ಕಾಂತರಾಜು ವರದಿ ಸ್ವೀಕಾರಕ್ಕೆ ಸರ್ಕಾರ ಸಿದ್ಧ: ಸಚಿವ ಶಿವರಾಜ್ ತಂಗಡಗಿ
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ವರದಿ ಸ್ವೀಕಾರ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ವರದಿ ಸಲ್ಲಿಕೆಯಾಗಿ, ಸಾಧಕ- ಬಾಧಕಗಳ ಬಗ್ಗೆ ಚರ್ಚೆ ನಡೆದು ಆ ಬಳಿಕ ನಿರ್ಧಾರ ಮಾಡಲಾಗುವುದು. ವರದಿಯಲ್ಲಿ ಏನಿದೆ ಎಂದು ಯಾರಿಗೂ ಗೊತ್ತಿಲ್ಲ. ವರದಿ ಬಗ್ಗೆ ಮೊದಲೇ ಕಲ್ಪನೆ ಮಾಡಿಕೊಳ್ಳುವುದು ಬೇಡ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ಬೆಂಗಳೂರು: ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ಅವರ ವರದಿಯನ್ನು ಸರ್ಕಾರ ಸ್ವೀಕಾರ ಮಾಡಲಿದ್ದು, ವರದಿ ಸ್ವೀಕಾರದ ಆ ಬಳಿಕ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.
ಕನಕದಾಸ ಜಯಂತಿ ಅಂಗವಾಗಿ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಸಚಿವರು ಗುರುವಾರ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ವರದಿ ಸ್ವೀಕಾರ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ವರದಿ ಸಲ್ಲಿಕೆಯಾಗಿ, ಸಾಧಕ- ಬಾಧಕಗಳ ಬಗ್ಗೆ ಚರ್ಚೆ ನಡೆದು ಆ ಬಳಿಕ ನಿರ್ಧಾರ ಮಾಡಲಾಗುವುದು. ವರದಿಯಲ್ಲಿ ಏನಿದೆ ಎಂದು ಯಾರಿಗೂ ಗೊತ್ತಿಲ್ಲ. ವರದಿ ಬಗ್ಗೆ ಮೊದಲೇ ಕಲ್ಪನೆ ಮಾಡಿಕೊಳ್ಳುವುದು ಬೇಡ ಎಂದರು.
ಇದನ್ನೂ ಓದಿ:ತುಮಕೂರಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಮದ್ಯ ಅಕ್ರಮ ಮಾರಾಟ
ಕೋಟ್ಯಂತರ ರೂಪಾಯಿ ವೆಚ್ಚ ಮಾಡಿಸಿ ಸಮೀಕ್ಷೆ ಮಾಡಿಸಿರುವ ವರದಿಯನ್ನು ಸ್ವೀಕಾರ ಮಾಡಲ್ಲ ಎನ್ನಲು ಸಾಧ್ಯವೇ ? ಸರ್ಕಾರದಲ್ಲಿ ಇತರೆ ಸ್ವೀಕಾರ ಮಾಡಲಾಗಿರುವ ಹತ್ತಾರು ವರದಿಗಳಿವೆ. ಯಾವುದೇ ವರದಿಯನ್ನು ಸರ್ಕಾರ ಸ್ವೀಕಾರ ಮಾಡಲಿದೆ. ಆ ಬಗ್ಗೆ ಚರ್ಚೆ ನಡೆದು ನಿರ್ಧಾರ ಆಗಲಿದೆ. ವರದಿ ಸ್ವೀಕಾರವಾಗದೆ, ಕಾಂತರಾಜು ವರದಿ ಬಗ್ಗೆ ವಿರೋಧ ವ್ಯಕ್ತಪಡಿಸುವುದು ಸೂಕ್ತವಲ್ಲ ಎಂದು ತಿಳಿಸಿದರು.
ಒಕ್ಕಲಿಗ ಸಮುದಾಯದ ಮುಖಂಡರು ನನ್ನನ್ನು ಭೇಟಿಯಾಗಿ ಕಾಂತರಾಜು ವರದಿ ಸ್ವೀಕಾರ ಮಾಡದಂತೆ ಮನವಿ ಮಾಡಿದರು. ನಾನು ಅವರನ್ನು ಉದ್ದೇಶಿಸಿ, ಕಾಂತರಾಜು ವರದಿಯಲ್ಲಿ ಏನಿದೆ ಎಂಬುದು ನಿಮಗೆ ತಿಳಿದಿದೆಯೇ ಎಂದು ಕೇಳಿದೆ. ಈ ವೇಳೆ ಒಕ್ಕಲಿಗ ಸಮುದಾಯದ ಮುಖಂಡರು ಇಲ್ಲ ಎಂದರು. ಹೀಗಾಗಿ ವರದಿ ಸ್ವೀಕಾರ ಮಾಡಿದ ಬಳಿಕ ವರದಿಯಲ್ಲಿ ಏನಿದೆ ಎಂಬುದು ಸರ್ಕಾರಕ್ಕೆ ತಿಳಿಯಲಿದ್ದು, ಈ ಹಂತದಲ್ಲಿ ವಿರೋಧ ಮಾಡುವ ಅಗತ್ಯವಿಲ್ಲ. ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಮನವರಿಕೆ ಮಾಡಿದ್ದೇನೆ ಎಂದು ವಿವರಿಸಿದರು.
ಇದನ್ನೂ ಓದಿ:ರಾಜ್ಯದ ಮುಖ್ಯಮಂತ್ರಿಗಳೇ ಹಾಗೂ ಸಚಿವರೇ ಈ ಸ್ಟೋರಿ ತಪ್ಪದೇ ನೋಡಿ
ಇನ್ನು ವರದಿ ವಿರೋಧಿಸಿ ವೀರಶೈವ ಲಿಂಗಾಯತ ಸಮುದಾಯದಕ್ಕೆ ಸೇರಿದ ಹಿರಿಯ ಶಾಸಕರೂ ಆದ ಶಾಮನೂರು ಶಿವಶಂಕರಪ್ಪ ಅವರು ಸಹಿ ಸಂಗ್ರಹ ಮಾಡುವುದಾಗಿ ಹೇಳಿಕೆ ನೀಡಿದ್ದರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ಗಮನ ಹರಿಸಲಿದ್ದಾರೆ ಎಂದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.