ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಮತ್ತು ವಿತರಕ ಕೆ.ಸಿ.ಎನ್. ಮೋಹನ್ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಶೋಕ ವ್ಯಕ್ತಪಡಿಸಿದ್ದಾರೆ.
ಕನ್ನಡ ಚಲನಚಿತ್ರ ರಂಗದ ಅತ್ಯಂತ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಎಂದು ಹೆಸರಾಗಿದ್ದ ಕೆಸಿಎನ್ ಸಂಸ್ಥೆ ಕನ್ನಡದಲ್ಲಿ ದೊಡ್ಡ ಬಜೆಟ್ ಚಿತ್ರಗಳಿಗೆ ಮುನ್ನುಡಿ ಬರೆದಿತ್ತು. ಕಸ್ತೂರಿ ನಿವಾಸ, ಸನಾದಿ ಅಪ್ಪಣ್ಣ, ಬಬ್ರುವಾಹನ, ಜೂಲಿ, ಜಯಸಿಂಹ, ಅಳಿಮಯ್ಯ, ಪೊಲೀಸ್ ಪವರ್ ಹೀಗೆ ಈ ಸಂಸ್ಥೆಯ ಚಿತ್ರಗಳ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಕನ್ನಡದ ಪ್ರತಿಷ್ಠಿತ ವಿತರಕರು ಆಗಿ ಇವರು ಹೆಸರು ಮಾಡಿದ್ದರು.
ಇದನ್ನೂ ಓದಿ: ನವರಂಗ್ ಥಿಯೇಟರ್ ಮಾಲೀಕ, ನಿರ್ಮಾಪಕ ಕೆಸಿಎನ್ ಮೋಹನ್ ವಿಧಿವಶ
ಬೆಂಗಳೂರಿನ ಪ್ರತಿಷ್ಠಿತ ಚಿತ್ರಮಂದಿರಗಳಲ್ಲಿ ಒಂದಾಗಿದ್ದ ನವರಂಗ್ ಚಿತ್ರದ ಮಾಲೀಕರು ಸಹ ಆಗಿದ್ದ ಕೆಸಿಎನ್ ಮೋಹನ್ ಅವರ ಕುಟುಂಬವೇ ಕನ್ನಡ ಚಿತ್ರರಂಗಕ್ಕೆ ಮಹತ್ತರ ಸೇವೆ ಸಲ್ಲಿಸಿದೆ. ಕೆಸಿಎನ್ ಮೋಹನ್ ಕನ್ನಡ ಚಲನಚಿತ್ರ ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುವಂತಹ ಹೆಸರು. ಅವರ ನಿಧನದಿಂದ ಚಿತ್ರರಂಗ ಒಬ್ಬ ಅಪರೂಪದ ನಿರ್ಮಾಪಕನನ್ನ ಕಳೆದುಕೊಂಡಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸಚಿವ ಶಿವರಾಜ್ ತಂಗಡಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.