“ಶೀಘ್ರವೇ ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸಿ”: ಸಚಿವ ಸೋಮಣ್ಣ ಖಡಕ್ ಸೂಚನೆ

ಚಂದ್ರಾ ಲೇಔಟ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿವೀಕ್ಷಿಸಿದರು. ಅರುಂಧತಿ ನಗರದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಸರ್ಕಾರಿ ಪ್ರಾಥಮಿಕ ಶಾಲೆ, ಗಂಗೊಂಡನಹಳ್ಳಿಯಲ್ಲಿ ಪ್ರಗತಿಯಲ್ಲಿರುವ ಸರ್ಕಾರಿ ಉರ್ದು ಶಾಲೆ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು ಶೀಘ್ರವೇ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Written by - Prashobh Devanahalli | Edited by - Bhavishya Shetty | Last Updated : Dec 6, 2022, 02:33 PM IST
    • ಪ್ರಗತಿಯಲ್ಲಿರುವ ವಿವಿಧ ಕಾಮಗಾರಿ ಸ್ಥಳಕ್ಕೆ ಭೇಟಿ‌ ನೀಡಿದ ಸಚಿವ
    • ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿಯ ಪರಿವೀಕ್ಷಣೆ
    • ಶೀಘ್ರವೇ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ
“ಶೀಘ್ರವೇ ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸಿ”: ಸಚಿವ ಸೋಮಣ್ಣ ಖಡಕ್ ಸೂಚನೆ title=
Minister V Somanna

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಬಾವಿ ವಾರ್ಡ್ ನಲ್ಲಿ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿ ಸ್ಥಳಕ್ಕೆ ಭೇಟಿ‌ ನೀಡಿದ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ವಿ .ಸೋಮಣ್ಣ ಪರಿವೀಕ್ಷಣೆ ನಡೆಸಿದರು.

ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್ 66ನೇ ಪರಿನಿಬ್ಬಾಣ: ನ್ಯಾಷನಲ್ ಕಾಲೇಜಿನಲ್ಲಿ ಬೃಹತ್ ಸಮಾವೇಶ

ಚಂದ್ರಾ ಲೇಔಟ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿವೀಕ್ಷಿಸಿದರು. ಅರುಂಧತಿ ನಗರದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಸರ್ಕಾರಿ ಪ್ರಾಥಮಿಕ ಶಾಲೆ, ಗಂಗೊಂಡನಹಳ್ಳಿಯಲ್ಲಿ ಪ್ರಗತಿಯಲ್ಲಿರುವ ಸರ್ಕಾರಿ ಉರ್ದು ಶಾಲೆ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು ಶೀಘ್ರವೇ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಮಾತನಾಡಿದ ಸಚಿವರು, ಮಧ್ಯಮವರ್ಗ ಮತ್ತು ಬಡವರ್ಗದ ಜನರ ಹಿತದೃಷ್ಟಿಯಿಂದ ಗೋವಿಂದರಾಜ ನಗರ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇವೆ. 70ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿದ್ದೇವೆ. ದೂರದ ಆಸ್ಪತ್ರೆಗೆ ತೆರಳುವ ಸ್ಥಿತಿ ಬರಬಾರದು ಎಂಬ ನಿಟ್ಟಿನಲ್ಲಿ 9 ವಾರ್ಡ್ ಗಳಲ್ಲೂ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಿದ್ದು ಸೂಕ್ತ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ಕ್ರಮ ವಹಿಸಲಾಗಿದೆ ಎಂದರು.

ಇದನ್ನೂ ಓದಿ:  ಗುಜರಾತ್ ಚುನಾವಣೆ ಕರ್ನಾಟಕ ಚುನಾವಣೆ ಮೇಲೂ ಪ್ರಭಾವ ಬೀರುತ್ತೆ- ಶಾಸಕ ಅರವಿಂದ್ ಬೆಲ್ಲದ್

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾರ್ಯವೂ ಸಹ ಪ್ರಗತಿಯಲ್ಲಿದೆ. ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಉರ್ದು ಶಾಲೆಯ ಕಾಮಗಾರಿಯೂ ಸಹ ಪ್ರಗತಿಯಲ್ಲಿದ್ದು ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಜನರ ಸಮಸ್ಯೆಗಳನ್ನು ಅರಿತು ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಾಗಿದೆ. ಕ್ಷೇತ್ರದ ಜನರ ಪ್ರೀತಿ, ವಿಶ್ವಾಸದಿಂದ ಗೋವಿಂದರಾಜನಗರ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News