾದ್ರಿಯ  (Anjanadri) ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು 100 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಬಜೆಟ್‌ನಲ್ಲಿ ಘೋಷಿಸಿದ್ದಾರೆ ಎಂದು ತಿಳಿಸಿದರು.

ದೈವ ಸಂಕಲ್ಪ ಯೋಜನೆ:

ಮುಜರಾಯಿ ಇಲಾಖೆಯ ವತಿಯಿಂದ ಫೆಬ್ರವರಿ 22 ರಂದು ದೈವ ಸಂಕಲ್ಪ ಯೋಜನೆಯನ್ನು (Daiva Sankalpa Scheme) ಪ್ರಾರಂಭಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಭಕ್ತರನ್ನು ಸೆಳೆಯುವ ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ ಮಾಸ್ಟರ್‌ ಪ್ಲಾನ್‌ ಮೂಲಕ ಅಭಿವೃದ್ದಿಗೊಳಿಸುವ ಯೋಜನೆ ಇದಾಗಿದೆ ಎಂದರು.
 
ಈ ಯೋಜನೆಯ ಅಡಿಯಲ್ಲಿ ಅಂಜನಾದ್ರಿ ಬೆಟ್ಟವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. 13 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳುವ ನಿಟ್ಟಿನಲ್ಲಿ 5.50 ಕೋಟಿ ರೂಪಾಯಿಗಳ ಪ್ರಸ್ತಾವನೆ ನಮ್ಮ ಮುಂದಿದೆ ಎಂದು ಹೇಳಿದರು. 

ಟೆಂಪಲ್‌ ಟೂರಿಸಂ ಗೆ ಆದ್ಯತೆ: 

ಪ್ರಧಾನಿ ನರೇಂದ್ರ ಮೋದಿ (Prime Minister Modi) ಅವರ ದೇವಸ್ಥಾನದ ಸಮಗ್ರ ಅಭಿವೃದ್ದಿಯ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ನಮ್ಮ ಮುಜರಾಯಿ ಇಲಾಖೆ ಕಾರ್ಯತತ್ಪರವಾಗಿದೆ. ಪ್ರಧಾನಿಗಳ ಟೆಂಪಲ್‌ ಟೂರಿಸಂ (Temple Tourism) ಅಳವಡಿಕೆಗೂ ಆದ್ಯತೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: 8 ಕೋಟಿ ರೂ. ಮೌಲ್ಯದ ಡ್ರಗ್ಸ್ ಡೀಲ್! ಮನೆಯಲ್ಲಿಯೇ ನಶೆ ಲೋಕ ಸೃಷ್ಟಿಸಿದ್ದ ಜೋಡಿ

ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ರಾಮಜನ್ಮಭೂಮಿ ಅಯೋಧ್ಯೆಯಿಂದ ಹನುಮ ಜನ್ಮಸ್ಥಳ ಅಂಜನಾದ್ರಿಗೆ ಸಂಪರ್ಕ ಕಲ್ಪಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ವಿಮಾನಯಾನ ಹಾಗೂ ರೈಲ್ವೇ ಸಂಪರ್ಕ ಪ್ಯಾಕೇಜನ್ನು ನಿರ್ಮಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದರು. 

ಅಂಜನಾದ್ರಿ ಬೆಟ್ಟದಲ್ಲಿ ವಸತಿ ಸೇರಿದಂತೆ ಸಮಗ್ರ ಅಭಿವೃದ್ದಿ: 

ಅಂಜನಾದ್ರಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ವಸತಿ ಸೌಲಭ್ಯ ಸೇರಿದಂತೆ ಸಮಗ್ರ ಅಭಿವೃದ್ದಿಗೆ ಯೋಜನೆಯನ್ನು ರೂಪಿಸಲಾಗಿದೆ. ವಸತಿ ಸೌಲಭ್ಯ, ಶೌಚಾಲಯ ವ್ಯವಸ್ಥೆ, ಪಾರ್ಕಿಂಗ್‌ ವ್ಯವಸ್ಥೆ, ಭೋಜನಾಲಯ, ಸ್ನಾನಘಟ್ಟ, ರಸ್ತೆ, ಒಳಚರಂಡಿ ಸೇರಿದಂತೆ ಹತ್ತು ಹಲವು ಕಾರ್ಯಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News