ಬೆಳಗಾವಿ: ಅತಿಥಿ ಉಪನ್ಯಾಸಕರು ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಧರಣಿ ನಡೆಸುತ್ತಿದ್ದ ವೇಳೆ ಅಸ್ವಸ್ಥಗೊಂಡ ಅತಿಥಿ ಉಪನ್ಯಾಸಕಿಗೆ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಮಾತ್ರವಲ್ಲ ಆ ಶಿಕ್ಷಕಿಯನ್ನು ಖುದ್ದು ತಾವೇ ಬೆಳಗಾವಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಕರ್ತವ್ಯ ಪ್ರಜ್ಞೆಯ ಜೊತೆಗೆ ಮಾನವೀಯತೆ ಮರೆದಿದ್ದಾರೆ.
ಬೆಳಗಾವಿಯಲ್ಲಿ ಮಂಗಳವಾರ 154ನೇ ವಿಧಾನಪರಿಷತ್ ಅಧಿವೇಶನ ನಡೆಯುತ್ತಿದ್ದ ವೇಳೆ ಸುವರ್ಣ ವಿಧಾನ ಸೌಧದ ಮುಂಭಾಗ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದಾರೆ. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾವಿರಾರು ಸಂಖ್ಯೆಯಲ್ಲಿ ಸೇರಿ ಧರಣಿ ನಡೆಸುತ್ತಿದ್ದರು.
ಇದನ್ನೂ ಓದಿ : ದಿಢೀರ್ನೆ ಕುಸಿತಗೊಂಡ ಶುಂಠಿ ಬೆಲೆ
ಆ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಭೇಟಿ ನೀಡಿದ್ದಾರೆ. ಈ ವೇಳೆ ಪ್ರತಿಭಟನಾ ನಿರತರ ಮನವಿಯನ್ನು ಸ್ವೀಕರಿಸಿದ ಸರ್ಜಿ ಅವರು, ಅತಿಥಿ ಉಪನ್ಯಾಸಕರ ಗೌರವ ಧನವನ್ನು ಹೆಚ್ಚಳ ಮಾಡುವಂತೆ ಈಗಾಗಲೇ ಅಧಿವೇಶನದಲ್ಲಿ ಚರ್ಚೆ ಮಾಡಲಾಗಿದೆ. ಈ ಸಂಬಂದ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಜೊತೆ ಸಭೆ ಕೂಡಾ ನಡೆಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಅತಿಥಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಧರಣಿ ನಿರತರನ್ನು ಕುರಿತು ಮಾತನಾಡುವ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕಿಯೊಬ್ಬರು ದಿಢೀರನೇ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಡಾ.ಧನಂಜಯ ಸರ್ಜಿ ಅವರು ಸ್ಥಳದ್ಲಲೇ ಪ್ರಥಮ ಚಿಕಿತ್ಸೆ ನೀಡಿ, ಖುದ್ದು ತಾವೇ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಕರ್ತವ್ಯ ಪ್ರಜ್ಞೆ ಮರೆದರು.
ಇದನ್ನೂ ಓದಿ : ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.