ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ಶಾಸಕ ಅರವಿಂದ ಲಿಂಬಾವಳಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಮತ್ತು ಕೃಷಿ ಪರವಾದ ಆಡಳಿತವನ್ನು ಗಮನಿಸಿ ಜನರು ಬಿಜೆಪಿ(BJP) ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.


'SSLC, PUC ವಿದ್ಯಾರ್ಥಿಗಳಿಗೆ 'ಗುಡ್ ನ್ಯೂಸ್' ನೀಡಿದ ಸಚಿವ ಸುರೇಶ್ ಕುಮಾರ್!


ಪಂಚಾಯತಿಗಳಿಗೆ ಇದೀಗ ನೇರವಾಗಿ ಗರಿಷ್ಠ ಅನುದಾನ ಲಭಿಸುತ್ತಿದೆ. ಇದರ ಸದ್ಬಳಕೆಗಾಗಿ ಜನರು ಬಿಜೆಪಿಯ ಬೆಂಬಲಿತರನ್ನೇ ಆಯ್ಕೆ ಮಾಡಲಿದ್ದಾರೆ ಎಂದರು.


'ಬಿಜೆಪಿ ಜತೆ ಜೆಡಿಎಸ್ ಹೊಂದಾಣಿಕೆಯಾದ್ರೆ ಪಕ್ಷ ತೊರೆಯುತ್ತೇನೆ'


ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25ನ್ನು ಬಿಜೆಪಿ, ರೈತರ ದಿನವಾಗಿ ಆಚರಿಸಲಿದೆ. ಪ್ರತಿ ಹೋಬಳಿಗಳಲ್ಲಿ ರೈತರ ಸಮಾವೇಶಗಳನ್ನು ಆಯೋಜಿಸಲಾಗುವುದು. ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾಯ್ದೆಗಳ ಕುರಿತು ಜನಜಾಗೃತಿ ಮೂಡಿಸಲಾಗುವುದು. ಅದೇದಿನ ಪ್ರಧಾನಿ ನರೇಂದ್ರ ಮೋದಿ ಅವರು 9 ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ 2,000 ರೂಪಾಯಿಯನ್ನು ಬಿಡುಗಡೆ ಮಾಡಿ, ದೇಶದ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದರು.


Voter ID Lis t: ಗ್ರಾ. ಪಂ. ಚುನಾವಣೆ: ನಿಮ್ಮೂರಿನ ವೋಟರ್ ಲಿಸ್ಟ್ ನೋಡೋದು ಹೇಗೆ ಗೊತ್ತಾ?