ಲಕ್ಷ್ಮೀ ಹೆಬ್ಬಾಳ್ಕರ್‌ ಮೆದುಳು, ಹೃದಯ ಯಾರ ಬಳಿ ಇದೆಯೋ ಗೊತ್ತಿಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ‌

ಇಡೀ ರಾಜ್ಯದಲ್ಲಿ ಎಲ್ಲಾ ಕಡೆಯಿಂದಲೂ ನನಗೆ ಬೆಂಬಲ ಸಿಗುತ್ತಿದೆ. ನಾನು ಹೊಸ ಪಕ್ಷ ಕಟ್ಟಿದರೆ ಪರೋಕ್ಷವಾಗಿ ಕಾಂಗ್ರೆಸ್‌ಗೆ ಅನುಕೂಲ ಆಗುತ್ತದೆ. ಹೀಗಾಗಿ ಆ ಬಗ್ಗೆ ಯೋಚನೆ ಮಾಡುತ್ತಿದ್ದೇನೆ ಎಂದು ಯತ್ನಾಳ್‌ ಹೇಳಿದ್ದಾರೆ.

Written by - Puttaraj K Alur | Last Updated : Apr 7, 2025, 07:06 PM IST
  • ಲಕ್ಷ್ಮೀ ಹೆಬ್ಬಾಳ್ಕರ್‌ ಮಿದುಳು ಯಾರ ಬಳಿ ಇದೆ, ಹೃದಯ ಯಾರ ಬಳಿ ಇದೆಯೋ ನಮಗೂ ಗೊತ್ತಿಲ್ಲ
  • ನಾನು ಇನ್ನೇನಾದ್ರೂ ಬಾಯಿ ಬಿಟ್ಟರೆ ಇನ್ನು ಬಹಳ ಮುಂದಕ್ಕೆ ಹೋಗಿ ಹೇಳಬೇಕಾಗುತ್ತದೆ
  • ಹಂದಿಗಳ ಬಗ್ಗೆ‌ ನಾನು ಮಾತನಾಡುವುದಿಲ್ಲವೆಂದು ತಿರುಗೇಟು ನೀಡಿದ ಬಸನಗೌಡ ಪಾಟೀಲ್‌ ಯತ್ನಾಳ್
ಲಕ್ಷ್ಮೀ ಹೆಬ್ಬಾಳ್ಕರ್‌ ಮೆದುಳು, ಹೃದಯ ಯಾರ ಬಳಿ ಇದೆಯೋ ಗೊತ್ತಿಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ‌

Basangouda Patil Yatnal: ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಮಿದುಳು ಯಾರ ಬಳಿ ಇದೆ, ಹೃದಯ ಯಾರ ಬಳಿ ಇದೆಯೋ ನಮಗೂ ಗೊತ್ತಿಲ್ಲ. ನಾನು ಇನ್ನೇನಾದ್ರೂ ಬಾಯಿ ಬಿಟ್ಟರೆ ಇನ್ನು ಬಹಳ ಮುಂದಕ್ಕೆ ಹೋಗಿ ಹೇಳಬೇಕಾಗುತ್ತದೆ ಅಂತಾ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. 

Add Zee News as a Preferred Source

ಯತ್ನಾಳ್ ಮಿದುಳಿಗೂ ನಾಲಿಗೆಗೂ ಲಿಂಕ್ ಇಲ್ಲವೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದರು. ಅವರ ಈ ಹೇಳಿಕೆಗೆ ಯತ್ನಾಳ್‌ ಖಾರವಾಗಿಯೇ ತಿರುಗೇಟು ನೀಡಿದ್ದಾರೆ. ಇದೇ ಲಕ್ಷ್ಮೀ ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರನ್ನು ಪೊಲೀಸರಿಂದ ಹೊಡೆಸಿದ್ದರು. ಈಗ ಸ್ವಾಮೀಜಿ ಅವರು ಯತ್ನಾಳ ಪರ ನಿಂತಿದ್ದು ನೋವಾಗಿದೆ ಅಂತಾ ಹೇಳಿಕೆ ನೀಡಿದ್ದಾರೆ. ಅಷ್ಟೊಂದು ನೋವಾಗಿದ್ದರೆ ಅಮೃಂತಾಂಜನ್ ಕೊಡಲೇ, ಜಂಡೂಬಾಂಬ್ ಕೊಡಲೇ? ಆಗ ಸ್ವಾಮೀಜಿ ಅವರನ್ನು ಬಳಸಿಕೊಂಡರು. ಈಗ ಅದೇ ಸ್ವಾಮೀಜಿ ಅವರಿಂದ ಬ್ಯಾನಿ ಆಗುತ್ತಿದೆಯೇ?' ಎಂದು ಯತ್ನಾಳ್‌ ಹಾಸ್ಯವಾಗಿ ಪಶ್ನಿಸಿದರು.

