ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ‌ಗೆ ಕಠಿಣವಾದ ಅಂತಿಮ ಕರಡು ನಿಯಮ ರೂಪಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ಎಸ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಶನಿ ಮತ್ತು ಚಂದ್ರನ ಸಂಯೋಗ: ಈ ರಾಶಿಯ ಜನರಿಗೆ ಹಣದ ಕೊರತೆಯಿಂದ ಎದುರಾಗಲಿದೆ ಬಹುದೊಡ್ಡ ಸಂಕಷ್ಟ!!


ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಸಚಿವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೈಗಾರಿಕೆ ಇಲಾಖೆ,‌ ಗೃಹ ಇಲಾಖೆ ಹಾಗೂ ಕಾನೂನು, ಶಾಲಾ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಗಳ ಜತೆ ಸಭೆ ನಡೆಸಿ ಈ ಸೂಚನೆ ನೀಡಿದ್ದಾರೆ.


ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ವನ್ನು ಸಮರ್ಪಕ ಅನುಷ್ಠಾನ ಆಗಲೇ ಬೇಕು. ಕೆಲವೆಡೆ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಆಗಿಲ್ಲ. ಹೀಗಾಗಿ ಕಠಿಣವಾದ ಕ್ರಮ ಆಗಬೇಕು. ಶೀಘ್ರವೇ ನಿಯಮಗಳ ಆದೇಶ ಹೊರಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಪೊಲೀಸರನ್ನೊಳಗೊಂಡ ಟಾಸ್ಕ್ ಫೋರ್ಸ್‌ ರಚನೆ, ಬಿಬಿಎಂಪಿ ವಲಯಗಳಲ್ಲಿ ಜಾಗೃತ ವಾಹನಗಳ ಬಳಕೆ, ರಾಜ್ಯಾದ್ಯಂತ ಸಾರ್ವಜನಿಕರಲ್ಲಿ ನಾಮ ಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಬಗ್ಗೆ ಜಾಗೃತಿ ಮೂಡಿಸಬೇಕು. ವಿಧೇಯಕ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಮಿತಿ ರಚನೆಯಾಗಬೇಕು ಎಂಬ ಸಭೆಯಲ್ಲಿ ಚರ್ಚೆ ನಡೆಸಲಾಯಿತು.


ಇದನ್ನೂ ಓದಿ: ತ್ರಿವಿಕ್ರಮ್‌ ಜೊತೆ ಭವ್ಯ ಮದುವೆ ಫಿಕ್ಸ್!? ಕೊನೆಗೂ ಉತ್ತರ ಕೊಟ್ರು ಬಿಗ್‌ಬಾಸ್‌ ರನ್ನರ್‌ಅಪ್!!‌


ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ್ ಬಿಳಿಮಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ನಿರ್ದೇಶಕರಾದ  ಡಾ.ಕೆ.ಧರಣಿದೇವಿ ಮಾಲಗತ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕಾನೂನು, ಕೈಗಾರಿಕೆ, ಕಾರ್ಮಿಕ ಇಲಾಖೆ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.