Shashikala Jolle: ಗರ್ಭಿಣಿಯರು, ಬಾಣಂತಿಯರಿಗೆ `ಸಿಹಿ ಸುದ್ದಿ` ನೀಡಿದ ಸಚಿವೆ ಶಶಿಕಲಾ ಜೊಲ್ಲೆ..!
ಗರ್ಭಿಣಿಯರು ಮತ್ತು ಬಾಣಂತಿಯರ ಮನೆಬಾಗಿಲಿಗೆ ಪೌಷ್ಟಿಕಾಂಶ ಆಹಾರ ಪೂರೈಕೆ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ
ಬೆಂಗಳೂರು: ಗರ್ಭಿಣಿಯರು ಬಾಣಂತಿಯರಿಗೆ ಮನೆ ಬಾಗಿಲಿಗೆ ಪೌಷ್ಟಿಕಾಂಶವುಳ್ಳ ಆಹಾರ ಪೂರೈಕೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ(Shashikala Jolle), ಗರ್ಭಿಣಿಯರು ಮತ್ತು ಬಾಣಂತಿಯರ ಮನೆಬಾಗಿಲಿಗೆ ಪೌಷ್ಟಿಕಾಂಶ ಆಹಾರ ಪೂರೈಕೆ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.
Basavaraj Dhadesugur: ಮಗ ಬಿಜೆಪಿ MLA, ತಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ..!
ಶಾಸಕ ಸಂಜೀವ್ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಬಾಣಂತಿಯರು, ಗರ್ಭಿಣಿಯರ ಮನೆಮನೆಗೆ ಪೌಷ್ಟಿಕಾಂಶವಿರುವ ಆಹಾರ ಪೂರೈಕೆ ಮಾಡುತ್ತಿದ್ದು, ಇದನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಅಂಗನವಾಡಿ ಕೇಂದ್ರಗಳು ಬಂದ್ ಆಗಿರುವುದರಿಂದ ಮಾತೃಪೂರ್ಣ ಯೋಜನೆಯಡಿ ಮನೆ ಬಾಗಿಲಿಗೆ ಆಹಾರ ಪದಾರ್ಥ ವಿತರಿಸಲಾಗಿತ್ತು. ಅಂಗನವಾಡಿ ಕೇಂದ್ರಗಳು ಆರಂಭವಾದ ನಂತರ ಮಧ್ಯಾಹ್ನ ಬಿಸಿಯೂಟ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಏರೋ ಇಂಡಿಯಾ 2021 ಉದ್ಘಾಟನಾ ವೇದಿಕೆಯಲ್ಲಿ ಕನ್ನಡ ಕಣ್ಮರೆ – ಹೆಚ್ ಡಿಕೆ ಅಸಮಾಧಾನ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.