Chamarajanagar: ಅಪ್ರಾಪ್ತ ಬಾಲಕಿ ಅಪಹರಿಸಿ ವಿವಾಹ; ಅಪರಾಧಿಗೆ 20 ವರ್ಷ ಶಿಕ್ಷೆ
ಕಾನೂನು ಸೇವಾ ಪ್ರಾಧಿಕಾರದಿಂದ ನೊಂದ ಬಾಲಕಿಗೆ ಪರಿಹಾರದ ರೂಪದಲ್ಲಿ 5 ಲಕ್ಷ ರೂ. ಹಣವನ್ನು 1 ತಿಂಗಳೊಳಗೆ ನೀಡುವಂತೆ ತೀರ್ಪು ನೀಡಿದ್ದಾರೆ.
ಚಾಮರಾಜನಗರ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿಕೊಂಡು ಮದುವೆಯಾಗಿ ದೈಹಿಕ ಸಂಬಂಧ ಬೆಳೆಸಿದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಚಾಮರಾಜನಗರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಇದನ್ನೂ ಓದಿ: ಹುಣಸೂರಿನಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 6 ಮಂದಿ ದುರ್ಮರಣ
ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿ ಗ್ರಾಮದ ಮಹೇಶ್(28) ಶಿಕ್ಷೆಗೆ ಗುರಿಯಾದ ಅಪರಾಧಿ. ಕಳೆದ 2019ರ ಮಾರ್ಚ್ 17ರಂದು 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿಕೊಂಡು ಮದುವೆಯಾಗಿ ನಂತರ ಬೆಂಗಳೂರಿಗೆ ತೆರಳಿ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ನಡೆಸಿದ ಆರೋಪ ದೃಢಪಟ್ಟತ್ತು. ಈ ಹಿನ್ನೆಲೆ ವಿಚಾರಣೆ ನಡೆದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಆರೋಪಿತ ವ್ಯಕ್ತಿಗೆ ಪೋಕ್ಸೋ ಕಾಯ್ದೆ ಕಲಂ 6ರ ಅನ್ವಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶಿಸದ್ದಾರೆ.
ಇದನ್ನೂ ಓದಿ: Congress vs BJP: ಬಿಜೆಪಿ-ಕಾಂಗ್ರೆಸ್ ನಡುವೆ ‘ಗೂಂಡಾಗಿರಿ’ ಜಟಾಪಟಿ..!
ಇದಲ್ಲದೆ ಆರೋಪಿಗೆ 35 ಸಾವಿರ ರೂ. ದಂಡ ವಿಧಿಸಿದ್ದು, ಕಾನೂನು ಸೇವಾ ಪ್ರಾಧಿಕಾರದಿಂದ ನೊಂದ ಬಾಲಕಿಗೆ ಪರಿಹಾರದ ರೂಪದಲ್ಲಿ 5 ಲಕ್ಷ ರೂ. ಹಣವನ್ನು 1 ತಿಂಗಳೊಳಗೆ ನೀಡುವಂತೆ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್ ವಾದ ಮಂಡಿಸಿದ್ದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.