ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ  ಮತ್ತಷ್ಟು ಉತ್ತೇಜನ ನೀಡಿ ಉದ್ಯೋಗಗಳ ಸೃಷ್ಟಿಗೆ ಒತ್ತು ನೀಡಿರುವ  ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ಸುಮಾರು 6,825ಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಸೃಷ್ಟಿಸುವ 2,689.51 ಕೋಟಿ ರೂ. ವೆಚ್ಚದ 81 ಹೊಸ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದೆ.


COMMERCIAL BREAK
SCROLL TO CONTINUE READING

ಕರ್ನಾಟಕ ಉದ್ಯೋಗಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್.ನಿರಾಣಿ ನೇತೃತ್ವದಲ್ಲಿ ನಡೆದ 132ನೇ ರಾಜ್ಯಮಟ್ಟದ ಏಕಗವಾಕ್ಷಿ ತೆರವು ಸಮಿತಿ(SLSWCC) ಸಭೆಯು ಈ ಯೋಜನೆಗಳಿಗೆ ಅನುಮೋದನೆ ನೀಡಿದೆ.


ಇದನ್ನೂ ಓದಿ: ಅಗ್ನಿಪಥ್ ಯೋಜನೆ: ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? – ಸಿದ್ದರಾಮಯ್ಯ


ಸಮಿತಿಯು 50 ಕೋಟಿ ರೂ.ಗಿಂತ ಹೆಚ್ಚಿನ ಹೂಡಿಕೆಯ 7 ಪ್ರಮುಖ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕಾ ಯೋಜನೆಗಳನ್ನು ಪರಿಗಣಿಸಿ ಅನುಮೋದನೆ ನೀಡಿದೆ. 1,229.43 ರೂ. ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 1,734 ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.


ಅಲ್ಲದೆ 132ನೇ SLSWCC ಸಭೆಯಲ್ಲಿ 15 ಕೋಟಿ ರೂ.ಗಿಂತ ಹೆಚ್ಚು ಹಾಗೂ 50 ಕೋಟಿ ರೂ.ಗಿಂತ ಕಡಿಮೆ ಹೂಡಿಕೆಯ 71 ಹೊಸ ಯೋಜನೆಗಳಿಗೆ ಅನುಮತಿ ನೀಡಲಾಗಿದೆ ಹಾಗೂ 1,308.06 ಕೋಟಿ ರೂ. ವೆಚ್ಚದ ಈ ಯೋಜನೆಗಳು ರಾಜ್ಯದಲ್ಲಿ 5,091 ಜನರಿಗೆ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪೊಲೀಸರ ಭರ್ಜರಿ ಕಾರ್ಯಾಚರಣೆ: 650 ಕೆಜಿ ರಕ್ತಚಂದನ ವಶಕ್ಕೆ


151.42 ಕೋಟಿ ರೂ. ಹೂಡಿಕೆಯ 3 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 2,689.51 ಕೋಟಿ ರೂ.ಗಳ ಹೂಡಿಕೆಯೊಂದಿಗೆ 6,825 ಜನರಿಗೆ ಉದ್ಯೋಗಾವಕಾಶವಿರುವ ಒಟ್ಟು 81 ಯೋಜನೆಗಳಿಗೆ ಅನುಮತಿ ನೀಡಲಾಗಿದೆ.


ಅನುಮೋದನೆ ನೀಡಿರುವ ಪ್ರಸ್ತಾವನೆಗಳು:


  • ಪರ್ಪಲ್‍ಸ್ಟಾರ್ ಹೈಜೀನ್ ಪ್ರೈವೇಟ್ ಲಿಮಿಟೆಡ್ - 270 ಕೋಟಿ ರೂ. ಹೂಡಿಕೆ, 400 ಉದ್ಯೋಗ  

  • ಬೆಳಗಾವಿ ಶುಗರ್ಸ್ ಪ್ರೈವೇಟ್ ಲಿ. - 240.84 ಕೋಟಿ ರೂ. ಹೂಡಿಕೆ, 170 ಉದ್ಯೋಗ

  • ಪರತ್ಪರ  ಕಾಫಿ ಲಿಮಿಟೆಡ್ - 236.8 ಕೋಟಿ ರೂ. ಹೂಡಿಕೆ, 200 ಉದ್ಯೋಗ

  • ಲಾಜಿಕಲಿ ಇನ್ಫೋಮೀಡಿಯಾ ಪ್ರೈವೇಟ್ ಲಿಮಿಟೆಡ್- 228.19 ಕೋಟಿ ರೂ. ಹೂಡಿಕೆ, 614 ಉದ್ಯೋಗ

  • ಎಎನ್‍ಎಸ್ ಪೇಪರ್ ಪ್ರೈವೇಟ್ ಲಿಮಿಟೆಡ್ - 100 ಕೋಟಿ ರೂ. ಹೂಡಿಕೆ, 100 ಮಂದಿಗೆ ಉದ್ಯೋಗ

  • ಗೋದಾವತ್ ಪುಡ್ ಪ್ರೋ ಪ್ರೈವೇಟ್ ಲಿಮಿಟೆಡ್ - 98.60 ಕೋಟಿ ರೂ. ಹೂಡಿಕೆ, 30 ಉದ್ಯೋಗ  

  • ಜ್ಯೋತಿಸ್ನಾ ಲೈ-ಹೈಟೆಕ್ ಪ್ರೈವೇಟ್ ಲಿಮಿಟೆಡ್-  50 ಕೋಟಿ ರೂ. ಹೂಡಿಕೆ, 220 ಉದ್ಯೋಗ 


ಈ ಹಿಂದೆ ಸಚಿವ ಮುರುಗೇಶ್ ನಿರಾಣಿ ನೇತೃತ್ವದ SLSWCC 2022ರ ಏಪ್ರಿಲ್ 30ರಂದು ನಡೆದ 131ನೇ ಸಭೆಯಲ್ಲಿ 8,575 ಜನರಿಗೆ ಉದ್ಯೋಗಾವಕಾಶದೊಂದಿಗೆ 2,465.94 ಕೋಟಿ ರೂ. ವೆಚ್ಚದ 60 ಕೈಗಾರಿಕಾ ಯೋಜನೆಗಳಿಗೆ ಅನುಮತಿ ನೀಡಿತ್ತು.


ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ  ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇವಿ ರಮಣರೆಡ್ಡಿ, ಕೈಗಾರಿಕಾ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಎನ್ ಶಿವಶಂಕರ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.