ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ನಾನು ಅಪಾರವಾಗಿ ಗೌರವಿಸುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೋಮುವಾದಿ ಬಿಜೆಪಿ ವಿರುದ್ಧ ಹೋರಾಟ ಮಾಡಿಕೊಂಡು ಬಂದವರು. ಆದರೆ ಎಚ್.ಡಿ.ಕುಮಾರಸ್ವಾಮಿ ತಮ್ಮ ಸ್ವಾರ್ಥ ರಾಜಕಾರಣಕ್ಕೆ ಗೌಡರು ನಂಬಿ, ಪಾಲಿಸಿಕೊಂಡು ಬಂದ ತತ್ವ ಸಿದ್ಧಾಂತವನ್ನು ಬಲಿ ಕೊಟ್ಟಿದ್ದಾರೆ’ ಎಂದು ಟೀಕಿಸಿದ್ದಾರೆ.
ಮುಸ್ಲಿಂ ಸಮುದಾಯದ ಜತೆ ನಾನು ನಿಂತಿದ್ದೆ ಆದರೆ ಆ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲ ಎಂದು ಹೇಳುವ ಎಚ್. ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದಾರೆ? @hd_kumaraswamy ತಮ್ಮ ಹೇಳಿಕೆಯಿಂದ ನಾಡಿನ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. 1/4#BJP_JDS_Alliance
— B Z Zameer Ahmed Khan (@BZZameerAhmedK) September 24, 2023
ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳು ಸೇವೆ ನಡೆಸಿ ಆಕ್ರೋಶ ಹೊರಹಾಕಿದ ಕನ್ನಡಪರ ಸಂಘಟನೆಗಳು
ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಮತ ನೀಡಿರದಿದ್ದರೆ ತಾವು ಗೆಲ್ಲುತ್ತಿದ್ದರೆ ಎಂಬುದನ್ನು ಕುಮಾರಸ್ವಾಮಿ ಎದೆ ಮುಟ್ಟಿಕೊಂಡು ಹೇಳಲಿ.
ಎಚ್. ಡಿ. ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿ.ನಾ ಹಳ್ಳಿ ಸುರೇಶ್ ಬಾಬು, ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ ತಮಗೆ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ. 2/4#BJP_JDS_Alliance— B Z Zameer Ahmed Khan (@BZZameerAhmedK) September 24, 2023
‘ಮುಸ್ಲಿಂ ಸಮುದಾಯದ ಜೊತೆ ನಾನು ನಿಂತಿದ್ದೆ ಆದರೆ ಆ ಸಮುದಾಯ ಜೆಡಿಎಸ್ ಜೊತೆ ನಿಲ್ಲಲಿಲ್ಲ ಎಂದು ಹೇಳುವ ಎಚ್.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದಾರೆ? ಕುಮಾರಸ್ವಾಮಿಯವರು ತಮ್ಮ ಹೇಳಿಕೆಯಿಂದ ನಾಡಿನ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ’ ಎಂದು ಜಮೀರ್ ಅಹ್ಮದ್ ಕಿಡಿಕಾರಿದ್ದಾರೆ.
‘ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಮತ ನೀಡಿರದಿದ್ದರೆ ತಾವು ಗೆಲ್ಲುತ್ತಿದ್ದರೆ ಎಂಬುದನ್ನು ಕುಮಾರಸ್ವಾಮಿ ಎದೆ ಮುಟ್ಟಿಕೊಂಡು ಹೇಳಲಿ. ಎಚ್.ಡಿ.ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿ.ನಾ.ಹಳ್ಳಿ ಸುರೇಶ್ ಬಾಬು, ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ ತಮಗೆ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ’ ಎಂದು ಜಮೀರ್ ಅಹ್ಮದ್ ಸವಾಲು ಹಾಕಿದ್ದಾರೆ.
ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಗೆಲ್ಲಲಿಲ್ಲ, ಅಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ಮತ ಕೊಟ್ಟಿದ್ದಕ್ಕೆ ಗೆದ್ದಿದ್ದು ಇಲ್ಲದಿದ್ದರೆ ಸೋಲುತ್ತಿದ್ದರು.
ಮುಸ್ಲಿಂ ಸಮುದಾಯ ಜೆಡಿಎಸ್ ಗೆ ಮತ ಕೊಟ್ಟಿದ್ದಕ್ಕೆ 19 ಸ್ಥಾನ ಬಂದಿದೆ. ಇಲ್ಲದಿದ್ದರೆ 5 ರಿಂದ 6 ಸ್ಥಾನ ಬರುತ್ತಿತ್ತು. 3/4#BJP_JDS_Alliance
— B Z Zameer Ahmed Khan (@BZZameerAhmedK) September 24, 2023
ಇದನ್ನೂ ಓದಿ: ಗಂಗಾವತಿ ನಗರಸಭೆ ವ್ಯಾಪ್ತಿಗೆ ಹಳ್ಳಿಗಳನ್ನು ಸೇರಿಸಲು ಮುಂದಾದ ಜಿಲ್ಲಾಡಳಿತ, ಗ್ರಾಮಸ್ಥರ ಆಕ್ರೋಶ
ನಾನು ಅಪಾರವಾಗಿ ಗೌರವಿಸುವ
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಕೋಮುವಾದಿ ಬಿಜೆಪಿ ವಿರುದ್ಧ ಹೋರಾಟ ಮಾಡಿಕೊಂಡು ಬಂದವರು. ಆದರೆ ಕುಮಾರಸ್ವಾಮಿ ತಮ್ಮ ಸ್ವಾರ್ಥ ರಾಜಕಾರಣಕ್ಕೆ ಗೌಡರು ನಂಬಿ, ಪಾಲಿಸಿಕೊಂಡು ಬಂದ ತತ್ವ ಸಿದ್ಧಾಂತವನ್ನು ಬಲಿ ಕೊಟ್ಟಿದ್ದಾರೆ. 4/4#BJP_JDS_Alliance— B Z Zameer Ahmed Khan (@BZZameerAhmedK) September 24, 2023
‘ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಗೆಲ್ಲಲಿಲ್ಲ, ಅಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ಮತ ಕೊಟ್ಟಿದ್ದಕ್ಕೆ ಗೆದ್ದಿದ್ದು ಇಲ್ಲದಿದ್ದರೆ ಸೋಲುತ್ತಿದ್ದರು. ಮುಸ್ಲಿಂ ಸಮುದಾಯ ಜೆಡಿಎಸ್ ಗೆ ಮತ ಕೊಟ್ಟಿದ್ದಕ್ಕೆ 19 ಸ್ಥಾನ ಬಂದಿದೆ. ಇಲ್ಲದಿದ್ದರೆ 5 ರಿಂದ 6 ಸ್ಥಾನ ಬರುತ್ತಿತ್ತು’ ಎಂದು ಅವರು ಟೀಕಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.