ಧಾರವಾಡ : ರಾಜ್ಯಾದ್ಯಂತ ಅನಧಿಕೃತ ಸಮೀಕ್ಷೆಗಳು ನಡೆದು ಅಲ್ಪಸಂಖ್ಯಾತರ  ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ   ಮಾತನಾಡುತ್ತಿದ್ದ ಅವರು ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ಈಗಾಗಲೇ ರಾಜ್ಯ ಚುನಾವಣೆ ಆಯೋಗ ಈ ಬಗ್ಗೆ ಗಮನ ಹರಿಸಿದೆ. ಚುನಾವಣಾ ಆಯೋಗದ ನೇತೃತ್ವದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಈ ಕುರಿತು  ಭಾರತ ಮತ್ತು ರಾಜ್ಯ  ಚುನಾವಣಾ ಆಯೋಗ ಕಾಳಜಿ ವಹಿಸಿದೆ.  ಈ ರೀತಿಯ ದೂರುಗಳು ಬಂದಲ್ಲಿ ಅಧಿಕಾರಿಗಳಿಂದ ತನಿಖೆ ಮಾಡಿಸಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.  ಅನಧಿಕೃತವಾಗಿ ಮತದಾರರನ್ನು ಸೇರಿಸುವ ಕೆಲಸವೂ ಆಗಿದೆ. ಎರಡು ಕಡೆಗಳಲ್ಲಿ ಮತದಾರರ ಚೀಟಿ ಹೊಂದಿರುವವರೂ ಇದ್ದಾರೆ ಎಂದು ಇದೇ ವೇಳೆ ಅವರು ಹೇಳಿದ್ದಾರೆ. ಹೀಗೆ ಎರಡೆರಡು ಕಡೆಗಳಲ್ಲಿ ವೋಟರ್ ಐಡಿ  ಹೊಂದಿರುವವರ ಹೆಸರು ತೆಗೆಯುವ ಕೆಲಸವನ್ನು  ಆಯೋಗ ಮಾಡಬೇಕು ಎಂದು ಹೇಳಿದ್ದಾರೆ. ಅಧಿಕೃತ ಜನರಿಗೆ ಮತದಾನದ ಹಕ್ಕು ಇರಲೇಬೇಕು. ಇದರ ಮೇಲ್ವಿಚಾರಣೆ ಮಾಡುವ ಕೆಲಸ ಚುನಾವಣಾ ಆಯೋಗ ಮಾಡಬೇಕು ಎಂದಿದ್ದಾರೆ.  


ಇದನ್ನೂ ಓದಿ : ಸಿಲಿಕಾನ್ ಸಿಟಿಯಲ್ಲಿ ತಗ್ಗಿದ ಟ್ರಾಫಿಕ್: ಸಂಚಾರ ಪೊಲೀಸರಿಗೆ ಹರಿದು ಬಂತು ಧನ್ಯವಾದಗಳ ಮಹಾಪೂರ


ಕನ್ನಡಿಗನ ಮೇಲೆ ಹಲ್ಲೆ: ತನಿಖೆಗೆ ಆದೇಶ :
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಹಲ್ಲೆಯಾಗಿರುವ ಬಗ್ಗೆ ಕೂಡಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ತನಿಖೆ ಕೈಗೊಳ್ಳಲು ಪೋಲಿಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಪ್ರಕರಣದ ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದೇ ವೇಳೆ  ಪೊಲೀಸರು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸತ್ಯಾಸತ್ಯತೆಯನ್ನು ತಿಳಿದುಕೊಂಡು ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂಡು ಹೇಳಿದ್ದಾರೆ. 


ಇದನ್ನೂ ಓದಿ 2022-23ನೇ ಸಾಲಿನಲ್ಲಿ ರಾಜ್ಯದ 10 ಜಿಲ್ಲೆಗಳಲ್ಲಿ ಪದವಿ ಪೂರ್ವ ವಸತಿ ಶಾಲೆ ಮಂಜೂರು ಮಾಡಿ ಸರ್ಕಾರದ ಆದೇಶ


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.