ಬೆಂಗಳೂರು: ಬೆಂಗಳೂರು: ತೀವ್ರ ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ನಿಧನರಾಗಿದ್ದಾರೆ. ದಿಢೀರ್ ಹೃದಯಾಘಾತ ಉಂಟಾಗಿದ್ದರಿಂದ ಉಮೇಶ್ ಕತ್ತಿಯವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶರಾಗಿದ್ದಾರೆ.


COMMERCIAL BREAK
SCROLL TO CONTINUE READING

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಶಾಸಕ ಉಮೇಶ್ ಕತ್ತಿ ಅವರಿಗೆ ರಾತ್ರಿ 10.30ಕ್ಕೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದ ಬಾತ್‌ರೂಮ್‌ನಲ್ಲಿ ಅವರು ಕುಸಿದು ಬಿದ್ದಿದ್ದರು. ತಕ್ಷಣವೇ ಕುಟುಂಬಸ್ಥರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ಕತ್ತಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ತಜ್ಞ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.


ಇನ್ನು ಸಚಿವ ಉಮೇಶ್ ಕತ್ತಿಗೆ ಹೃದಯಾಘಾತವಾಗಿರೋ ಸುದ್ದಿ ತಿಳಿಯುತ್ತಿದ್ದಂತೆ ಅವರ ಕುಟುಂಬಸ್ಥರು ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ಸಹೋದರ ಮಾಜಿ ಸಂಸದ ರಮೇಶ್ ಕತ್ತಿ ಮತ್ತು ಕುಟುಂಬಸ್ಥರ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ರಾಮಯ್ಯ ಆಸ್ಪತ್ರೆಗೆ ಸಿಎಂ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಸುಧಾಕರ್ ಭೇಟಿ ನೀಡಿದ್ದಾರೆ.  


ಹಾರ್ಟ್‌ಗೆ ಸ್ಟಂಟ್ ಅಳವಡಿಸಲಾಗಿತ್ತು


ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ 2 ಬಾರಿ ಅವರಿಗೆ ಹಾರ್ಟ್ ಆಟ್ಯಾಕ್ ಆಗಿತ್ತು. ಈ ಹಿಂದೆ ಹೃದಯಾಘಾತವಾದಾಗ ಅವರ ಹಾರ್ಟ್‌ಗೆ ಸ್ಟಂಟ್ ಅಳವಡಿಸಲಾಗಿತ್ತು. ಇದೀಗ 3ನೇ ಬಾರಿಗೆ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದೆ.


ಸಿಎಂ ಆಗುವ ಕನಸು ಕಂಡಿದ್ದ ಉಮೇಶ್ ಕತ್ತಿ


ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕನಸು ಕಂಡಿದ್ದ ಸಚಿವ ಉಮೇಶ್ ಕತ್ತಿ ಮುಂದೊಂದು ದಿನ ನಾನು ಮುಖ್ಯಮಂತ್ರಿ ಆಗುತ್ತೇನೆ. ನಾನು ಬದುಕಿದ್ದರೆ, ನನ್ನ ಹಣೆಬರಹದಲ್ಲಿ ಬರೆದಿದ್ದರೆ ನಾನು ಸಿಎಂ ಆಗಿಯೇ ಆಗುತ್ತೇನೆಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಉಮೇಶ್ ಕತ್ತಿಯವರು ಹೃದಯಾಘಾತದಿಂದ ನಿಧನರಾಗಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.