ಯಡಿಯೂರಪ್ಪ ಮಹಾಭ್ರಷ್ಟ, ವಿದೇಶದಲ್ಲಿ ಸಾಕಷ್ಟು ಆಸ್ತಿ ಮಾಡಿದ್ದಾನೆ: ಯತ್ನಾಳ್‌ ಆಕ್ರೋಶ

ಮೂರು ತಿಂಗಳಿಗೊಮ್ಮೆ ಅಪ್ಪ-ಮಕ್ಕಳು ಏಕೆ ದುಬೈಗೆ ಹೋಗುತ್ತಾರೆ ಅಂತಾ ಯೋಚಿಸಿದ್ದೀರಾ? ವಿದೇಶದಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿ ಮಾಡಿದವರಿಗೆ ನೈತಿಕತೆ ಇಲ್ಲವೆಂದು ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Puttaraj K Alur | Last Updated : Apr 7, 2025, 06:19 PM IST
  • ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಹಾಭ್ರಷ್ಟ, ವಿದೇಶದಲ್ಲಿ ಸಾಕಷ್ಟು ಆಸ್ತಿ ಮಾಡಿದ್ದಾನೆ
  • ಯಡಿಯೂರಪ್ಪ ಕುಟುಂಬ ಬಿಜೆಪಿಯಿಂದ ಹೊರ ಬರುವವರೆಗೂ ನಾವು ಬಿಜೆಪಿಗೆ ಮರಳಿ ಹೋಗುವುದಿಲ್ಲ
  • ಯಡಿಯೂರಪ್ಪನ ಫೋಟೊ ಹಾಕಿದರೆ ವೋಟ್ ಹಾಕುವ ಕಾಲ ಹೋಯಿತು ಎಂದ ಯತ್ನಾಳ್
ಯಡಿಯೂರಪ್ಪ ಮಹಾಭ್ರಷ್ಟ, ವಿದೇಶದಲ್ಲಿ ಸಾಕಷ್ಟು ಆಸ್ತಿ ಮಾಡಿದ್ದಾನೆ: ಯತ್ನಾಳ್‌ ಆಕ್ರೋಶ

Basangouda Patil Yatnal: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಹಾಭ್ರಷ್ಟ, ವಿದೇಶದಲ್ಲಿ ಸಾಕಷ್ಟು ಆಸ್ತಿ ಮಾಡಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮನ ಸಮಾಧಿಗೆ ಗೌರವನಮನ ಅರ್ಪಿಸಿ ಸುದ್ದಿಗಾರರ ಜೊತೆಗೆ ಮಾತನಾಡಿ ಅವರು ಯಡಿಯೂರಪ್ಪ ವಿರುದ್ಧ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

Add Zee News as a Preferred Source

ಯಡಿಯೂರಪ್ಪನ ಫೋಟೊ ಹಾಕಿದರೆ ವೋಟ್ ಹಾಕುವ ಕಾಲ ಹೋಯಿತು. ಯಡಿಯೂರಪ್ಪ ಕುಟುಂಬ ಬಿಜೆಪಿಯಿಂದ ಹೊರ ಬರುವವರೆಗೂ ನಾವು ಬಿಜೆಪಿಗೆ ಮರಳಿ ಹೋಗುವುದಿಲ್ಲ. ಅವರನ್ನು ಮುಖ್ಯಮಂತ್ರಿ ಮಾಡಲು ನಾವು ಬರಬೇಕೆ? ಎಂದು ಯತ್ನಾಳ್‌ ಕಿಡಿಕಾರಿದರು.  

ಇದನ್ನೂ ಓದಿ: ಸುದ್ದಿಗೋಷ್ಠಿಯಲ್ಲಿ ಯತ್ನಾಳ್‌ ಸ್ಫೋಟಕ ಹೇಳಿಕೆ..!