ಇದನ್ನೂ ಓದಿ: ವಕ್ಫ್ (ತಿದ್ದುಪಡಿ) ಮಸೂದೆ 2025 ಗೆ ರಾಷ್ಟ್ರಪತಿ ಮುರ್ಮು ಅಂಕಿತ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ!

ಮಂತ್ರಿ ಸ್ಥಾನಕ್ಕಾಗಿ ಲಾಬಿ ಮಾಡಲು ಕೂಡಲಸಂಗಮ ಸ್ವಾಮೀಜಿ ಅವರನ್ನ ಯಾರು ದೆಹಲಿಗೆ ಕರೆದುಕೊಂಡು ಹೋಗಿದ್ದರು ಎಂಬುದು ಗೊತ್ತಿದೆ. ನಾನು ಒಮ್ಮೆಯೂ ಇಂತಹ ಕೆಲಸ ಮಾಡಿಲ್ಲ. ನನ್ನ ರಾಜಕೀಯ ಭವಿಷ್ಯದಲ್ಲಿ ಕೂಡಲಸಂಗಮ ಸ್ವಾಮೀಜಿಯವರನ್ನು ಉಪಯೋಗ ಮಾಡಿಕೊಂಡಿಲ್ಲವೆಂದು ಯತ್ನಾಳ್‌ ಹೇಳಿದ್ದಾರೆ.

ನಮ್ಮದು ಹಾಗೂ ಕೂಡಲಸಂಗಮ ಸ್ವಾಮೀಜಿಯವರದು ಮೀಸಲಾತಿ ಹೋರಾಟದ ಸಂಬಂಧ. ಲಕ್ಷ್ಮೀ ಹೆಬ್ಬಾಳ್ಳ‌ರ್, ವಿನಯ ಕುಲಕರ್ಣಿ ಸಹ ಉಪಯೋಗ ಮಾಡಿಕೊಂಡಿದ್ದಾರೆ. ಕೂಡಲಸಂಗಮ ಸ್ವಾಮೀಜಿ ಅವರನ್ನೇ ಬದಲಾವಣೆ ಮಾಡುತ್ತೇನೆಂದು ಹೇಳಿದ ಹಂದಿಗಳ ಬಗ್ಗೆ ನನ್ನ ಬಳಿ ಪ್ರಶ್ನೆ ಮಾಡಬೇಡಿ ಅಂತಾ ವಿಜಯಾನಂದ್ ಕಾಶಪ್ಪನವರ್ ಹೇಳಿಕೆಗೆ ತಿರುಗೇಟು ನೀಡಿದರು.

ಇದನ್ನೂ ಓದಿ: ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ:: ಬಿಜೆಪಿ ನಾಯಕರ ಆರೋಪಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು!!

ʼಇಡೀ ರಾಜ್ಯದಲ್ಲಿ ಎಲ್ಲಾ ಕಡೆಯಿಂದಲೂ ನನಗೆ ಬೆಂಬಲ ಸಿಗುತ್ತಿದೆ. ನಾನು ಹೊಸ ಪಕ್ಷ ಕಟ್ಟಿದರೆ ಪರೋಕ್ಷವಾಗಿ ಕಾಂಗ್ರೆಸ್‌ಗೆ ಅನುಕೂಲ ಆಗುತ್ತದೆ. ಹೀಗಾಗಿ ಆ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನಾನು ಕಾಂಗ್ರೆಸ್‌ನವರಿಂದಲೇ ಹಣ ಪಡೆದು ಪಕ್ಷ ಕಟ್ಟಿದ್ದೇನೆ ಅನ್ನೋ ಆರೋಪವೂ ಬರಬಹುದು ಎಂದು ಇದೇ ವೇಳೆ ಯತ್ನಾಳ್‌ ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News