ರಾಮನಗರ ರಕ್ಷಿಸದಿದ್ದರೆ ಬೀದಿಗಿಳಿಯುವೆ ಎಂದು ಎಚ್ಚರಿಕೆ ನೀಡಿದ ಶಾಸಕಿ ಅನಿತಾ ಕುಮಾರಸ್ವಾಮಿ

ತಕ್ಷಣವೇ ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರನ್ನು ಬೇರೆಡೆಗೆ ಸ್ಥಳಾಂತರಿಸಿ ರಾಮನಗರ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು- ಶಾಸಕಿ ಅನಿತಾ ಕುಮಾರಸ್ವಾಮಿ

Last Updated : Apr 24, 2020, 02:26 PM IST
ರಾಮನಗರ ರಕ್ಷಿಸದಿದ್ದರೆ ಬೀದಿಗಿಳಿಯುವೆ ಎಂದು ಎಚ್ಚರಿಕೆ ನೀಡಿದ ಶಾಸಕಿ ಅನಿತಾ ಕುಮಾರಸ್ವಾಮಿ  title=
Image courtesy: Facebook

ಬೆಂಗಳೂರು: ಇಲ್ಲಿನ ಪಾದರಾಯನಪುರದ ಗಲಭೆಕೋರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ  ಅಪರಾಧವೆಸಗಿದೆ  ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಾಸಕಿ ಅನಿತಾ ಕುಮಾರಸ್ವಾಮಿ (Anitha Kumaraswamy) ತಕ್ಷಣವೇ ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರನ್ನು ಬೇರೆಡೆಗೆ ಸ್ಥಳಾಂತರಿಸಿ  ರಾಮನಗರ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಲಾಕ್​ಡೌನ್ ಸಡಿಲಿಕೆ ಇಲ್ಲ, ತುರ್ತು ಇದ್ದರೆ ಮಾತ್ರ ಅನುಮತಿ: ಸಚಿವ ಸೋಮಶೇಖರ್

ಜಾಣಕಿವುಡು  ಪ್ರದರ್ಶಿಸಿದ ರಾಜ್ಯಸರ್ಕಾರ ಕರೋನ ಸೋಂಕನ್ನು ಜಿಲ್ಲೆಗೆ ಹಂಚಿದ್ದು ಸರೀನಾ ? ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರವಿದೆ ಎಂದು ಆರೋಪಿಸಿರುವ ಶಾಸಕಿ ಅನಿತಾ ಕುಮಾರಸ್ವಾಮಿ ಉಪಮುಖ್ಯಮಂತ್ರಿ  ಹಾಗೂ ವೈದ್ಯರೂ ಆಗಿರುವ   ಜಿಲ್ಲಾ ಉಸ್ತುವಾರಿ ಸಚಿವ  ಡಾಕ್ಟರ್ ಸಿ.ಎನ್. ಅಶ್ವಥ್ ನಾರಾಯಣ (Dr CN Ashwathnarayana) ಅವರು ಹಾರಿಕೆಯ ಹೇಳಿಕೆಗಳನ್ನು ನೀಡುವ ಬದಲು ಜಿಲ್ಲೆಯ ಜನತೆಯೊಂದಿಗೆ ಚೆಲ್ಲಾಟವಾಡುವುದನ್ನು ಬಿಟ್ಟು  ಜವಾಬ್ದಾರಿತನದಿಂದ ವರ್ತಿಸಲಿ. ವಾಸ್ತವ ಸ್ಥಿತಿಯನ್ನು ಅರಿತು ಪ್ರತಿಕ್ರಿಯಿಸಲಿ ಎಂದು ಕಿಡಿಕಾರಿದ್ದಾರೆ.

ಕಳ್ಳಭಟ್ಟಿ ದಂಧೆ ವಿರುದ್ಧ 21 ಪ್ರಕರಣ ದಾಖಲು

ರಾಮನಗರ ಜೈಲಿನಲ್ಲಿ ಇರಿಸಲಾದ  ಕೈದಿಗಳಲ್ಲಿ ಇಬ್ಬರಿಗೆ ಮಾತ್ರವಲ್ಲದೆ ಇತರ ಕೆಲವರಿಗೂ  ಕರೋನಾವೈರಸ್ (Coronavirus)  ಹಬ್ಬಿರುವ ಮಾಹಿತಿ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿರುವ ಅನಿತಾ ಕುಮಾರಸ್ವಾಮಿ ಸರ್ಕಾರ ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಂಡು ರಾಮನಗರ  ಮರ್ವಾಡಿ ಕೈದಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಜಿಲ್ಲೆಯಾದ್ಯಂತ ಕೋವಿಡ್-19 (Covid-19)  ಸೋಂಕು ಹರಡದಂತೆ ಅಗತ್ಯ  ವೈದ್ಯಕೀಯ ಮುನ್ನೆಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಜನರ ಆರೋಗ್ಯ ಕಾಪಾಡಿಕೊಳ್ಳಲು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.

Trending News