ಯಡಿಯೂರಪ್ಪ ಲಿಂಗಾಯತ ಎನ್ನುವುದನ್ನು ಮೊದಲು ಸಾಬೀತು ಮಾಡಲಿ. ಕೊರೊನಾ ಕಾಲದಲ್ಲಿ ಕೋಟಿ ಕೋಟಿ ಲೂಟಿ ಮಾಡಿದ್ದಾರೆ. ಮೂರು ತಿಂಗಳಿಗೊಮ್ಮೆ ಅಪ್ಪ-ಮಕ್ಕಳು ಏಕೆ ದುಬೈಗೆ ಹೋಗುತ್ತಾರೆ ಅಂತಾ ಯೋಚಿಸಿದ್ದೀರಾ? ವಿದೇಶದಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿ ಮಾಡಿದವರಿಗೆ ನೈತಿಕತೆ ಇಲ್ಲ ಎಂದರು.

ವಿದೇಶದಲ್ಲಿ ತಮ್ಮದು ಆಸ್ತಿ ಇಲ್ಲವೆಂದು ಖಾತ್ರಿಯಾಗಿ ಹೇಳಲು ಸಾಧ್ಯವೇ? ಬ್ಯಾಂಕುಗಳಲ್ಲಿ ಕೋಟ್ಯಂತರ ಹಣ ಇಟ್ಟಿಲ್ಲವೆಂದು ಯಡಿಯೂರಪ್ಪ ಮತ್ತು ವಿಜಯೇಂದ್ರ ಇಬ್ಬರೂ ಸೇರಿ ಯಡಿಯೂರು ಸಿದ್ದಲಿಂಗೇಶ್ವರ ಬಳಿ ಹೋಗಿ ಆಣೆ ಮಾಡಲಿ ಅಂತಾ ಯತ್ನಾಳ್‌ ಸವಾಲು ಹಾಕಿದರು.

ಇದನ್ನೂ ಓದಿ: ವಿದ್ಯುತ್​​​​ ದೀಪಗಳಿಂದ ಕಂಗೊಳಿಸಲಿದೆ ಶಕ್ತಿ ಕೇಂದ್ರ

ನಾನು ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ಶುರು ಮಾಡಿದ್ದೇನೆ. ಎಲ್ಲಾ ಕಡೆಯೂ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಹುಬ್ಬಳ್ಳಿಯಲ್ಲಿ ಸಾಕಷ್ಟು ಜನರು ಸೇರಿದ್ದರು. ನನ್ನ ನಾಯಕತ್ವಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದಾರೆ. ಅದೇ ಸಮಾವೇಶಕ್ಕೆ ಒಬ್ಬ ಶಿಸ್ತು ಸಮಿತಿ ವ್ಯಕ್ತಿ ಸಹ ಬಂದಿದ್ದರು. ಏನು ನಡೆಯಿತು, ಜನರು ಏನು ಇಷ್ಟಪಡುತ್ತಿದ್ದಾರೆ ಎಂಬುದನ್ನು ಆ ವ್ಯಕ್ತಿ ಬಿಜೆಪಿ ಹೈಕಮಾಂಡ್‌ಗೆ ಹೇಳಬೇಕುʼ ಅಂತಾ ಯತ್ನಾಳ್‌ ಈ ವೇಳೆ ತಿಳಿಸಿದರು.

ಯತ್ನಾಳ್ ಮರಳಿ ಸೇರಿಸಿಕೊಳ್ಳದಿದ್ದರೆ ಹೋರಾಟ!!

ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತ ಪಂಚಮಸಾಲಿ ಸಮಾಜದ ಬಹುದೊಡ್ಡ ಶಕ್ತಿ. ಆ ಶಕ್ತಿಯನ್ನ ಹತ್ತಿಕ್ಕಲು ಯಾರಿಂದಲೂ ಆಗದು. ಕೇಂದ್ರ ಬಿಜೆಪಿ ನಾಯಕರು ಕೂಡಲೇ ಯತ್ನಾಲ್ ಅವರನ್ನ ಗೌರವಯುತವಾಗಿ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಇಲ್ಲವಾದರೆ ಮೇ 11ಕ್ಕೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.ವ

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News