ಸಮ್ಮಿಶ್ರ ಸರ್ಕಾರದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರುವುದು ಸಹಜ: ಎಂ.ಬಿ. ಪಾಟೀಲ್

ನಾನು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್  ಜಾರಕಿಹೊಳಿ ಸಹೋದರರ ಸಂಪರ್ಕದಲ್ಲಿದ್ದೇವೆ. ಯಾವುದೇ ತೊಂದರೆ ಇಲ್ಲ- ಮಾಜಿ ಸಚಿವ ಎಂ.ಬಿ. ಪಾಟೀಲ್

Updated: Sep 13, 2018 , 03:04 PM IST
ಸಮ್ಮಿಶ್ರ ಸರ್ಕಾರದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರುವುದು ಸಹಜ: ಎಂ.ಬಿ. ಪಾಟೀಲ್
File Pic

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿರುವುದು ಸಹಜ. ಆದರೆ ಇದರಿಂದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರ ನಡುವೆ ಅಸಮಾಧಾನ ಮೂಡಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಂ.ಬಿ. ಪಾಟೀಲ್, ಸಮ್ಮಿಶ್ರ ಸರ್ಕಾರದಲ್ಲಿ ಸಣ್ಣ ಪುಟ್ಟ ಭಿನ್ನಾಪ್ರಾಯವಿರುವುದು ಸಹಜ, ಅದನ್ನು ನಮ್ಮ ಪಕ್ಷದ ನಾಯಕರು ಬಗೆಹರಿಸುತ್ತಾರೆ. ನಾನು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್  ಜಾರಕಿಹೊಳಿ ಸಹೋದರರ ಸಂಪರ್ಕದಲ್ಲಿದ್ದೇವೆ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದರು.

ಸೆಪ್ಟೆಂಬರ್ ಮೂರನೇ ವಾರದಲ್ಲಿ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಯಿದ್ದು. ಎಲ್ಲಾ ಶಾಸಕರು ಸಚಿವರಾಗೋದಕ್ಕೆ ಅರ್ಹರಾಗಿದ್ದಾರೆ, ಆದರೆ ಯಾರು ಸಚಿವರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಪಾಟೀಲ್ ಹೇಳಿದರು.