)
Dr BR Ambedkar photo Buddha statue: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಹಾಗೂ ಭಗವಾನ್ ಬುದ್ಧರ ಪುತ್ಥಳಿಯನ್ನು ಭಗ್ನಗೊಳಿಸಿ ವಿಕೃತಿ ಮೆರೆದ ಘಟನೆ ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರದಲ್ಲಿ ಶುಕ್ರವಾರ (ಅ.24) ನಡೆದಿದೆ.
ಜ್ಯೋತಿಗೌಡನಪುರದಲ್ಲಿ ಪ್ರತಿಷ್ಠಾಪಿಸಿದ್ದ ಬುದ್ಧನ ವಿಗ್ರಹಗಳನ್ನು ಭಗ್ಮಗೊಳಿಸಿ ವಿವಿಧೆಡೆ ಅಳವಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಫ್ಲೆಕ್ಸ್ ಹಾಗೂ ಫೋಟೋಗಳನ್ನು ಹರಿದು ಹಾಕಲಾಗಿದೆ.
ದುಷ್ಕರ್ಮಿಗಳ ಕೃತ್ಯದ ವಿರುದ್ದ ಗ್ರಾಮಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಕೂಡಲೇ ಬಂಧಿಸಬೇಕೆಂದು ರಸ್ತೆ ತಡೆದು ಧರಣಿ ನಡೆಸಿದ ಗ್ರಾಮಸ್ಥರು, ಗ್ರಾಮದಲ್ಲಿ ಶಾಂತಿ ಭಂಗಕ್ಕೆ ಯತ್ನಿಸಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಕೊಡಬೇಕೆಂದು ಆಗ್ರಹಿಸಿದ್ದಾರೆ.
ಗ್ರಾಮಕ್ಕೆ ಎಸ್ಪಿ ಡಾ.ಬಿ.ಟಿ.ಕವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳಕ್ಕೆ ಬೆರಳಚ್ಚು ಮತ್ತು ಶ್ವಾನದಳ ಭೇಟಿ ಕೊಟ್ಟಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು
ನಿಯೋಜನೆ ಮಾಡಲಾಗಿದೆ.