ಭೂ ಕುಸಿತಕ್ಕೆ ಸಿಲುಕಿ ಅಗಲಿದವರಿಗಾಗಿ ಸಚಿವರ ಕಂಬನಿ; ಎಚ್ಚರಿಕೆ ವಹಿಸುವಂತೆ ಜನತೆಗೆ ಮನವಿ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಶಿರೂರು ಬಳಿ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಮೃತರೆಲ್ಲರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವರು ಶೋಕ ವ್ಯಕ್ತಪಡಿಸಿದ್ದಾರೆ.

Written by - Prashobh Devanahalli | Edited by - Manjunath N | Last Updated : Jul 17, 2024, 04:56 PM IST
  • ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ.
  • ಮೃತರೆಲ್ಲರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವರು ಶೋಕ ವ್ಯಕ್ತಪಡಿಸಿದ್ದಾರೆ.
ಭೂ ಕುಸಿತಕ್ಕೆ ಸಿಲುಕಿ ಅಗಲಿದವರಿಗಾಗಿ ಸಚಿವರ ಕಂಬನಿ; ಎಚ್ಚರಿಕೆ ವಹಿಸುವಂತೆ ಜನತೆಗೆ ಮನವಿ title=

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಬದಿಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಬಲಿಯಾದವರಿಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಈಗಾಗಲೇ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಜತೆ ದೂರವಾಣಿಯಲ್ಲಿ ಮಾತನಾಡಿ; ಪರಿಹಾರ ಕಾರ್ಯ, ಮೃತರ ಕುಟುಂಬಗಳಿಗೆ ನೆರವು ಇತ್ಯಾದಿ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇನ್ನೂ ಹಲವೆಡೆ ಭೂಕುಸಿತವಾಗುವ ಆತಂಕವಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಖಾಸಗಿ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ 

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಶಿರೂರು ಬಳಿ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಮೃತರೆಲ್ಲರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವರು ಶೋಕ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿ ಬದಿ ಸಣ್ಣಪುಟ್ಟ ಗೂಡಂಗಡಿ, ಹೋಟೆಲ್ ಇಟ್ಟುಕೊಂಡು ಬದುಕು ಕಟ್ಟಿಕೊಂಡಿರುವ ಜನತೆಯಲ್ಲಿ ಕಳಕಳಿಯ ಮನವಿ ಮಾಡಿರುವ ಸಚಿವ ಕುಮಾರಸ್ವಾಮಿ ಅವರು; ಮಳೆಗಾಲ, ಇನ್ನಿತರೆ ಅಪಾಯಕಾರಿ ಸಂದರ್ಭಗಳಲ್ಲಿ ಭೂ ಕುಸಿತದ ಬಗ್ಗೆ ಬಹಳ ಎಚ್ಚರಿಕೆ ವಹಿಸಬೇಕು. ರಸ್ತೆಬದಿ ಗುಡ್ಡಗಳ ಕೆಳಗೆ ವಾಸಿಸುವ, ಸಣ್ಣಪುಟ್ಟ ವ್ಯಾಪಾರ ಮಾಡಿಕೊಳ್ಳುವವರು ಆದಷ್ಟು  ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News