K Sudhakar: ರಾಜ್ಯದಲ್ಲಿ ಮತ್ತೆ 'ಲಾಕ್‌ಡೌನ್ ಎಚ್ಚರಿಕೆ' ನೀಡಿದ ಆರೋಗ್ಯ ಸಚಿವ!

ಕೊರೋನಾ ಎರಡನೆ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು.

Last Updated : Mar 24, 2021, 04:02 PM IST
  • ದಿನದಿಂದ ದಿನಕ್ಕೆ ಕೊರೋನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್
  • ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ
  • ಕೊರೋನಾ ಎರಡನೆ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು.
K Sudhakar: ರಾಜ್ಯದಲ್ಲಿ ಮತ್ತೆ 'ಲಾಕ್‌ಡೌನ್ ಎಚ್ಚರಿಕೆ' ನೀಡಿದ ಆರೋಗ್ಯ ಸಚಿವ! title=

ಬೆಂಗಳೂರು: ದಿನದಿಂದ ದಿನಕ್ಕೆ ಕೊರೋನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ ಕೊಟ್ಟಿದ್ದಾರೆ.

 

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್(Dr K Sudhakar), ಕೊರೋನಾ ಎರಡನೆ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಲಾಕ್‍ಡೌನ್ ಮಾಡಬೇಕೆಂಬ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ, ಅನಿವಾರ್ಯ ಪರಿಸ್ಥಿತಿ ನಿರ್ಮಾಣ ಮಾಡಬಾರದೆಂದು ಎಂದರು.

Vastu Tips : ದಾರಿಯಲ್ಲಿ ಹಣ ಸಿಕ್ಕಿದರೆ ಶುಭ ಫಲಾನಾ ? ಅಶುಭಾನಾ ?

ನಮಗೆ ಲಾಕ್ ಡೌನ್(Lockdown) ಮಾಡಿದರೆ ಖುಷಿ ಇಲ್ಲ. ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚಳವಾಗಿದ್ದು, ಹಲವು ನಗರಗಳಲ್ಲಿ ಮತ್ತೆ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ಜನರ ಸಹಕಾರ ಮುಖ್ಯ ಎಂದು ಹೇಳಿದರು.

HD Kumaraswamy: 'ಎಲ್ಲರ ಮನೆ ದೋಸೆ ತೂತೇ; ನಾನು ಒಂದು ಬಾರಿ ಎಡವಿದ್ದೆ'

ನಾನಾಗಲಿ, ಸಿಎಂ ಆಗಲಿ ಏನು ಮಾಡಬೇಕಾಗುತ್ತದೆ. ಸೋಂಕು(Coronavirus) ಹೆಚ್ಚಾದರೆ ನಮಗೆ ಬೇರೆ ಮಾರ್ಗ ಇಲ್ಲ ಲಾಕ್ ಡೌನ್ ಮಾಡಲಾಗುತ್ತದೆ. ಇನ್ನು ರಾಜ್ಯದಲ್ಲಿ ಮತ್ತೆ ಕಂಟೇನ್ಮೆಂಟ್ ಜೋನ್ ಜಾರಿ ಮಾಡುವ ಕುರಿತಂತೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಕರೋನಾ ಲಸಿಕೆ ಕೊರೆತೆಯಾಗದಂತೆ ಕ್ರಮ - ಸಚಿವ ಸುಧಾಕರ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News