ಬೆಂಗಳೂರು :ನಗರದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಲ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಅಧಿಕಾರ ದುರ್ಬಳಿಕೆ ಆರೋಪಕ್ಕೆ ಕೈ ಸರ್ಕಾರ ಗುರಿಯಾಗಿದೆ.ಮಂಗಳವಾರ ಬೆಳಿಗ್ಗೆ ಶಾಂಗ್ರಿಲಾ ಹೋಟೆಲ್ ನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುರಜೆವಾಲ ಪಾಲ್ಗೊಂಡಿದ್ದು, ಅಧಿಕಾರಿಗಳ ಸಭೆಯಲ್ಲಿ ಸುರ್ಜೆವಾಲಾ ಅವರಿಗೆ ಏನು ಕೆಲಸ? ಎಂದು ವಿಪಕ್ಷಗಳು ಕೆಂಡ ಕಾರುತ್ತಿವೆ.
ಬಿಜೆಪಿ ಗರಂ :
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ #ATMSarkara ದ ಗೌಪ್ಯ ಸಭೆಯ ರಹಸ್ಯವೇನು...?ರಾಜ್ಯ ಸರಕಾರದೊಟ್ಟಿಗಾಗಲಿ, ಬಿಬಿಎಂಪಿ ಒಟ್ಟಿಗಾಗಲಿ ಯಾವುದೇ ರೀತಿಯ ಅಧಿಕೃತ ಸಂಬಂಧವಿರದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲರಿಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ..? ಇದು 85% ಡೀಲ್ ಫಿಕ್ಸಿಂಗ್ ಸಭೆಯೇ..? ಉತ್ತರಿಸಿ ಮಾನ್ಯ @siddaramaiah, @DKShivakumar ಅವರೇ... ಎಂದು ಟ್ವೀಟ್ ಮಾಡಿ ಪ್ರಶ್ನಿಸಿವೆ.
ಬಿಬಿಎಂಪಿ ಚುನಾವಣೆಗೆ ಸಂಗ್ರಹ ಮಾಡಲು ಸೂಚಿಸಿದ್ದಾರೆಯೇ? :ಯತ್ನಾಳ್ ಪ್ರಶ್ನೆ
ಇದು ಯಾವ ಸಭೆ? ಕಾಂಗ್ರೆಸ್ ಪಕ್ಷದ ಉಸ್ತುವಾರಿ ನಡೆಸುವ ಸಭೆಯಲ್ಲಿ ಕರ್ನಾಟಕದ ಐಎಎಸ್ ಅಧಿಕಾರಿಗಳಿಗೆ ಏನು ಕೆಲಸ? ಬಿಬಿಎಂಪಿ ಚುನಾವಣೆಗೆ ಸಂಗ್ರಹ ಮಾಡಲು ಸೂಚಿಸಿದ್ದಾರೆಯೇ? ಬಿಬಿಎಂಪಿ ವಾರ್ಡ್ ಮರುವಿಂಗಡಣೆಯನ್ನು ಸುರ್ಜೆವಾಲರವರ ನೇತೃತ್ವದಲ್ಲಿ ಮಾಡುತ್ತಿದ್ದೀರಾ? ಇಂತಹ ಸಭೆಗಳಲ್ಲಿ ಯಾವ ಅನುಮತಿಯೊಂದಿಗೆ ಈ ಅಧಿಕಾರಿಗಳು ಪಾಲ್ಗೊಂಡಿದ್ದಾರೆ? ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿ ಕಾಂಗ್ರೆಸ್ ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಇದು ಯಾವ ಸಭೆ?
ಕಾಂಗ್ರೆಸ್ ಪಕ್ಷದ ಉಸ್ತುವಾರಿ ನಡೆಸುವ ಸಭೆಯಲ್ಲಿ ಕರ್ನಾಟಕದ ಐಎಎಸ್ ಅಧಿಕಾರಿಗಳಿಗೆ ಏನು ಕೆಲಸ?
ಬಿಬಿಎಂಪಿ ಚುನಾವಣೆಗೆ ಸಂಗ್ರಹ ಮಾಡಲು ಸೂಚಿಸಿದ್ದಾರೆಯೇ?
ಬಿಬಿಎಂಪಿ ವಾರ್ಡ್ ಮರುವಿಂಗಡಣೆಯನ್ನು ಸುರ್ಜೆವಾಲರವರ ನೇತೃತ್ವದಲ್ಲಿ ಮಾಡುತ್ತಿದ್ದೀರಾ?
ಇಂತಹ ಸಭೆಗಳಲ್ಲಿ ಯಾವ ಅನುಮತಿಯೊಂದಿಗೆ ಈ ಅಧಿಕಾರಿಗಳು… pic.twitter.com/Q8RJ8uj4ht
— Basanagouda R Patil (Yatnal) (@BasanagoudaBJP) June 13, 2023
ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ?? ಕುಮಾರಸ್ವಾಮಿ ಪ್ರಶ್ನೆ
ರಾಜ್ಯದಲ್ಲಿರುವುದು ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ?? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ.ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ.
ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಂದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು?
ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ! ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ!! ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು, ಎಂದು ಸರಣಿ ಟ್ವೀಟ್ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.