ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ : ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

Written by - Zee Kannada News Desk | Last Updated : Dec 2, 2021, 03:16 AM IST
  • ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಗಾಗಿ ಅರ್ಜಿ ಸ್ವೀಕರಿಸುವ ದಿನಾಂಕವನ್ನು ಡಿ. 31 ರವರೆಗೆ ವಿಸ್ತರಿಸಿದೆ.
ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ : ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ  title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಗಾಗಿ ಅರ್ಜಿ ಸ್ವೀಕರಿಸುವ ದಿನಾಂಕವನ್ನು ಡಿ. 31 ರವರೆಗೆ ವಿಸ್ತರಿಸಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಪ್ರಾಮಾಣಿಕರಾಗಿದ್ದರೆ ಭ್ರಷ್ಟ ರಾಜ್ಯ ಸರ್ಕಾರವನ್ನು ವಜಾ ಮಾಡಲಿ: ಸಿದ್ದರಾಮಯ್ಯ

ಈ ಮೊದಲು ಅರ್ಜಿ ಸಲ್ಲಿಸಲು ನ.30 ವರೆಗೆ ಕೊನೆಯ ದಿನಾಂಕವಾಗಿತ್ತು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿಕೊಂಡ ಕಾರಣ ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.31 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: "ಇಮ್ಮಡಿ ಪುಲಿಕೇಶಿಯ ಮೂರ್ತಿಯನ್ನು ಸ್ಥಾಪಿಸಬೇಕೆಂಬ ಆಂದೋಲನಕ್ಕೆ ನನ್ನ ಪೂರ್ಣ ಬೆಂಬಲ ಇದೆ."

ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಅರ್ಜಿಯನ್ನು sevasindhu.karnataka.nic.in  ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿ ದೂರವಾಣಿ ಸಂಖ್ಯೆ: 08192-250022 ಅನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News